ಮೈಸೂರು: ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಹುಟ್ಟುಹಬ್ಬ ಹಾಗೂ 'ಜೇಮ್ಸ್' ಚಿತ್ರ ಬಿಡುಗಡೆಯಾದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಅಭಿಮಾನಿಗಳು ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ. ಈ ಸಂದರ್ಭದಲ್ಲಿ ಅಪ್ಪು ಅಭಿಮಾನಿಯೊಬ್ಬ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ನಂಜನಗೂಡು ತಾಲೂಕಿನ ಹೆಡಿಯಾಲ ಗ್ರಾಮದಲ್ಲಿ ಗುರುವಾರ ನಡೆದಿದೆ.
ನಂಜನಗೂಡು ತಾಲೂಕಿನ ಹೆಡಿಯಾಲ ಗ್ರಾಮದ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಂಜುಳಾ ಎಂಬುವರ ಮಗ ಆಕಾಶ್ (22) ಹೃದಯಾಘಾತದಿಂದ ಮೃತಪಟ್ಟ ಅಭಿಮಾನಿ. ನಿನ್ನೆ ಪುನೀತ್ ರಾಜ್‍ಕುಮಾರ್ ಹುಟ್ಟುಹಬ್ಬ ಹಾಗೂ ಜೇಮ್ಸ್ ಸಿನಿಮಾ ಬಿಡುಗಡೆಯಾಗಿದ್ದರಿಂದ ಗ್ರಾಮದಲ್ಲಿ ಅದ್ಧೂರಿಯಾಗಿ ಸಂಭ್ರಮಾಚರಣೆ ಮಾಡಲಾಗುತ್ತಿತ್ತು. ಈ ಸಂದರ್ಭದಲ್ಲೇ ಆಕಾಶ್ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ.
ಪುನೀತ್ ರಾಜ್‍ಕುಮಾರ್ ಕೆಲವು ತಿಂಗಳುಗಳ ಹಿಂದೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಈಗ ಅಭಿಮಾನಿಯೂ ಕೂಡ ಹೃದಯಾಘಾತದಿಂದಲೇ ಮೃತಪಟ್ಟಿರುವುದರಿಂದ ಗ್ರಾಮದಲ್ಲಿ ಮೌನ ಆವರಿಸಿದೆ.
ಇದನ್ನೂ ಓದಿ: ದುರ್ಯೋಧನನಂತೆ ಸರೋವರದಲ್ಲಿ ಅವಿತುಕೊಂಡ ರೌಡಿ.. ಭೀಮನಂತೆ ಹೊರ ಕರೆತಂದ ‘ಡ್ರೋನ್’