ಮೈಸೂರು: ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರು ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ದೇವಿ ದರ್ಶನ ಪಡೆದರು.
ಬಿಗ್‌ಬಾಸ್ ಡಾಲ್ ಎಂದೇ ಖ್ಯಾತಿಗಳಿಸಿದ ನಿವೇದಿತಗೌಡ ಹಾಗೂ ಗಾಯಕ ಚಂದನ್ ಶೆಟ್ಟಿ ಅವರ ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸಲು ಮೈಸೂರಿಗೆ ಆಗಮಿಸಿದ್ದ ಅಪ್ಪು, ಚಾಮುಂಡಿಬೆಟ್ಟಕ್ಕೆ ತೆರಳಿ ದೇವಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.
ಫೆ. 28 ರಂದು ರಾಜ್ಯಾದಾದ್ಯಂತ ತೆರೆ ಕಾಣುತ್ತಿರುವ ‘ಮಯಾಬಜಾರ್’ ಯಶಸ್ವಿಯಾಗಲಿ ಎಂದು ಪ್ರಾರ್ಥಿಸಿದರು. ದೇವಸ್ಥಾನದಿಂದ ಆಚೆ ಬಂದ ನಂತರ ಅಭಿಮಾನಿಗಳ ಜೊತೆ ಸೆಲ್ಫಿಗೆ ಫೋಸ್ ಕೊಟ್ಟು ಖುಷಿಪಟ್ಟರು.