ETV Bharat / state

ವಿದೇಶದಿಂದ ಬಂದವರು ಕಡ್ಡಾಯವಾಗಿ ಕ್ವಾರಂಟೈನ್​ನಲ್ಲಿರಬೇಕು : ಡಿಸಿ ಕಟ್ಟಪ್ಪಣೆ - ಕ್ವ

ವಿದೇಶದಿಂದ ಹಾಗೂ ಹೊರ ರಾಜ್ಯಗಳಿಂದ ಮೈಸೂರು ಜಿಲ್ಲೆಗೆ ಆಗಮಿಸುವ ಪ್ರತಿಯೊಬ್ಬರಿಗೂ ಜಿಲ್ಲಾಡಳಿತದಿಂದ ಕೋವಿಡ್ ಆಸ್ಪತ್ರೆ ಅಥವಾ ನಗರದ ಖಾಸಗಿ ಹೋಟೆಲ್ ನಲ್ಲಿ ಕ್ವಾರಂಟೈನ್​ನಲ್ಲಿ ಇಡಲು ಸೂಚಿಸಲಾಗಿದೆ.

ಮೈಸೂರು ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್
ಮೈಸೂರು ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್
author img

By

Published : May 11, 2020, 3:18 PM IST

ಮೈಸೂರು: ವಿದೇಶದಿಂದ ನಗರಕ್ಕೆ ಬರುವ ಎಲ್ಲರಿಗೂ ಕಡ್ಡಾಯವಾಗಿ ಕ್ವಾರಂಟೈನ್​ನಲ್ಲಿಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಮೈಸೂರು ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ತಿಳಿಸಿದ್ದಾರೆ.

ವಿದೇಶದಿಂದ ಹಾಗೂ ಹೊರ ರಾಜ್ಯಗಳಿಂದ ಮೈಸೂರು ಜಿಲ್ಲೆಗೆ ಆಗಮಿಸುವ ಪ್ರತಿಯೊಬ್ಬರಿಗೂ ಜಿಲ್ಲಾಡಳಿತದ ವತಿಯಿಂದ ಕೋವಿಡ್ ಆಸ್ಪತ್ರೆ ಅಥವಾ ನಗರದ ಖಾಸಗಿ ಹೋಟೆಲ್ ನಲ್ಲಿ ಕ್ವಾರಂಟೈನ್​ನಲ್ಲಿ ಇಡಲು ಸೂಚಿಸಲಾಗಿದೆ. ಇದಕ್ಕಾಗಿ ಮೈಸೂರು ನಗರದಲ್ಲಿ 10 ಹೋಟೆಲ್​ಗಳನ್ನು ಬಾಡಿಗೆ ಪಡೆಯಲಾಗಿದ್ದು, ಹೋಟೆಲ್​ನಲ್ಲಿ ಇರುವವರು ಅವರೇ ರೂಮ್ ಬಾಡಿಗೆ ನೀಡಬೇಕು, ವಿದೇಶದಿಂದ ಬಂದವರನ್ನು ಮನೆಯಲ್ಲಿ ಕ್ವಾರಂಟೈನ್ ಮಾಡಲು ಅವಕಾಶ ಇಲ್ಲ ಎಂದಿದ್ದಾರೆ.

268 ಮಂದಿ ಕ್ವಾರಂಟೈನ್: ಹೊರ ರಾಜ್ಯಗಳಿಂದ ಮೈಸೂರು ಜಿಲ್ಲೆಗೆ ಆಗಮಿಸಿರುವ ಸುಮಾರು 268 ಮಂದಿ ಕ್ವಾರಂಟೈನ್​ನಲ್ಲಿದ್ದಾರೆ. ಇಂದಿನಿಂದ ವಿದೇಶಗಳಿಂದ ಮೈಸೂರು ಜಿಲ್ಲೆಗೆ ಎಷ್ಟು ಜನ ಆಗಮಿಸುತ್ತಾರೆ ಎಂಬ ಬಗ್ಗೆ ಇಂದು ಮಾಹಿತಿ ತಿಳಿಯಲಿದೆ. ಈ ಹಿನ್ನೆಲೆಯಲ್ಲಿ ಅಗತ್ಯ ಮುಂಜಾಗ್ರತಾ ಕ್ರಮವನ್ನು ಕೈಗೊಳ್ಳಲಾಗಿದ್ದು , ಕೋವಿಡ್ ಆಸ್ಪತ್ರೆ ಜೊತೆಗೆ ಹೋಟೆಲ್​ಗಳನ್ನೂ ಈಗಾಗಲೇ ಬಾಡಿಗೆಗೆ ಪಡೆಯಲಾಗಿದೆ ಎಂದು ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳು ಮಾಹಿತಿ ನೀಡಿದರು.

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.