ETV Bharat / state

ಸೆ 30 ರಂದು ರಾಹುಲ್ ಗಾಂಧಿ ಜೊತೆ ಆದಿವಾಸಿಗಳ ಸಂವಾದ .. ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್ ಧ್ರುವನಾರಾಯಣ

author img

By

Published : Sep 11, 2022, 8:30 PM IST

Updated : Sep 11, 2022, 8:41 PM IST

ಗುಂಡ್ಲುಪೇಟೆಯಲ್ಲಿ ರಾಹುಲ್ ಗಾಂಧಿ ಅವರನ್ನು ಸ್ವಾಗತಿಸಲು 20 ಸಾವಿರ ಜನರನ್ನು ಸೇರಿಸಲಾಗುವುದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್ ಧ್ರುವನಾರಾಯಣ್​ ಅವರು ಹೇಳಿದರು.

ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್ ಧ್ರುವನಾರಾಯಣ
ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್ ಧ್ರುವನಾರಾಯಣ

ಮೈಸೂರು: ಭಾರತ ಜೋಡೋ ಯಾತ್ರೆಯು ಸೆ. 30ರಂದು ಗುಂಡ್ಲುಪೇಟೆ ಮೂಲಕ ರಾಜ್ಯ ಪ್ರವೇಶಿಸಲಿದೆ. ಈ ವೇಳೆ ಮೈಸೂರು, ಕೊಡಗು ಮತ್ತು ಚಾಮರಾಜನಗರ ಜಿಲ್ಲೆಗಳ ಆದಿವಾಸಿ ಜನರೊಂದಿಗೆ ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ ಸಂವಾದ ನಡೆಸಲಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್ ಧ್ರುವನಾರಾಯಣ ಹೇಳಿದರು.

ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್ ಧ್ರುವನಾರಾಯಣ ಅವರು ಮಾತನಾಡಿದರು

ಇಂದಿರಾ ಗಾಂಧಿ ಕಾಂಗ್ರೆಸ್ ಭವನದಲ್ಲಿ ನಡೆದ ಸಭೆಯಲ್ಲಿಂದು ಮಾತನಾಡಿದ ಅವರು, ಸೆ. 18ರ ಕಾರ್ಯಕರ್ತರ ಸಭೆ ಮತ್ತು ಸೆ. 30ರ ರಾಹುಲ್ ಗಾಂಧಿ ಭಾರತ್ ಜೋಡೋ ಪಾದಯಾತ್ರೆ ಸಿದ್ಧತೆ ಸಭೆಯಲ್ಲಿ ಅವರು ಮಾತನಾಡಿದರು. ರಾಹುಲ್ ಗಾಂಧಿ ಅವರು ಸೆ. 30ರಂದು ಬೆಳಗ್ಗೆ 9.30 ಕ್ಕೆ ಊಟಿ, ಗುಡ್ಲೂರು ಮಾರ್ಗವಾಗಿ ಚಾಮರಾಜನಗರ ಜಿಲ್ಲೆ ಪ್ರವೇಶ ಮಾಡಲಿದ್ದಾರೆ.

ಬೇಗೂರು ಕ್ರಾಸ್‌ನಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಇಲ್ಲಿ ಮೂಲ ನಿವಾಸಿಗಳಾದ ಜೇನು ಕುರುಬರು, ಸೋಲಿಗರೊಂದಿಗೆ ಸಂವಾದ ನಡೆಸಲಿದ್ದಾರೆ. ಚಾಮರಾಜನಗರ ಆಸ್ಪತ್ರೆಯಲ್ಲಿ ಆಕ್ಸಿಜನ್ ದುರಂತದಲ್ಲಿ ಮೃತಪಟ್ಟ ಕುಟುಂಬಗಳೊಂದಿಗೆ ಸಂವಾದ ನಡೆಸಲಿದ್ದಾರೆ. ಗುಂಡ್ಲುಪೇಟೆಯಲ್ಲಿ ರಾಹುಲ್ ಗಾಂಧಿ ಅವರನ್ನು ಸ್ವಾಗತಿಸಲು 20 ಸಾವಿರ ಜನರನ್ನು ಸೇರಿಸಲಾಗುವುದು ಎಂದರು.

ಸೆ. 1 ರಂದು ನಂಜನಗೂಡು ತಾಲೂಕಿನ ಕಳಲೆ ಗೇಟ್‌ಗೆ ಮಧ್ಯಾಹ್ನ ತಲುಪಲಿದ್ದಾರೆ. ತಾಂಡವಪುರದಲ್ಲಿ ವಾಸ್ತವ್ಯ ಹೂಡಲಿದ್ದಾರೆ. ವಾಸ್ತವ್ಯಕ್ಕೂ ಮುನ್ನ ಕಾರ್ನರ್ ಮೀಟಿಂಗ್​ನಲ್ಲಿ ರಾಹುಲ್ ಗಾಂಧಿ ಭಾಗವಹಿಸಲಿದ್ದಾರೆ. ಮೈಸೂರು ಜಿಲ್ಲೆಯಲ್ಲಿ ಯಾರೊಂದಿಗೆ ಸಂವಾದ ನಡೆಸಬೇಕು ಎಂಬುದನ್ನು ಸೆ. 18ರ ಸಭೆ ಬಳಿಕ ನಿರ್ಧರಿಸಲಾಗುವುದು ಎಂದು ಹೇಳಿದರು.

ತಾಂತ್ರಿಕ ತಂಡ ನಿರ್ಧರಿಸಲಿದೆ: ನಂಜನಗೂಡು ತಾಲೂಕಿನ ಬದನವಾಳು ಗ್ರಾಮದಲ್ಲಿ ಅ. 2ರಂದು ಗಾಂಧಿ ಜಯಂತಿಯಲ್ಲಿ ಭಾಗವಹಿಸಲಿದ್ದಾರೆ. ನಂಜನಗೂಡು ದೇವಸ್ಥಾನಕ್ಕೆ ಭೇಟಿ ನೀಡುವವರು ದೊಡ್ಡಕೆರೆ ಮೈದಾನದಲ್ಲಿ ವಾಸ್ತವ್ಯ ಹೂಡಲಿದ್ದಾರೆ. ನಗರದ ಯಾವ ರಸ್ತೆಯಲ್ಲಿ ಪಾದಯಾತ್ರೆ ನಡೆಸಬೇಕು ಎಂಬುದನ್ನು ರಾಹುಲ್ ಗಾಂಧಿ ಅವರ ತಾಂತ್ರಿಕ ತಂಡ ನಿರ್ಧರಿಸಲಿದೆ ಎಂದು ಹೇಳಿದರು.

ಪ್ರತಿದಿನದ ಪಾದಯಾತ್ರೆಯಲ್ಲಿ 10 ಕ್ಷೇತ್ರಗಳ ಕಾರ್ಯಕರ್ತರು ಪಾಲ್ಗೊಳ್ಳಬೇಕು. ಮುಂಜಾನೆ ಕನಿಷ್ಠ 2 ಸಾವಿರ ಜನರನ್ನು ಸೇರಿಸಬೇಕು. ಸಂವಾದದಲ್ಲಿ ಆರ್ ಎಸ್ಎಸ್, ಬಿಜೆಪಿ ಪರವಾದ ವ್ಯಕ್ತಿಗಳಿದ್ದಾರೆಯೇ? ಎಂದು ಸೂಕ್ಷ್ಮವಾಗಿ ಪರಿಶೀಲಿಸಬೇಕು. ರಾಹುಲ್ ಗಾಂಧಿ ಅವರು ಆಗಮಿಸಿದ ವೇಳೆ ಅದ್ಧೂರಿತನ ಮಾಡುವುದು ಬೇಡ. ನಾಯಕರಿಗೆ ಸೆಲ್ಫಿ ಕಾಟ ಬಹಳ ಇದೆ. ಅದನ್ನು ತಪ್ಪಿಸಬೇಕು. ಹಾಗೆಯೇ ಸ್ಥಳೀಯ ಕಲಾ ತಂಡಗಳನ್ನು ಆಹ್ವಾನಿಸಬೇಕು ಎಂದು ಸಲಹೆ ನೀಡಿದರು.

6 ಸಾವಿರ ಜನರನ್ನು ಸೇರಿಸಬೇಕು: ಸೆ. 18ರಂದು ಕಾಂಗ್ರೆಸ್ ಭವನದ ಆವರಣದಲ್ಲಿ ನಡೆಯಲಿರುವ ಕಾರ್ಯಕರ್ತರ ಸಭೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ. ಕೆ ಶಿವಕುಮಾರ್​, ಪ್ರಚಾರ ಸಮಿತಿ ಅಧ್ಯಕ್ಷ ಎಂ. ಬಿ ಪಾಟೀಲ್ ಭಾಗವಹಿಸಲಿದ್ದಾರೆ. ಈ ಸಮಾವೇಶಕ್ಕೆ ಐದರಿಂದ 6 ಸಾವಿರ ಜನರನ್ನು ಸೇರಿಸಬೇಕು ಎಂದು ತಿಳಿಸಿದರು.

ಓದಿ: ಜನರು ಸಿ ಟಿ ರವಿಯನ್ನು ಲೂಟಿ ರವಿ ಎಂದು ಕರೆಯುತ್ತಾರೆ.. ಸಿದ್ದರಾಮಯ್ಯ ವ್ಯಂಗ್ಯ

Last Updated : Sep 11, 2022, 8:41 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.