ETV Bharat / state

ವಿಶ್ವನಾಥ್ ಹಳ್ಳಿ ಹಕ್ಕಿಯಲ್ಲ, ಪಕ್ಷದಿಂದ ಪಕ್ಷಕ್ಕೆ ಹಾರುವ ಹಕ್ಕಿ: ಆರ್.ಧ್ರುವನಾರಾಯಣ ವ್ಯಂಗ್ಯ

ಮೈತ್ರಿ ಸರ್ಕಾರ ಪತನದ ಕುರಿತು ಪುಸ್ತಕ ಬರೆಯುತ್ತೇನೆ ಎಂಬ ವಿಶ್ವನಾಥ್ ಹೇಳಿಕೆಗೆ ಮೈಸೂರಿನಲ್ಲಿ ಮಾಜಿ ಸಂಸದ ಆರ್.ಧ್ರುವನಾರಾಯಣ ಪ್ರತಿಕ್ರಿಯೆ ನೀಡಿದ್ದಾರೆ.

R. Dhurvanarayan
ಆರ್. ಧ್ರುವನಾರಾಯಣ
author img

By

Published : Feb 1, 2020, 12:38 PM IST

ಮೈಸೂರು: ಮೈತ್ರಿ ಸರ್ಕಾರ ಪತನದ ಕುರಿತು ಪುಸ್ತಕ ಬರೆಯುತ್ತೇನೆ ಎಂಬ ವಿಶ್ವನಾಥ್ ಹೇಳಿಕೆಗೆ ಮೈಸೂರಿನಲ್ಲಿ ಮಾಜಿ ಸಂಸದ ಆರ್.ಧ್ರುವನಾರಾಯಣ ಪ್ರತಿಕ್ರಿಯಿಸುತ್ತಾ, ವಿಶ್ವನಾಥ್ ಅವರು ಹಳ್ಳಿ ಹಕ್ಕಿಯಲ್ಲ, ಪಕ್ಷದಿಂದ ಪಕ್ಷಕ್ಕೆ ಹಾರುವ ಹಕ್ಕಿ ಎಂದು ಅವರು ವ್ಯಂಗ್ಯವಾಡಿದ್ದಾರೆ.

ವಿಶ್ವನಾಥ್ ಹೇಳಿಕೆಗೆ ತಿರುಗೇಟು ಕೊಟ್ಟ ಆರ್. ಧ್ರುವನಾರಾಯಣ

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಶ್ವನಾಥ್​ಗೆ ಕಾಂಗ್ರೆಸ್ ಪಕ್ಷ ಎಲ್ಲವನ್ನೂ ಕೊಟ್ಟಿತ್ತು, ಸಚಿವರನ್ನಾಗಿಯೂ ಮಾಡಿದ್ದರು. ಕಾಂಗ್ರೆಸ್ ಪಕ್ಷಕ್ಕೆ ದ್ರೋಹ ಮಾಡಿದ ಅವರು ಜೆಡಿಎಸ್​ಗೆ ಹೋಗಿದ್ದರು. ಜೆಡಿಎಸ್ ಪಕ್ಷ ಕೂಡ ಶಾಸಕರನ್ನಾಗಿ ಮಾಡಿ, ಪಕ್ಷದ ರಾಜ್ಯಾಧ್ಯಕ್ಷರನ್ನಾಗಿ ಮಾಡಿತ್ತು. ಆದರೆ ಅವರಿಗೂ ಕೂಡ ಮೋಸ ಮಾಡಿ ಬಿಜೆಪಿಗೆ ಹೋದರು. ಈಗ ಬಿಜೆಪಿಯಿಂದ ಸಚಿವ ಸ್ಥಾನ ಗಿಟ್ಟಿಸಿಕೊಳ್ಳಲು ಬ್ಲಾಕ್​ಮೇಲ್ ತಂತ್ರ ಮಾಡುತ್ತಿದ್ದಾರೆ ಎಂದು ಟೀಕಿಸಿದರು.

ವಿಶ್ವನಾಥ್​ಗೆ ಯಾವುದೇ ನೈತಿಕತೆಯಿಲ್ಲ, ಬಿಜೆಪಿಯವರಿಗೂ ಯಾವುದೇ ಸಿದ್ಧಾಂತಗಳಿಲ್ಲ. ‌‌‌ಯಡಿಯೂರಪ್ಪ ಉತ್ತಮ ಆಡಳಿತ ನೀಡಲು ಸುವರ್ಣಾವಕಾಶವಿದೆ. ಆದರೆ ಬಿಜೆಪಿ ಹೈಕಮಾಂಡ್ ಅದಕ್ಕೆ ಅವಕಾಶ ನೀಡುತ್ತಿಲ್ಲ, ಸಚಿವ ಸಂಪುಟ ವಿಸ್ತರಣೆ ಮಾಡಲು ಕೂಡ ಅವರಿಗೆ ಸ್ವಾತಂತ್ರ್ಯ ನೀಡುತ್ತಿಲ್ಲ ಎಂದು ಆರ್‌.ಧ್ರುವನಾರಾಯಣ ಹೇಳಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.