ETV Bharat / state

ಬಿಜೆಪಿ 135 ಸ್ಥಾನ ಗೆದ್ದು ಸಂಪೂರ್ಣ ಬಹುಮತ ಪಡೆಯಲಿದೆ: ರಾಜೀವ್ ಬಬ್ಬರ್

author img

By

Published : Apr 26, 2023, 10:52 PM IST

ಕಾಂಗ್ರೆಸ್ ಏನೇ ಪ್ರಯತ್ನ ನಡೆಸಿದರೂ ಈ ಚುನಾವಣೆಯಲ್ಲಿ ಅಧಿಕಾರಕ್ಕೆ ಬರುವುದಿಲ್ಲ ಎಂದು ದೆಹಲಿಯ ಬಿಜೆಪಿ ರಾಜ್ಯ ಉಪಾಧ್ಯಕ್ಷ ರಾಜೀವ್ ಬಬ್ಬರ್ ಹೇಳಿದ್ದಾರೆ.

rajeev-babbar-reaction-on-congress-leaders
ಬಿಜೆಪಿ 135 ಸ್ಥಾನ ಗೆದ್ದು ಸಂಪೂರ್ಣ ಬಹುಮತ ಪಡೆಯಲಿದೆ: ರಾಜೀವ್ ಬಬ್ಬರ್

ಮೈಸೂರು: ಕರ್ನಾಟಕದಲ್ಲಿ ಈ ಬಾರಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 135ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲುವು ಸಾಧಿಸುವ ಮೂಲಕ ಸಂಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ ಎಂದು ದೆಹಲಿಯ ಬಿಜೆಪಿ ರಾಜ್ಯ ಉಪಾಧ್ಯಕ್ಷ ರಾಜೀವ್ ಬಬ್ಬರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಬುಧವಾರ ಮೈಸೂರಿನ ವಾಣಿವಿಲಾಸ ರಸ್ತೆಯಲ್ಲಿರುವ ಬಿಜೆಪಿ ಮೈಸೂರು ವಿಭಾಗ ಮಾಧ್ಯಮ ಕೇಂದ್ರದಲ್ಲಿ ಮಾಧ್ಯಮಗೋಷ್ಟಿ ನಡೆಸಿ ಅವರು ಮಾತನಾಡಿದರು.

ನಾವು ಈಗಾಗಲೇ ಕರ್ನಾಟಕದಲ್ಲಿ ಆಂತರಿಕ ಸಮೀಕ್ಷೆಯನ್ನು ನಡೆಸಿದ್ದೇವೆ. ಅದರಲ್ಲಿ ಬಿಜೆಪಿ 135ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂಬ ವರದಿ ಬಂದಿದೆ. ಹಾಗಾಗಿ ಈ ಬಾರಿ ಕೂಡ ಬಿಜೆಪಿ ಸರ್ಕಾರ ಸಂಪೂರ್ಣವಾಗಿ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ. ಕಾಂಗ್ರೆಸ್ ಏನೇ ಪ್ರಯತ್ನ ನಡೆಸಿದರೂ, ಈ ಚುನಾವಣೆಯಲ್ಲಿ ಅಧಿಕಾರಕ್ಕೆ ಬರುವುದಿಲ್ಲ. ಈಗಾಗಲೇ ದೇಶದಲ್ಲಿ ಕಾಂಗ್ರೆಸ್ ತನ್ನ ಅಸ್ತಿತ್ವವನ್ನು ಕಳೆದುಕೊಂಡಿದೆ ಎಂದರು.

ಕರ್ನಾಟಕದಲ್ಲಿ ಕಾಂಗ್ರೆಸ್​ ತನ್ನ ಅಸ್ತಿತ್ವವನ್ನು ಉಳಿಸಿಕೊಳ್ಳುವುದಕ್ಕೆ ಹೋರಾಟವನ್ನು ನಡೆಸುತ್ತಿದೆ. ಆದರೆ ರಾಜ್ಯದ ಜನರು ಈ ಬಾರಿಯೂ ಕಾಂಗ್ರೆಸ್ ನಾಯಕರ ಅಧಿಕಾರಕ್ಕೆ ಬರುವ ಕನಸನ್ನು ನನಸು ಮಾಡುವುದಿಲ್ಲ. ಡಬಲ್ ಇಂಜಿನ್ ಬಿಜೆಪಿ ಸರ್ಕಾರ ದೇಶದಲ್ಲಿ, ರಾಜ್ಯದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡುತ್ತಿದೆ. ಕಾಂಗ್ರೆಸ್ ಸರ್ಕಾರ ಇದ್ದಾಗ ಪ್ರತಿದಿನ ಕೇವಲ 2 ಕಿ.ಮೀ ರಸ್ತೆ ಮಾತ್ರ ಅಭಿವೃದ್ಧಿ ಆಗುತ್ತಿತ್ತು. ಆದರೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಪ್ರತಿದಿನ 39 ಕಿ.ಮೀ ರಸ್ತೆಯನ್ನು ಅಭಿವೃದ್ಧಿಗೊಳಿಸುತ್ತಿದೆ ಎಂದು ಹೇಳಿದರು. ಬೆಂಗಳೂರು ಮೈಸೂರು ನಡುವೆ ದಶಪಥ ರಸ್ತೆಯನ್ನು ನಿರ್ಮಾಣ ಮಾಡಿ ಅದನ್ನು ಉದ್ಘಾಟಿಸಿ ಜನರ ಸೇವೆಗೆ ನೀಡಿದೆ. ಇದರಿಂದಾಗಿ ಮೈಸೂರು ಬೆಂಗಳೂರು ನಡುವಿನ ಪ್ರಯಾಣದ ಅವಧಿ ಇಳಿದಿದೆ. ಮೈಸೂರು ನಗರ ಅಭಿವೃದ್ಧಿಯಾಗುವುದಕ್ಕೆ ಎಲ್ಲ ಅವಕಾಶವನ್ನು ಸರ್ಕಾರ ನೀಡಿದೆ ಎಂದು ತಿಳಿಸಿದರು.

ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್​ ಹಾಗೂ ಕಾಂಗ್ರೆಸ್​ನ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್​ ಸುರ್ಜೇವಾಲ ಅವರು ರಾಜ್ಯ ಬಿಜೆಪಿ ಸರ್ಕಾರವನ್ನು 40% ಕಮಿಷನ್ ಸರ್ಕಾರ ಎಂದು ಆರೋಪಿಸಿದ್ದಾರೆ. ಆದರೆ ಡಿ.ಕೆ. ಶಿವಕುಮಾರ್​ ಅವರು ಭ್ರಷ್ಟಾಚಾರದ ಆರೋಪದಲ್ಲಿ ಜೈಲಿಗೆ ಹೋಗಿ ಬಂದು, ಈಗ ಬೇಲ್ ಪಡೆದು ಹೊರಗಿದ್ದಾರೆ. ಇದೇ ರೀತಿ ಕಾಂಗ್ರೆಸ್​ ಶೇ 50ರಷ್ಟು ನಾಯಕರು ಭ್ರಷ್ಟಾಚಾರದ ಆರೋಪದಲ್ಲಿ ಸಿಲುಕಿದ್ದಾರೆ. ಎಲ್ಲರೂ ಕೂಡ ಬೇಲ್ ಮೇಲಿದ್ದಾರೆ, ಇನ್ನು ಉಳಿದ 50ರಷ್ಟು ನಾಯಕರ ಮೇಲೆ ಎಫ್​ಐಆರ್ ಆಗಿದೆ. ಹಾಗಾಗಿ ಕಾಂಗ್ರೆಸ್ ಭ್ರಷ್ಟಾಚಾರ ಪಕ್ಷವಲ್ಲವೇ ಎಂದು ತಿರುಗೇಟು ನೀಡಿದ್ರು.

ಪ್ರಿಯಾಂಕಾ ಗಾಂಧಿ ರಾಜ್ಯ ಬಿಜೆಪಿ ಸರ್ಕಾರ ಒಂದೂವರೆ ಲಕ್ಷ ಕೋಟಿ ಹಣವನ್ನು ಲೂಟಿ ಮಾಡಿದೆ ಎಂದು ಆರೋಪಿಸಿದ್ದಾರೆ. ಆದರೆ ಅವರ ಪತಿ ರಾಬರ್ಟ್ ವಾದ್ರಾ ಕೂಡ ಭ್ರಷ್ಟಾಚಾರದ ಆರೋಪವನ್ನು ಎದುರಿಸುತ್ತಿದ್ದಾರೆ. ಈಗ ಅವರು ಬೇಲ್ ಮೇಲಿದ್ದಾರೆ. ಇದನ್ನು ಮರೆತು ಬಿಜೆಪಿ ಮೇಲೆ ಪ್ರಿಯಾಂಕಾ ಗಾಂಧಿ ಭ್ರಷ್ಟಾಚಾರದ ಆರೋಪ ಮಾಡುವುದಕ್ಕೆ ಯಾವ ನೈತಿಕತೆ ಇದೆ ಎಂದು ಬಬ್ಬರ್​ ಪ್ರಶ್ನಿಸಿದರು.

ಇನ್ನು ಈ ವೇಳೆ ನರಸಿಂಹರಾಜ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಂದೇಶ್ ಸ್ವಾಮಿ, ಚಿತ್ರನಟ ಹಾಗೂ ಬಿಜೆಪಿ ಮುಖಂಡ ಎಸ್ ಜಯಪ್ರಕಾಶ್ (ಜೆಪಿ) ಜಿಲ್ಲಾ ಸಹ ವಕ್ತಾರ ಡಾ. ಕೆ ವಸಂತ್ ಕುಮಾರ್, ಬಿಜೆಪಿ ರಾಜ್ಯ ಪರಿಷತ್ ಕಾರ್ಯಕಾರಣಿ ಸದಸ್ಯ ಬಿ.ಪಿ. ಮಂಜುನಾಥ್ ಮತ್ತಿತರರು ಉಪಸ್ಥಿತರಿದ್ದರು.

ಇದನ್ನೂ ಓದಿ:ಸಿಎಂ ಹುದ್ದೆಗೆ ಜಗಳ ಮಾಡುವ ಕಾಂಗ್ರೆಸ್ ನಾಯಕರಿಂದ ಅಭಿವೃದ್ಧಿ ಸಾಧ್ಯವೇ? ರಾಜನಾಥ ಸಿಂಗ್ ಪ್ರಶ್ನೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.