ಮೈಸೂರು: ಯೋಗದಲ್ಲಿ ಅತಿ ಚಿಕ್ಕ ವಯಸ್ಸಿನಲ್ಲೇ ವಿಶ್ವ ದಾಖಲೆ ನಿರ್ಮಿಸಿದ್ದ ಕುಮಾರಿ ಖುಷಿಗೆ 2019ರ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಸಂದಿದೆ.
ವಿವಿಧ ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಭಾಗವಹಿಸಿ ಹಲವು ಪ್ರಶಸ್ತಿ ಗೆದ್ದಿರುವ ಮೈಸೂರು ಮೂಲದ ಖುಷಿ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿರುವ ಬಗ್ಗೆ ಈಟಿವಿ ಭಾರತ ಜೊತೆ ದೂರವಾಣಿ ಮೂಲಕ ಸಂತಸ ಹಂಚಿಕೊಂಡಿದ್ದಾರೆ.
ಅಲ್ಲದೇ ಅನೇಕ ರಾಜ್ಯ, ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದ ಯೋಗಾಸನ ಸ್ಪರ್ದೆಯಲ್ಲಿ ಭಾಗವಹಿಸಿ ಹಲವಾರು ಪ್ರಶಸ್ತಿ ಪಡೆದಿರುವ ಖುಷಿ 6 ಬಾರಿ ಅಂತಾರಾಷ್ಟ್ರೀಯ ಯೋಗಾಸನ ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸಿದ್ದಾಳೆ. ಇನ್ನು 2018-19ರಲ್ಲಿ ಸ್ವಚ್ಛ ಭಾರತ್ ಅಭಿಯಾನಕ್ಕೆ ಮೈಸೂರಿನ ರಾಯಭಾರಿಯಾಗಿದ್ದಾಳೆ.