ಮೈಸೂರು: ಕಳೆದ ತಿಂಗಳು ನಗರದಲ್ಲಿ ನಡೆದ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ಗುರುತು ಪತ್ತೆ ಹಚ್ಚಲು ಇಲ್ಲಿನ ಕೇಂದ್ರ ಕಾರಾಗೃಹಕ್ಕೆ ಸಂತ್ರಸ್ತೆ ಆಗಮಿಸಿದ್ದಾಳೆ.
ಈಗಾಗಲೇ ಮ್ಯಾಜಿಸ್ಟ್ರೇಟ್ ಅವರ ಮುಂದೆ ಹೇಳಿಕೆ ದಾಖಲಿಸಿರುವ ಸಂತ್ರಸ್ತೆ, ಇಂದು ಜೈಲಿನಲ್ಲಿರುವ ಆರೋಪಿಗಳ ಗುರುತು ಪತ್ತೆಹಚ್ಚುವ ಕಾರ್ಯಕ್ಕೆ ಹಾಜರಾಗಿದ್ದಾಳೆ.
ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಲಲಿತಾದ್ರಿಪುರದ ನಿರ್ಜನ ಪ್ರದೇಶದಲ್ಲಿ ಆ.24ರಂದು ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದ 7 ಮಂದಿ ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ. ಇವರ ಪೈಕಿ ಓರ್ವ ಅಪ್ರಾಪ್ತ ವಯಸ್ಕನಾಗಿದ್ದಾನೆ.
ಓದಿ: ಮೈಸೂರು ಗ್ಯಾಂಗ್ ರೇಪ್ ಕೇಸ್: 28 ದಿನಗಳ ನಂತರ ಜಡ್ಜ್ ಮುಂದೆ ಹೇಳಿಕೆ ದಾಖಲಿಸಿದ ಸಂತ್ರಸ್ತೆ