ಮೈಸೂರು: ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಮೈ.ವಿ. ರವಿಶಂಕರ್ ನಾಮಪತ್ರ ಸಲ್ಲಿಸಿದರು. ಮೈಸೂರಿನ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಚಿವರಾದ ಎಸ್.ಟಿ. ಸೋಮಶೇಖರ್, ಕೆ.ಸಿ. ನಾರಾಯಣ ಗೌಡ, ಸಂಸದ ಪ್ರತಾಪಸಿಂಹ, ಶಾಸಕರಾದ ಎಸ್.ಎ. ರಾಮದಾಸ್, ನಾಗೇಂದ್ರ, ನಿರಂಜನ ಕುಮಾರ್ ಸೇರಿ ಹಲವರು ಮುಖಂಡರು ಸಾಥ್ ನೀಡಿದರು.
ನಾಮಪತ್ರ ಸಲ್ಲಿಸುವ ಮುನ್ನ ಮೈ.ವಿ. ರವಿಶಂಕರ್ ಅವರು ಖಾಸಗಿ ಕಲ್ಯಾಣ ಮಂಟಪವೊಂದರಲ್ಲಿ ಪಕ್ಷದ ಮುಖಂಡರೊಂದಿಗೆ ಸಭೆ ನಡೆಸಿದರು.
ಇದನ್ನೂ ಓದಿ: G -7 ಹಣಕಾಸು ನಾಯಕರ ಗಮನ ಸೆಳೆದ ರಷ್ಯಾ - ಉಕ್ರೇನ್ ಯುದ್ಧದ ಪ್ರಭಾವ