ETV Bharat / state

ತಂದೆಗಾಗಿ ವರುಣ ಕ್ಷೇತ್ರ ಬಿಡಲು ಸಿದ್ಧ.. ಶಾಸಕ ಯತೀಂದ್ರ ಸಿದ್ದರಾಮಯ್ಯ ಘೋಷಣೆ - ಸಿದ್ದರಾಮಯ್ಯ ಸ್ಪರ್ಧೆ ಬಗ್ಗೆ ಯತಿಂದ್ರ ಹೇಳಿಕೆ

ಸಿದ್ದರಾಮಯ್ಯ ಅವರಿಗೆ ವರುಣ ವಿಧಾನಸಭಾ ಕ್ಷೇತ್ರ ಅದೃಷ್ಟದ ಕ್ಷೇತ್ರವಾಗಿದ್ದು, ಆ ಕ್ಷೇತ್ರದಿಂದ ಸ್ಪರ್ಧಿಸಿದಾಗಲೇ ಅವರು ಸಿಎಂ ಆಗಿದ್ದು. ಈ ಬಾರಿಯೂ ಸಿದ್ದರಾಮಯ್ಯ ಅವರು ಸಿಎಂ ಆಗುವ ಸಾಧ್ಯತೆಗಳಿದ್ದು, ಅವರು ವರುಣದಿಂದ ಸ್ಪರ್ಧಿಸುವುದಾದರೇ ತಾವು ಕ್ಷೇತ್ರ ಬಿಟ್ಟುಕೊಡಲು ಸಿದ್ಧ ಎಂದು ಶಾಸಕ ಯತೀಂದ್ರ ಸಿದ್ದರಾಮಯ್ಯ ಹೇಳಿದರು.

KA_MYS05
ಯತೀಂದ್ರ ಸಿದ್ದರಾಮಯ್ಯ
author img

By

Published : Nov 30, 2022, 3:28 PM IST

Updated : Nov 30, 2022, 6:20 PM IST

ಮೈಸೂರು: ವರುಣ ಕ್ಷೇತ್ರ ತಂದೆಗೆ ಅದೃಷ್ಟದ ಕ್ಷೇತ್ರ. ಇಲ್ಲಿಗೆ ಬಂದು ತಮ್ಮ ಕೊನೆಯ ಚುನಾವಣೆಯನ್ನು ಗೆಲ್ಲಲಿ ಎಂಬುದು ನನ್ನ ಒತ್ತಾಯ, ಇಲ್ಲಿ ಗೆದ್ದರೆ ತಂದೆಗೆ ಮುಖ್ಯಮಂತ್ರಿ ಆಗುವ ಅವಕಾಶವಿದ್ದು, ಅವರು ವರುಣ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡಿದರೆ ನಾನು ಕ್ಷೇತ್ರ ಬಿಟ್ಟುಕೊಡಲು ಸಿದ್ಧನಿದ್ದೇನೆ ಎಂದು ಶಾಸಕ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.

ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯನವರನ್ನು ರಾಜ್ಯದ ಹಲವು ನಾಯಕರುಗಳು ಮತ್ತು ಕಾರ್ಯಕರ್ತರು ತಮ್ಮ ತಮ್ಮ ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡುವಂತೆ ಆಹ್ವಾನ ನೀಡುತ್ತಿದ್ದಾರೆ. ಆದರೆ ಅಪ್ಪ ಈವರೆಗೆ ಯಾವುದೇ ಕ್ಷೇತ್ರವನ್ನು ಅಂತಿಮಗೊಳಿಸಿಲ್ಲ. ಹಾಗಾಗಿ ಅವರು ವರುಣ ಕ್ಷೇತ್ರದಿಂದಲೇ ಸ್ಪರ್ಧೆ ಮಾಡಬೇಕೆಂಬುದು ನನ್ನ ಒತ್ತಾಯವಾಗಿದೆ. ಜೊತೆಗೆ ಪಕ್ಷ ಸಂಘಟನೆ ಹಾಗೂ ಕ್ಷೇತ್ರದ ದೃಷ್ಟಿಯಿಂದ ವರುಣ ಕ್ಷೇತ್ರ ಸುರಕ್ಷಿತ ಎಂದರು.

ವರುಣ ಕ್ಷೇತ್ರ ತಂದೆಯವರಿಗೆ ಅದೃಷ್ಟದ ಕ್ಷೇತ್ರವಾಗಿದ್ದು, ಸಿದ್ದರಾಮಯ್ಯ ಕೊನೆಯ ಚುನಾವಣೆಯನ್ನು ಎದುರಿಸುತ್ತಿದ್ದು ಅವರು ವರುಣದಿಂದ ಸ್ಪರ್ಧೆ ಮಾಡಲಿ ಎಂಬುದು ನನ್ನ ವೈಯಕ್ತಿಕ ಒತ್ತಾಯವಾಗಿದ್ದು ಅಪ್ಪ ವರುಣ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡಿದರೆ ಕ್ಷೇತ್ರ ತ್ಯಾಗಕ್ಕೆ ನಾನು ಸಿದ್ಧನಿದ್ದೇನೆ.

ತಂದೆಗಾಗಿ ಕ್ಷೇತ್ರ ಬಿಟ್ಟುಕೊಡಲು ಸಿದ್ದ ಎಂದ ಶಾಸಕ ಯತೀಂದ್ರ ಸಿದ್ದರಾಮಯ್ಯ

ಅಲ್ಲದೇ ನಾನು ಬೇರೆ ಯಾವ ಕ್ಷೇತ್ರದಲ್ಲೂ ಸ್ಪರ್ಧೆ ಮಾಡುವುದಿಲ್ಲ ತಂದೆಯ ಪರವಾಗಿ ಕೆಲಸ ಮಾಡುತ್ತೇನೆ. ಜೊತೆಗೆ ಈ ಹಿಂದೆ ವರುಣ ಕ್ಷೇತ್ರದಿಂದ ಗೆದ್ದಿದ್ದ ಅವರು ವಿರೋಧ ಪಕ್ಷದ ನಾಯಕರಾಗಿದ್ದರು ಬಳಿಕ ಮುಖ್ಯಮಂತ್ರಿಯೂ ಆಗಿದ್ದರು. ಈಗ ವರುಣದಿಂದ ಗೆದ್ದರೆ ಸಿದ್ದರಾಮಯ್ಯ ಅವರಿಗೆ ಮುಖ್ಯಮಂತ್ರಿ ಆಗುವ ಅವಕಾಶವಿದ್ದು, ತಂದೆಯವರು ವರುಣದಿಂದ ನಿಂತು ಗೆದ್ದಾಗಲೆಲ್ಲ ಅವರಿಗೆ ಅಧಿಕಾರ ಸಿಕ್ಕಿದೆ ಎಂದರು.

ಬಿಜೆಪಿ ಅಂದರೆ ಗಲಭೆಕೋರರ ಪಕ್ಷ: ಬಿಜೆಪಿಗೆ ಕೆಲವು ರೌಡಿಶೀಟರ್​ಗಳ ಸೇರ್ಪಡೆ ಆಗುತ್ತಿರುವುದು ಸರಿಯಲ್ಲ ಇಂಥವರಿಗೆ ಅಧಿಕಾರ ಕೊಟ್ಟರೆ ಸಮಾಜದಲ್ಲಿ ಅಶಾಂತಿ ಉಂಟಾಗುತ್ತದೆ. ಇದಕ್ಕೆ ಬಿಜೆಪಿಯವರು ಸಮಾಜದಲ್ಲಿ ಅಶಾಂತಿ ಉಂಟುಮಾಡಿ ಅಧಿಕಾರ ಹಿಡಿಯಲು ಪ್ರಯತ್ನಿಸುತ್ತಿದ್ದಾರೆ. ಅಂದರೆ ಬಿಜೆಪಿ ಗಲಭೆಕೋರರ ಪಕ್ಷವಾಗಿದೆ ಎಂದು ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: ರಾಜ್ಯ ಸರ್ಕಾರ ಮುಸ್ಲಿಂ ಕಾಲೇಜುಗಳ ನಿರ್ಮಾಣ ಮಾಡುತ್ತಿರುವುದು ಖಂಡನೀಯ: ಪ್ರಮೋದ್​ ಮುತಾಲಿಕ್​

Last Updated : Nov 30, 2022, 6:20 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.