ETV Bharat / state

ಯುವನಿಧಿ ಯೋಜನೆಗೆ ಇಂದಿನಿಂದ ನೋಂದಣಿ ಪ್ರಾರಂಭ: ಸದುಪಯೋಗಕ್ಕೆ ಸಿಎಂ, ಡಿಸಿಎಂ ಮನವಿ - ಯುವನಿಧಿ ಯೋಜನೆ

ಕಾಂಗ್ರೆಸ್​ ಗ್ಯಾರಂಟಿಗಳಲ್ಲಿ ಪ್ರಮುಖವಾಗಿದ್ದ ಯುವನಿಧಿ ಯೋಜನೆಗೆ ಚಾಲನೆ ದೊರಕಿದ್ದು, ನಿರುದ್ಯೋಗಿ ಯುವಜನರು ನೋಂದಣಿ ಮಾಡಿಕೊಳ್ಳಬಹುದಾಗಿದೆ. ಈ ಕುರಿತು ಮೈಸೂರು ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.

ಯುವನಿಧಿ ಯೋಜನೆ
ಯುವನಿಧಿ ಯೋಜನೆ
author img

By ETV Bharat Karnataka Team

Published : Dec 26, 2023, 1:12 PM IST

ಮೈಸೂರು: ಯುವನಿಧಿ ಯೋಜನೆಯ ಅರ್ಹ ಫಲಾನುಭವಿಗಳು ಇಂದಿನಿಂದ ನೊಂದಣಿ ಮಾಡಿಕೊಂಡು ಪ್ರತಿ ತಿಂಗಳು ನಿರುದ್ಯೋಗ ಭತ್ಯೆ ಪಡೆದುಕೊಳ್ಳಿ ಎಂದು ಅಪರ ಜಿಲ್ಲಾಧಿಕಾರಿಗಳಾದ ಆರ್. ಲೋಕನಾಥ್ ಅವರು ತಿಳಿಸಿದರು. ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಯುವನಿಧಿ ಯೋಜನೆಯ ಪೋಸ್ಟರ್​ ಬಿಡುಗಡೆಗೊಳಿಸಿ ಅವರು ಮಾತನಾಡಿದರು.

  • ಪದವೀಧರ ಹಾಗೂ ಡಿಪ್ಲೊಮಾ ಪದವೀಧರ ನಿರುದ್ಯೋಗಿ ಯುವಜನರಿಗೆ ಮಾಸಿಕ ನಿರುದ್ಯೋಗ ಭತ್ಯೆಯ ನೆರವು ನೀಡುವ ನಮ್ಮ ಸರ್ಕಾರದ 5ನೇ ಗ್ಯಾರಂಟಿ "ಯುವನಿಧಿ" ಯೋಜನೆಯ ನೋಂದಣಿ ಪ್ರಕ್ರಿಯೆ ಇಂದಿನಿಂದ ಆರಂಭಗೊಳ್ಳಲಿದೆ.

    ಆರ್ಥಿಕ ಸಂಕಷ್ಟದ ನಡುವೆ ಕನಸಿನ ಉದ್ಯೋಗದ ಹುಡುಕಾಟದಲ್ಲಿರುವ ನಿರುದ್ಯೋಗಿ ಯುವಜನರು ಯೋಜನೆಗೆ ನೊಂದಾಯಿಸಿಕೊಳ್ಳುವ ಮೂಲಕ ಸದುಪಯೋಗ… pic.twitter.com/kctbijrMax

    — Siddaramaiah (@siddaramaiah) December 26, 2023 " class="align-text-top noRightClick twitterSection" data=" ">

2023 ರಲ್ಲಿ ಪದವಿ, ಡಿಪ್ಲೋಮಾ ಮುಗಿಸಿರಬೇಕು. ಕನಿಷ್ಠ 6 ತಿಂಗಳ ಕಾಲ ಸರ್ಕಾರಿ ಅಥವಾ ಖಾಸಗಿ ಉದ್ಯೋಗ ಹೊಂದಿಲ್ಲದವರು ಸೇವಾ ಸಿಂಧು ಪೋರ್ಟಲ್​ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಮೈಸೂರು ಜಿಲ್ಲೆಯಿಂದ ಯುವ ನಿಧಿಗೆ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿರುವವರು 20,500 ಇದ್ದಾರೆ ಎಂದು ಮೈಸೂರು ವಿಶ್ವ ವಿದ್ಯಾನಿಲಯದಿಂದ ಮಾಹಿತಿ ಪಡೆದುಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.

ಪದವಿ ಮಾಡಿದವರಿಗೆ ಮಾಸಿಕ 3,000, ಡಿಪ್ಲೋಮಾ ಮಾಡಿದವರಿಗೆ ಮಾಸಿಕ 1500 ರೂ. ನಿರುದ್ಯೋಗ ಭತ್ಯೆಯಾಗಿ ನೀಡಲಾಗುವುದು. ಅರ್ಹ ಅಭ್ಯರ್ಥಿಗಳು ಉಚಿತವಾಗಿ ಕರ್ನಾಟಕ ಒನ್, ಬೆಂಗಳೂರು ಒನ್, ಗ್ರಾಮ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರಗಳಲ್ಲಿ ಸಹ ಅರ್ಜಿ ಸಲ್ಲಿಸಬಹುದು. ಹೆಲ್ಪ್ ಲೈನ್ ಸಂಖ್ಯೆ 18005999918 ನ್ನು ಸಂಪರ್ಕಿಸಬಹುದು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಉದ್ಯಮ ಶೀಲತೆ ಹಾಗೂ ಜೀವನೋಪಾಯ ಇಲಾಖೆಯ ಸಹಾಯಕ ನಿರ್ದೇಶಕರಾದ ರಾಣಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕರಾದ ಹರೀಶ್ ಟಿ ಕೆ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

  • ನಿರುದ್ಯೋಗಿ ಪದವೀಧರರ ಶ್ರೇಯೋಭಿವೃದ್ಧಿಗಾಗಿ ನಮ್ಮ ಸರ್ಕಾರ ಘೋಷಿಸಿದ್ದ "ಯುವನಿಧಿ" ಗ್ಯಾರಂಟಿಯ ನೋಂದಣಿ ಪ್ರಕ್ರಿಯೆಗೆ ಇಂದು ಚಾಲನೆ ದೊರೆಯಲಿದ್ದು, ಅರ್ಹ ಫಲಾನುಭವಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕಾಗಿ ವಿನಂತಿ.#YuvaNidhi pic.twitter.com/sOHzt6iJd0

    — DK Shivakumar (@DKShivakumar) December 26, 2023 " class="align-text-top noRightClick twitterSection" data=" ">

ನಿರುದ್ಯೋಗಿ ಯುವಜನರು ಸದುಪಯೋಗ ಪಡಿಸಿಕೊಳ್ಳಿ-ಸಿಎಂ: ಪದವೀಧರ ಹಾಗೂ ಡಿಪ್ಲೊಮಾ ಪದವೀಧರ ನಿರುದ್ಯೋಗಿ ಯುವಜನರಿಗೆ ಮಾಸಿಕ ನಿರುದ್ಯೋಗ ಭತ್ಯೆಯ ನೆರವು ನೀಡುವ ನಮ್ಮ ಸರ್ಕಾರದ 5ನೇ ಗ್ಯಾರಂಟಿ "ಯುವನಿಧಿ" ಯೋಜನೆಯ ನೋಂದಣಿ ಪ್ರಕ್ರಿಯೆ ಇಂದಿನಿಂದ ಆರಂಭಗೊಳ್ಳಲಿದೆ. ಆರ್ಥಿಕ ಸಂಕಷ್ಟದ ನಡುವೆ ಕನಸಿನ ಉದ್ಯೋಗದ ಹುಡುಕಾಟದಲ್ಲಿರುವ ನಿರುದ್ಯೋಗಿ ಯುವಜನರು ಯೋಜನೆಗೆ ನೊಂದಾಯಿಸಿಕೊಳ್ಳುವ ಮೂಲಕ ಸದುಪಯೋಗ ಪಡೆಯಬೇಕು ಎಂದು ಮನವಿ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ಎಕ್ಸ್​ನಲ್ಲಿ ಟ್ವೀಟ್​ ಮಾಡಿದ್ದಾರೆ.

ಉಪಮುಖ್ಯಮಂತ್ರಿ ಪೋಸ್ಟ್​ : ಡಿಸಿಎಂ ಡಿಕೆಶಿ ಅವರು ಸಾಮಾಜಿಕ ಜಾಲತಾಣದಲ್ಲಿ ಯುವನಿಧಿ ಕುರಿತು ಪೋಸ್ಟ್​ ಮಾಡಿದ್ದಾರೆ. ನಿರುದ್ಯೋಗಿ ಪದವೀಧರರ ಶ್ರೇಯೋಭಿವೃದ್ಧಿಗಾಗಿ ನಮ್ಮ ಸರ್ಕಾರ ಘೋಷಿಸಿದ್ದ "ಯುವನಿಧಿ" ಗ್ಯಾರಂಟಿ ನೋಂದಣಿ ಪ್ರಕ್ರಿಯೆಗೆ ಇಂದು ಚಾಲನೆ ದೊರೆಯಲಿದ್ದು, ಅರ್ಹ ಫಲಾನುಭವಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕಾಗಿ ವಿನಂತಿ ಎಂದು ಬರೆದಿದ್ದಾರೆ.

ಇದನ್ನೂ ಓದಿ: ಯುವನಿಧಿ ಯೋಜನೆ ನೋಂದಣಿಗೆ ಡಿ.26 ರಂದು ಚಾಲನೆ; ಅರ್ಹರು ಯಾರು? ಅರ್ಜಿ ಸಲ್ಲಿಸುವುದೇಗೆ?

ETV Bharat Logo

Copyright © 2024 Ushodaya Enterprises Pvt. Ltd., All Rights Reserved.