ಮೈಸೂರು: ಧಾರಾಕಾರ ಮಳೆಗೆ ಮನೆ ಗೋಡೆ ಕುಸಿದು ಮೃತಪಟ್ಟಿದ್ದ ವ್ಯಕ್ತಿಯ ಕುಟುಂಬಕ್ಕೆ ಸರ್ಕಾರದಿಂದ 5 ಲಕ್ಷ ರೂ. ಪರಿಹಾರ ಧನ ಘೋಷಣೆ ಮಾಡಲಾಗಿದೆ.
ಕಳೆದ ಮಧ್ಯರಾತ್ರಿ ಸುರಿದ ಧಾರಾಕಾರ ಮಳೆಗೆ ಹುಣಸೂರು ತಾಲೂಕಿನ ವೀರನ ಹೊಸಹಳ್ಳಿ ಬಳಿಯ ಅಬ್ಬೂರು ಹಾಡಿಯಲ್ಲಿ ಮನೆಯೊಂದರ ಗೋಡೆ ಕುಸಿದಿತ್ತು. ಈ ವೇಳೆ ಮನೆಯೊಳಗಿದ್ದ ಗಣೇಶ್ ಅಲಿಯಾಸ್ ಗಣಪತಿ (35) ಎಂಬವರು ಸಾವನ್ನಪ್ಪಿದ್ದರು. ಇದೀಗ ಆತನ ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ 5 ಲಕ್ಷ ರೂ. ಪರಿಹಾರ ಧನವನ್ನ ಮುಖ್ಯಮಂತ್ರಿ ಯಡಿಯೂರಪ್ಪ ಸೂಚನೆಯ ಮೇರೆಗೆ ಶಾಸಕ ರಾಮದಾಸ್ ವಿತರಿಸಿದರು.
ಅಲ್ಲದೆ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ತೆರಳಿ ಪರಿಹಾರ ಕ್ರಮಗಳನ್ನು ಕೈಗೊಳ್ಳುವಂತೆ ಮುಖ್ಯಮಂತ್ರಿಗಳು ತಿಳಿಸಿದ್ದಾರೆ ಎಂದು ಶಾಸಕ ರಾಮದಾಸ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.