ಮೈಸೂರು: ಕೋವಿಡ್ ವಾರಾಂತ್ಯದ ಕರ್ಫ್ಯೂ ಹಿನ್ನೆಲೆಯಲ್ಲಿ ವಿಶ್ವವಿಖ್ಯಾತ ಮೈಸೂರು ಅರಮನೆಯನ್ನು ಪ್ರವಾಸಿಗರ ವೀಕ್ಷಣೆಗೆ ನಿರ್ಬಂಧ ವಿಧಿಸಲಾಗಿದೆ.
ಕೊರೊನಾ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರ ವಾರಾಂತ್ಯದ ಕರ್ಫ್ಯೂ ಜಾರಿ ಮಾಡಿದೆ. ಈ ಹಿನ್ನೆಲೆಯಲ್ಲಿ ಅರಮನೆಯನ್ನು ಈ ಎರಡು ದಿನಗಳು ಸಾರ್ವಜನಿಕರ ವೀಕ್ಷಣೆಗೆ ನಿರ್ಬಂಧಿಸಲಾಗಿದೆ ಎಂದು ಮೈಸೂರು ಅರಮನೆ ಮಂಡಳಿ ಉಪ ನಿರ್ದೇಶಕರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕರ್ಫ್ಯೂ ವೇಳೆ ಅಗತ್ಯ ವಸ್ತುಗಳ ಮಾರಾಟಕ್ಕೆ ಬೆಳಗ್ಗೆ 5 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಅವಕಾಶ ಕಲ್ಪಿಸಲಾಗಿದೆ. ಹಾಲಿನ ಅಂಗಡಿಗಳಿಗೆ ರಾತ್ರಿ 8 ಗಂಟೆಯವರೆಗೂ ಅವಕಾಶ ಇರಲಿದೆ. ಹೋಟೆಲ್ನಲ್ಲಿ ಪಾರ್ಸೆಲ್ಗೆ ಮಾತ್ರ ಅವಕಾಶ ನೀಡಲಾಗಿದೆ. ಕಳೆದ ಎರಡೂ ವಾರಗಳಿಂದಲೂ ಸಹ ಪ್ರಮುಖ ಪ್ರವಾಸಿ ತಾಣಗಳಿಗೆ ಸಾರ್ವಜನಿಕ ಪ್ರವೇಶ ನಿರ್ಬಂಧಿಸಲಾಗಿತ್ತು.