ಮೈಸೂರು: ಕೊರೊನಾ ಹರಡುವಿಕೆ ತಡೆಗಟ್ಟುವ ನಿಟ್ಟಿನಲ್ಲಿ ಅಕ್ಟೋಬರ್ 31 ರ ಹುಣ್ಣಿಮೆಯಂದು ಶ್ರೀಕಂಠೇಶ್ವರ ದೇಗುಲಕ್ಕೆ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಆದೇಶ ಹೊರಡಿಸಿದ್ದಾರೆ.
ಜಿಲ್ಲೆಯಲ್ಲಿ ಕೊರೊನಾ ಸೋಂಕು ಹೆಚ್ಚಾಗಿ ಹರಡುತ್ತಿರುವ ಹಿನ್ನೆಲೆ ಈ ನಿರ್ಧಾರವನ್ನು ಕೈಗೊಂಡಿರುವ ಜಿಲ್ಲಾಧಿಕಾರಿ, ಅರ್ಚಕರು ಮತ್ತು ಸಿಬ್ಬಂದಿ ದೇವಸ್ಥಾನದ ಒಳಭಾಗದಲ್ಲಿ ಎಂದಿನಂತೆ ಧಾರ್ಮಿಕ ಪೂಜಾ ಕೈಂಕರ್ಯಗಳನ್ನು ನೆರವೇರಿಸಬಹುದು ಎಂದು ತಿಳಿಸಿದ್ದಾರೆ.