ಮೈಸೂರು : ಬೈಕ್ಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮೈಸೂರು ನಂಜನಗೂಡು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ನಂಜನಗೂಡು ತಾಲೂಕಿನ ನಂದಗುಂದ ಗ್ರಾಮದ ಮಹದೇವಪ್ಪ ಎಂಬುವರ ಪುತ್ರ ಸುರೇಶ್ (40) ಅಪಘಾತದಲ್ಲಿ ಮೃತಪಟ್ಟ ದುರ್ದೈವಿ.
ನಂಜನಗೂಡು ಮೈಸೂರು ಹೆದ್ದಾರಿಯ ಬಂಚಳ್ಳಿ ಹುಂಡಿ ಬಳಿಯಿರುವ ಶ್ರೀ ಪ್ರಸನ್ನ ನಂಜುಂಡೇಶ್ವರ ದೇವಸ್ಥಾನ ಬಳಿ ಈ ಘಟನೆ ನಡೆದಿದೆ. ದೇವಾಲಯದ ಎದುರಿಗಿರುವ ರಸ್ತೆ ದಾಟುತ್ತಿದ್ದ ವೇಳೆ ಸುರೇಶ್ ಬೈಕಿಗೆ ನಂಜನಗೂಡಿನಿಂದ ಮೈಸೂರಿಗೆ ತೆರಳುತ್ತಿದ್ದ ಬಸ್ ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ಸುರೇಶ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಸ್ಥಳಕ್ಕೆ ವೃತ್ತನಿರೀಕ್ಷಕ ಲಕ್ಷ್ಮಿಕಾಂತ ತಳವಾರ್ ಹಾಗೂ ಸಂಚಾರಿ ಠಾಣಾ ಪಿಎಸ್ಐ ಲೋಹಿತ್ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ನಂಜನಗೂಡಿನ ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ಕಳಿಸಲಾಗಿದೆ. ಈ ಘಟನೆ ಸಂಬಂಧ ನಂಜನಗೂಡು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜಾಹೀರಾತು : ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ