ಮೈಸೂರು : ದಸರಾ ಉತ್ಸವಕ್ಕೆ ಸಂಬಂಧಪಟ್ಟ ಎಲ್ಲಾ ಖರ್ಚುವೆಚ್ಚಗಳನ್ನು ಅತ್ಯಂತ ಪಾರದರ್ಶಕತೆಯಿಂದ ಮಾಡಲಾಗುವುದು. 10 ರೂಪಾಯಿ ಹಣವೂ ಕೂಡ ಚೆಕ್ ಮೂಲಕವೇ ಪಾವತಿಯಾಗಲಿದೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಭರವಸೆ ನೀಡಿದ್ರು.
ಪತ್ರಿಕಾ ಸಂವಾದದಲ್ಲಿ ಭಾಗವಹಿಸಿ ಮಾತನಾಡಿದ ಅವರು, ದಸರಾ ಸಂಬಂಧಪಟ್ಟ ಎಲ್ಲಾ ಕಾರ್ಯಗಳು ಉತ್ತಮ ರೀತಿಯಲ್ಲಿ ನಡೆಯಲಿದೆ. ಪ್ರತಿ ಬಿಲ್ಗಳೂ ಕೂಡಾ ಚೆಕ್ ಮೂಲಕವೇ ಪಾವತಿಯಾಗಲಿದೆ. ಈ ಮೂಲಕ ಮಧ್ಯವರ್ತಿಗಳ ಹಾವಳಿ ತಪ್ಪಿಸಲು ಸಾಧ್ಯವಾಗುತ್ತದೆ ಎಂದರು.
2,600 ದಸರಾ ಗೋಲ್ಡ್ ಕಾರ್ಡ್ ವಿತರಿಸುವ ಬಗ್ಗೆ ಜಿಲ್ಲಾಧಿಕಾರಿಗಳ ಜೊತೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು. ಇನ್ನೂ, ಭದ್ರತೆಯ ಬಗ್ಗೆ ಯಾವುದೇ ಗೊಂದಲ ಉಂಟಾದರೂ ಅದು ದಸರಾ ಸಂಭ್ರಮದ ಮೇಲೆ ಪ್ರಭಾವ ಬೀರುತ್ತದೆ. ಹಾಗಾಗಿ, ಮುಂಜಾಗ್ರತಾ ಕ್ರಮವಾಗಿ ಭದ್ರತೆ ಮಾಡಿಕೊಳ್ಳಲಾಗಿದ್ದು, ಉನ್ನತ ಪೊಲೀಸ್ ಅಧಿಕಾರಿ ಜೊತೆ ಚರ್ಚಿಸಿದ್ದೇನೆ ಎಂದು ಹೇಳಿದ್ರು.