ETV Bharat / state

ವಿಶ್ವ ಪ್ರವಾಸೋದ್ಯಮ ಜಾಥಾಕ್ಕೆ ಚಾಲನೆ ನೀಡಿದ ಸಚಿವ ಎಸ್ ಟಿ ಸೋಮಶೇಖರ್: ವಿಡಿಯೋ - ಯೋಗಾ ದಿವಸವನ್ನು ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ

ಅರಮನೆಯ ಮುಂಭಾಗದಲ್ಲಿರುವ ಕೋಟೆ ಆಂಜನೇಯ ಸ್ವಾಮೀ ದೇವಸ್ಥಾನದ ಆವರಣದಲ್ಲಿ ವಿಶ್ವ ಪ್ರವಾಸೋದ್ಯಮದ ಜಾಥಾಕ್ಕೆ‌ ಸಚಿವ‌ ಎಸ್.ಟಿ.ಸೋಮಶೇಖರ್ ಚಾಲನೆ ನೀಡಿದರು.

Etv Bharats-t-somashekhar-launched-the-world-tourism-jatha
Etv Bharatವಿಶ್ವ ಪ್ರವಾಸೋದ್ಯಮ ಜಾಥಾಕ್ಕೆ ಚಾಲನೆ ನೀಡಿದ ಸಚಿವ ಎಸ್ ಟಿ ಸೋಮಶೇಖರ್
author img

By

Published : Sep 27, 2022, 9:56 PM IST

ಮೈಸೂರು: ಇಲ್ಲಿನ ಅರಮನೆ ಮುಂಭಾಗದಲ್ಲಿರುವ ಕೋಟೆ ಆಂಜನೇಯ ಸ್ವಾಮೀ ದೇವಸ್ಥಾನದ ಆವರಣದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಪ್ರವಾಸೋದ್ಯಮದ ಜಾಥಾಕ್ಕೆ‌ ಸಚಿವ‌ ಎಸ್.ಟಿ.ಸೋಮಶೇಖರ್ ಚಾಲನೆ ನೀಡಿದರು. ಬಳಿಕ ಮಾತನಾಡಿದ ಸಚಿವರು, ಟ್ರಾವೆಲ್ಸ್ ಅಸೋಸಿಯೇಷನ್, ಹೋಟೆಲ್ ಮಾಲೀಕರ ಸಂಘ ಸೇರಿದಂತೆ ನಾನಾ ಸಂಘಟನೆಗಳಿಂದ ಹಮ್ಮಿಕೊಂಡಿರುವ ಈ ಮೆರವಣಿಗೆ ಪ್ರವಾಸಿಗರನ್ನು ಸೆಳೆಯಲು ಸಹಕಾರಿಯಾಗಲಿದೆ ಎಂದರು.

ವಿಶ್ವ ಪ್ರವಾಸೋದ್ಯಮ ಜಾಥಾಕ್ಕೆ ಚಾಲನೆ ನೀಡಿದ ಸಚಿವ ಎಸ್ ಟಿ ಸೋಮಶೇಖರ್

ಈ ಬಾರಿ ಅದ್ಧೂರಿಯಾಗಿ ದಸರಾ ಆಚರಣೆ ಮಾಡುತ್ತಿರುವುದರಿಂದ ಪ್ರವಾಸೋದ್ಯಮಕ್ಕೆ ಚೇತರಿಕೆ ಸಿಗಲಿದೆ. ದೇಶ ವಿದೇಶಗಳಿಂದ ಲಕ್ಷಾಂತರ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಿದ್ದಾರೆ. ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಚಾಲನೆ ನೀಡುತ್ತಿರುವುದಕ್ಕೆ ತುಂಬಾ ಖುಷಿಯಾಗುತ್ತಿದೆ. ಗೋಲ್ಡ್ ಪಾಸ್ ಬಗ್ಗೆ ರೂಪುರೇಷೆಗಳನ್ನು ಮಾಡಿದ ನಂತರ ಸಭೆಯಲ್ಲಿ ತಿರ್ಮಾನ ಕೈಗೊಂಡು ತಿಳಿಸಲಾಗುವುದು ಎಂದರು.

ಜಿ.ಟಿ.ದೇವೇಗೌಡ ಅವರು ಮಾತನಾಡಿ, ಈ ವರ್ಷ ಯೋಗಾ ದಿವಸವನ್ನು ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಬಂದು ಆಚರಿಸಿದ್ದು, ಈ ಬಾರಿಯ ದಸರಾ ಮಹೋತ್ಸವಕ್ಕೆ ರಾಷ್ಟ್ರಪತಿಗಳು ಬಂದು ಉದ್ಘಾಟಿಸಿದ್ದರಿಂದ ವಿಶ್ವಮಟ್ಟದಲ್ಲಿ ಮೈಸೂರನ್ನು ಹಾಗೂ ಮೈಸೂರು ದಸರಾವನ್ನು ನೋಡುವಂತೆ ಮಾಡಿದೆ. ಈ ಬಾರಿಯ ದಸರಾ ಮಹೋತ್ಸವದಲ್ಲಿ ಎಲ್ಲರೂ ಸಂಭ್ರಮದಿಂದ ಸಡಗರದಿಂದ ಆಚರಿಸುವ ಮೂಲಕ ಯಶಸ್ವಿಗೊಳಿಸೋಣ ಎಂದರು.

ಪ್ರವಾಸಿಗರ ಮನ ಸೆಳೆದ ಕಲಾತಂಡಗಳು: ಇದೇ ಸಂದರ್ಭದಲ್ಲಿ ನಾನಾ ರಾಜ್ಯಗಳ ಸಂಸ್ಕೃತಿಗಳನ್ನು ಬಿಂಬಿಸುವ ವೇಷಭೂಷಣಗಳು ಎಲ್ಲರ ಗಮನ ಸೆಳೆದವು. ಬ್ಯಾಂಡ್‍ಸೆಟ್, ಡೊಳ್ಳುಕುಣಿತ, ಕಂಸಾಳೆನೃತ್ಯ, ತಮಟೆವಾದನ, ಹುಲಿವೇಷದ ಕಲಾ ತಂಡಗಳು ಮೆರವಣಿಗೆಯಲ್ಲಿ ಉತ್ಸಾಹದಿಂದ ಪಾಲ್ಗೊಂಡು ನೋಡುಗರ ಗಮನ ಸೆಳೆದವು.

ಇದನ್ನೂ ಓದಿ : ನವರಾತ್ರಿಯಲ್ಲಿ ವಿಶೇಷ ಗೊಂಬೆ ಪೂಜೆ: ಮಹತ್ವ ಮತ್ತು ಐತಿಹ್ಯ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.