ಮೈಸೂರು: ಸಾಲಿಗ್ರಾಮದಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಲ್ಲಿಗೆ ಬಂದು ಹೇಳಿಕೆ ಕೊಡುವವರೆಲ್ಲ ಸ್ಥಳೀಯರೇ ಅಲ್ಲ. ನನ್ನ ಕ್ಷೇತ್ರದ ಜನರೊಂದಿಗೆ ನಾನಿರುತ್ತೇನೆ ಎಂದು ಶಾಸಕ ಎನ್. ಮಹೇಶ್ಗೆ ಕೆ.ಆರ್. ನಗರ ಕ್ಷೇತ್ರದ ಶಾಸಕ ಸಾ.ರಾ. ಮಹೇಶ್ ತಿರುಗೇಟು ನೀಡಿದ್ದಾರೆ.
ನಗರದ ಜಲದರ್ಶಿನಿ ಅತಿಥಿಗೃಹದಲ್ಲಿ ಲೆಕ್ಕಪತ್ರ ಸಮಿತಿಗಳ ಸಭೆಗೂ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಾಲಿಗ್ರಾಮದಲ್ಲಿ ಹಿಂದೆ ಗೋಲಿಬಾರ್ ಪ್ರಕರಣಗಳೇ ನಡೆದಿವೆ. ನಾನು ಶಾಸಕನಾದ ನಂತರ ಅಂತಹ ಪ್ರಕರಣಗಳು ಕಡಿಮೆಯಾಗಿವೆ. ಆದರೆ, ಗಲಭೆ ಸ್ಥಳಗಳಲ್ಲಿ ರಾಜಕಾರಣ ಮಾಡಿ ಜನರಿಗೆ ನೋವು ಕೊಡಬಾರದು ಎಂದರು. ಗಲಭೆ ಸಂಬಂಧ ಪೊಲೀಸರು ವಿಚಾರಣೆ ಮಾಡುತ್ತಿದ್ದಾರೆ. ಎರಡೂ ಕಡೆಯ ಕೆಲವರು ನಾಪತ್ತೆಯಾಗಿದ್ದಾರೆ. ಅವರನ್ನು ವಶಕ್ಕೆ ಪಡೆದು ವಿಚಾರಣೆ ಮಾಡಲಿದ್ದಾರೆ. ವಿಚಾರಣೆ ಪೂರ್ಣಗೊಂಡ ನಂತರ ಸತ್ಯಾಂಶ ಹೊರಬರಲಿದೆ ಎಂದ್ರು.
ಕಾಂಗ್ರೆಸ್ನೊಂದಿಗೆ ಮೈತ್ರಿ ಮುಂದುವರಿಕೆ:
ಮೈಸೂರು ಮೇಯರ್ ಹಾಗೂ ಉಪಮೇಯರ್ ಚುನಾವಣೆ ದಿನಾಂಕ ಹತ್ತಿರವಾಗುತ್ತಿರುವ ಹಿನ್ನೆಲೆಯಲ್ಲಿ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಸಾ.ರಾ. ಮಹೇಶ್, ಕಾಂಗ್ರೆಸ್-ಜೆಡಿಎಸ್ ಹೊಂದಾಣಿಕೆ ಮುಂದುವರಿಯಲಿದೆ. ಇದರಲ್ಲಿ ಅನುಮಾನವೇ ಬೇಡ ಎಂದಿದ್ದಾರೆ.