ಮೈಸೂರು: ಕೃಷಿ ಇಲಾಖೆಯಲ್ಲಿ ವರ್ಗಾವಣೆ ಹೆಸರಿನಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಕೃಷಿ ಇಲಾಖೆಯ ಅಧಿಕಾರಿಗಳು ಸಿಎಂಗೆ ಪತ್ರ ಬರೆದಿದ್ದಾರೆ. ಈ ಬಗ್ಗೆ ಕೃಷಿ ಸಚಿವರು ಸ್ಪಷ್ಟನೆ ನೀಡಬೇಕೆಂದು ಟ್ವಿಟರ್ನಲ್ಲಿ ಮಾಜಿ ಸಚಿವ ಸಾ.ರಾ.ಮಹೇಶ್ ಆಗ್ರಹಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಸಮಸ್ಯೆ ಬಗೆಹರಿಸದಿದ್ದರೆ ಅಧಿಕಾರಿಗಳು ಸಾಮೂಹಿಕ ದಯಾ ಮರಣಕ್ಕೆ ಅರ್ಜಿ ಸಲ್ಲಿಸುವುದಾಗಿ ಹೇಳಿದ್ದಾರೆ. ಕೂಡಲೇ ಕೃಷಿ ಸಚಿವರ ರಾಜೀನಾಮೆಯನ್ನು ಸಿಎಂ ಪಡೆಯಬೇಕೆಂದು ಆಗ್ರಹಿಸಿದ್ದಾರೆ.
ದುರ್ಬಲ ಮನಸಿನ ರೈತರು ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ ಎಂದು ರೈತ ಸಮುದಾಯವನ್ನು ಗೇಲಿ ಮಾಡಿರುವ ಸಚಿವ ಬಿ.ಸಿ.ಪಾಟೀಲ್ ರೈತರ ಕ್ಷಮೆ ಕೇಳಬೇಕು. ಜೊತೆಗೆ ಕೃಷಿ ಇಲಾಖೆಯ ಸಿಬ್ಬಂದಿ ಮಾಡಿರುವ ಲಂಚದ ಆರೋಪದ ಪತ್ರದ ಬಗ್ಗೆ ಸ್ಪಷ್ಟನೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.