ಮೈಸೂರು: ಒಂದೇ ಕುಟುಂಬದ ನಾಲ್ವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು ಸರ್ಕಾರಿ ಆಸ್ಪತ್ರೆಯನ್ನು ಸೀಲ್‌ಡೌನ್ ಮಾಡಿರುವ ಘಟನೆ ಸರಗೂರು ತಾಲೂಕಿನಲ್ಲಿ ನಡೆದಿದೆ. ಸೋಂಕಿತರನ್ನು ಮೈಸೂರು ಕೋವಿಡ್ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.
ಸರಗೂರು ಆಸ್ಪತ್ರೆಗೆ ಸೋಂಕಿತರು ಭೇಟಿ ನೀಡಿದ್ದು ತಾಲೂಕು ಆಸ್ಪತ್ರೆಗೆ ಸ್ಯಾನಿಟೈಸರ್ ಸಿಂಪಡಿಸಲಾಗಿದೆ ಎಂದು ತಾಲೂಕು ವೈದ್ಯಾಧಿಕಾರಿ ತಿಳಿಸಿದ್ದಾರೆ.