ಮೈಸೂರು: ನಾಳೆ ನಡೆಯಲಿರುವ ದ್ವಿತೀಯ ಪಿಯುಸಿ ಇಂಗ್ಲಿಷ್ ಪರೀಕ್ಷೆಗೆ ಜಿಲ್ಲಾ ಪದವಿಪೂರ್ವ ಶಿಕ್ಷಣ ಇಲಾಖೆ ಸಕಲ ರೀತಿಯಲ್ಲಿ ಸಿದ್ಧವಾಗಿದೆ.
ದೀರ್ಘಾವಧಿಯ ಬಳಿಕ ನಡೆಯುತ್ತಿರುವ ದ್ವಿತೀಯ ಪಿಯುಸಿ ಇಂಗ್ಲಿಷ್ ಪರೀಕ್ಷೆಗಾಗಿ 26 ಕೇಂದ್ರಗಳಲ್ಲಿ ಹಾಗೂ 24 ತಾಲೂಕು ಕೇಂದ್ರಗಳಲ್ಲಿ ಪರೀಕ್ಷೆ ನಡೆಯುತ್ತಿದೆ. ಒಟ್ಟು 31,569 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ಇದಕ್ಕಾಗಿ ಪರೀಕ್ಷೆ ಕೇಂದ್ರಗಳನ್ನು ಸ್ಯಾನಿಟೈಸ್ ಮಾಡಲಾಗಿದೆ.
ಒಂದು ಗಂಟೆ ಮೊದಲೇ ಪರೀಕ್ಷಾ ಕೇಂದ್ರಗಳಿಗೆ ವಿದ್ಯಾರ್ಥಿಗಳು ಆಗಮಿಸಿ ಥರ್ಮಲ್ ಟೆಸ್ಟಿಂಗ್ ಮಾಡಿಸಿಕೊಳ್ಳಬೇಕು. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಿಕೊಂಡು ಬರಬೇಕು ಎಂದು ಸೂಚಿಸಲಾಗಿದೆ.
ಕೊಠಡಿ ಒಂದರಲ್ಲಿ 24 ವಿದ್ಯಾರ್ಥಿಗಳಿಗೆ 3 ಅಡಿ ಅಂತರದಲ್ಲಿ ಕುಳಿತು ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಲಾಗಿದೆ. ಶೀತ, ಕೆಮ್ಮು ಮತ್ತು ನೆಗಡಿ ಇರುವ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಲಾಗಿದೆ. ವಿದ್ಯಾರ್ಥಿಗಳ ಪರೀಕ್ಷಾ ಕೇಂದ್ರಗಳಿಗೆ ಉಚಿತ ಬಸ್ ಸೇವೆಯನ್ನು ವ್ಯವಸ್ಥೆ ಇರಲಿದೆ. ವಿದ್ಯಾರ್ಥಿಗಳು ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿ ಉಚಿತವಾಗಿ ಪ್ರಯಾಣಿಸಬಹುದು ಎಂದು ಜಿಲ್ಲಾ ಉಪ ನಿರ್ದೇಶಕರಾದ ಡಾ. ಗೀತಾ ತಿಳಿಸಿದ್ದಾರೆ.