ಮೈಸೂರು: ಮೈಸೂರಿನ ಶತಮಾನ ಕಂಡ ಸಾಧ್ವಿ ಪತ್ರಿಕೆಯ ಸಂಪಾದಕರಾದ ಸಿ.ಮಹೇಶ್ವರನ್ (65) ನಿಧನರಾಗಿದ್ದಾರೆ. ಚಾಮುಂಡಿಬೆಟ್ಟದ ತಪ್ಪಲಿನ ಕೆ. ಸಿ.ಲೇಔಟ್ನ ತಮ್ಮ ನಿವಾಸದಲ್ಲಿ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಅನಾರೋಗ್ಯಕ್ಕೆ ಒಳಗಾಗಿ ಚಿಕಿತ್ಸೆ ಪಡೆದು ನಾಲ್ಕು ದಿನಗಳ ಹಿಂದೆ ಮನೆಗೆ ಹಿಂತಿರುಗಿದ್ದರು.
ಮೈಸೂರಿನ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಅಗರಂ ರಂಗಯ್ಯ ಅವರು ಪ್ರಾರಂಭಿಸಿದ್ದ ಸಾಧ್ವಿ ಪತ್ರಿಕೆ ಸ್ವಾತಂತ್ರ್ಯ ಹೋರಾಟದ ವೇಳೆ ಬ್ರಿಟಿಷರಿಗೆ ಸಿಂಹಸ್ವಪ್ನವಾಗಿತ್ತು. ಪರಿಣಾಮ, ನಾಲ್ಕು ಬಾರಿ ಪತ್ರಿಕೆ ಕಚೇರಿ ಮೇಲೆ ದಾಳಿ ಮಾಡಿದ್ದ ಬ್ರಿಟಿಷರು ಪತ್ರಿಕೆಯ ಮುದ್ರಣೋಪಕರಣಗಳನ್ನು ಜಪ್ತಿ ಮಾಡಿದ್ದು ಇತಿಹಾಸ.
ಇದನ್ನೂ ಓದಿ: ದ್ವಿತೀಯ ಪಿಯು ಪರೀಕ್ಷೆಗೆ ತಯಾರಿ ಹೇಗೆ? ಆರೋಗ್ಯದ ಕಾಳಜಿ ಎಷ್ಟು ಅಗತ್ಯ? ಇಲ್ಲಿದೆ ಉಪಯುಕ್ತ ಟಿಪ್ಸ್!
ಇತ್ತೀಚೆಗಷ್ಟೇ ರಾಜ್ಯ ಸರ್ಕಾರ ಕೊಡ ಮಾಡುವ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಇವರು ಭಾಜನರಾಗಿದ್ದರು. ಮೃತರು ಪತ್ನಿ, ಇಬ್ಬರು ಗಂಡು ಮಕ್ಕಳು, ಸಾಧ್ವಿ ಬಳಗ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.