ಮೈಸೂರು: ಕಳೆದ ರಾತ್ರಿ ಸರಣಿ ಕಳ್ಳತನವಾಗಿರುವ ಘಟನೆ ನಗರದ ಎಪಿಎಂಸಿ ಮಾರ್ಕೆಟ್ನಲ್ಲಿ ನಡೆದಿದೆ.
ಮೈಸೂರು-ಊಟಿ ರಸ್ತೆಯಲ್ಲಿರುವ ಎಪಿಎಂಸಿ ಮಾರ್ಕೆಟ್ನಲ್ಲಿ ನಿನ್ನೆ ರಾತ್ರಿ ಖದೀಮರು ತಮ್ಮ ಕೈಚಳಕ ತೋರಿಸಿ 10 ಅಂಗಡಿಗಳ ಶೆಟರ್ ಮುರಿದು ಒಳಗೆ ನುಗ್ಗಿ ನಗದು ಹಾಗೂ ವಸ್ತುಗಳನ್ನು ಕದ್ದು ಪರಾರಿಯಾಗಿದ್ದಾರೆ.
ಈ ಕಳ್ಳತನದ ದೃಶ್ಯ ಸಿಸಿಟಿಯಲ್ಲಿ ಸೆರೆಯಾಗಿದೆ. ಇಂದು ಬೆಳಗ್ಗೆ ಅಂಗಡಿಯ ಸಾಮಾನುಗಳನ್ನು ಲಾರಿಗಳಿಗೆ ಲೋಡ್ ಮಾಡಲು ಬಂದಾಗ ಪ್ರಕರಣ ಬೆಳಕಿಗೆ ಬಂದಿದೆ. ಅಂಗಡಿ ಮಾಲೀಕರು ಪೊಲೀಸರಿಗೆ ಕರೆ ಮಾಡಿ ಮಾಹಿತಿ ತಿಳಿಸಿದ್ದಾರೆ. ಮೈಸೂರು ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.