ಮೈಸೂರು: ಮೂವರು ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಗೆ ನಗರದ ಪೋಸ್ಕೋ ನ್ಯಾಯಾಲಯ 10 ವರ್ಷ ಕಠಿಣ ಸಜೆ ವಿಧಿಸಿ ತೀರ್ಪು ನೀಡಿದೆ.
ಹೀಗೆ 10 ವರ್ಷ ಕಠಿಣ ಶಿಕ್ಷೆಗೆ ಒಳಗಾದವನು ಶಾಂತಿನಗರದ 30 ವರ್ಷದ ವ್ಯಕ್ತಿಯಾಗಿದ್ದಾನೆ. ಈತ 2016 ರಲ್ಲಿ ಮೂವರು ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಬಾಲಕಿಯೊಬ್ಬರ ತಾಯಿ ಉದಯಗಿರಿ ಪೋಲಿಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ದೂರಿನನ್ವಯ ತನಿಖೆ ಆರಂಭಿಸಿದ ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಿ, ಪೋಸ್ಕೋ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಸದ್ಯ ಈ ಬಗ್ಗೆ ವಾದ - ಪ್ರತಿವಾದ ಆಲಿಸಿದ ನ್ಯಾಯಾಧೀಶರು ಆರೋಪಿ ತಪ್ಪಿತಸ್ಥ ಎಂದು ಪರಿಗಣಿಸಿ 10 ವರ್ಷ ಜೈಲು 1 ಲಕ್ಷ 59 ಸಾವಿರ ರೂಪಾಯಿ ದಂಡ ವಿಧಿಸಿದ್ದಾರೆ.