ಮೈಸೂರು: ಸಾಂಸ್ಕೃತಿಕ ನಗರಿಯಲ್ಲಿರುವ ಪ್ರಸಿದ್ಧ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಷಷ್ಠಿ ಸಂಭ್ರಮದ ಹಿನ್ನೆಲೆಯಲ್ಲಿ ಬೆಳಗ್ಗೆಯಿಂದಲೇ ಪೂಜಾ ಕೈಂಕರ್ಯಗಳು ನಡೆದವು.
ನಗರದ ಬೆಂಗಳೂರು ರಸ್ತೆಯಲ್ಲಿರುವ ಸಿದ್ದಲಿಂಗಪುರದ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಷಷ್ಠಿ ಪ್ರಯುಕ್ತ ವಿಶೇಷ ಪೂಜೆ ನಡೆದಿದ್ದು, ಬೆಳಗ್ಗೆಯಿಂದಲೇ ಜನರು ದೇವಸ್ಥಾನಕ್ಕೆ ಆಗಮಿಸಿ ಪೂಜೆ ಸಲ್ಲಿಸಿ ದೇವಸ್ಥಾನದ ಪಕ್ಕದಲ್ಲಿರುವ ಹುತ್ತಕ್ಕೆ ಪೂಜೆ ಸಲ್ಲಿಸಿ ಹಾಲೆರೆದರು. ಇದಕ್ಕೂ ಮುಂಚೆ ದೇವಾಲಯದಲ್ಲಿ ಬೆಳಗ್ಗೆ 4 ಗಂಟೆಗೆ ದೇವಸ್ಥಾನದಲ್ಲಿ ದೇವರಿಗೆ ಅಭಿಷೇಕ, ಅರ್ಚನೆ ಮತ್ತು ಮಹಾಮಂಗಳಾರತಿ ನಡೆಯಿತು.