ಮೈಸೂರು: ಸಿದ್ದರಾಮಯ್ಯ ಆಡಳಿತಾವಧಿಯಲ್ಲಿ ಎಷ್ಟು ಸಾಲ ಮಾಡಿದ್ದಾರೆ ಎಂಬುದನ್ನು ಬಹಿರಂಗಗೊಳಿಸಲಿ ಎಂದು ಸಂಸದೆ ಶೋಭಾ ಕರಂದ್ಲಾಜೆ ಸವಾಲು ಹಾಕಿದ್ದಾರೆ.
ಸಿದ್ದರಾಮಯ್ಯ ಮೊದಲು ತಮ್ಮ ಬೆನ್ನನ್ನು ತಾವು ನೋಡಿಕೊಳ್ಳಲಿ. ನಂತರ ರಾಜ್ಯ ಬಿಜೆಪಿ ಸರ್ಕಾರದ ಬಗ್ಗೆ ಮಾತನಾಡಲಿ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕೇಂದ್ರ ಸರ್ಕಾರ ರಾಜ್ಯದ ನೆರೆಗೆ ಸೂಕ್ತವಾಗಿ ಸ್ಪಂದಿಸಿದೆ. ಯುಪಿಎ ಸರ್ಕಾರ ಇದ್ದಾಗ ಎಷ್ಟು ಹಣ ರಾಜ್ಯಕ್ಕೆ ನೀಡಿತ್ತು ಎಂಬುವುದನ್ನು ಸಿದ್ದರಾಮಯ್ಯ ಹೇಳಬೇಕಿದೆ. ಕೇಂದ್ರ ಸರ್ಕಾರ ಮತ್ತೊಂದು ಕಂತಿನ ಹಣ ಬಿಡುಗಡೆ ಮಾಡಲಿದೆ ಎಂದರು.