ETV Bharat / state

ಸಿಎಂ ಸ್ಥಾನದ ಆಯ್ಕೆ ಕಾಂಗ್ರೆಸ್​ ಪಕ್ಷದ ಆಂತರಿಕ ವಿಚಾರ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ - ಶೋಭಾ ಕರಂದ್ಲಾಜೆ

ದೇಶಾದ್ಯಂತ 75 ಸಾವಿರ ಯುವಕ ಯುವತಿಯರಿಗೆ ಸರ್ಕಾರಿ ಉದ್ಯೋಗ ನೀಡುವ ಕೆಲಸ ನಡೆಯುತ್ತಿದೆ ಎಂದು ಶೋಭಾ ಕರಂದ್ಲಾಜೆ ಹೇಳಿದರು.

ಶೋಭಾ ಕರಂದ್ಲಾಜೆ
ಶೋಭಾ ಕರಂದ್ಲಾಜೆ
author img

By

Published : May 16, 2023, 1:00 PM IST

ಕಾಂಗ್ರೆಸ್​ ಸಿಎಂ ಆಯ್ಕೆ ಬಗ್ಗೆ ಶೋಭಾ ಕರಂದ್ಲಾಜೆ ಪ್ರತಿಕ್ರಿಯೆ

ಮೈಸೂರು: ಸಿಎಂ ಸ್ಥಾನ ಅವರ ಪಕ್ಷದ ಆಂತರಿಕ ವಿಚಾರ, ಅವರು ಅವರ ಶಾಸಕರಿಗೆ ಏನೇನು ಭರವಸೆ ಕೊಟ್ಟಿದ್ದಾರೋ ಗೊತ್ತಿಲ್ಲ. ಅವರ ಆಂತರಿಕ ವಿಚಾರಗಳನ್ನು ಅವರೇ ಬಗೆಹರಿಸಿಕೊಳ್ಳಲಿ ಎಂದು ಕಾಂಗ್ರೆಸ್ ಪಕ್ಷದ ಸಿಎಂ ಆಯ್ಕೆಯ ಗೊಂದಲದ ಬಗ್ಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮಾತನಾಡಿದರು.

ಇಂದು ಮೈಸೂರಿನ ವಾಕ್ ಶ್ರವಣ ಸಂಸ್ಥೆ ಆವರಣದಲ್ಲಿ ಏರ್ಪಡಿಸಿದ್ದ ಉದ್ಯೋಗ ಮೇಳದ ಉದ್ಘಾಟನೆಗೆ ಆಗಮಿಸಿದ ಸಂದರ್ಭದಲ್ಲಿ, ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಶೋಭಾ ಕರಂದ್ಲಾಜೆ, ದೇಶಾದ್ಯಂತ 75 ಸಾವಿರ ಯುವಕ ಯುವತಿಯರಿಗೆ ಸರ್ಕಾರಿ ಉದ್ಯೋಗ ನೀಡುವ ಕೆಲಸ ನಡೆಯುತ್ತಿದ್ದು ಇದಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಅಭಿನಂದನೆ ಸಲ್ಲಿಸುತ್ತೇನೆ.

ಕಳೆದ ಮೂರು ಬಾರಿ ದೇಶದ ಬೇರೆ ಬೇರೆ ಭಾಗಗಳಲ್ಲಿ, ಬೇರೆ ಬೇರೆ ಡಿಪಾರ್ಟ್ಮೆಂಟ್​ಗಳಲ್ಲಿ ಕೇಂದ್ರ ಸರ್ಕಾರದ ಹಾಗೂ ಅದಕ್ಕೆ ಸಂಬಂಧಿಸಿದ ಸಂಸ್ಥೆಗಳಲ್ಲಿ, ಯುವಕರಿಗೆ ಮತ್ತು ಯುವತಿಯರಿಗೆ ಉದ್ಯೋಗ ನೀಡುವ ಕೆಲಸ ಆರಂಭವಾಗಿದೆ. ಅತಿ ಅಗತ್ಯ ಇರುವ ಉದ್ಯೋಗಗಳನ್ನು ತುಂಬುವಂತೆ ರಾಜ್ಯ ಸರ್ಕಾರಗಳಿಗೆ ಕೇಂದ್ರ ಸರ್ಕಾರ ಆಗ್ರಹ ಮಾಡಿದೆ ಎಂದರು.

ತುಂಬಾ ಉದ್ಯೋಗಗಳು ಖಾಲಿ ಇವೆ. ಹಣಕಾಸು ಸಮಸ್ಯೆಗಳಿಂದ ಈ ಉದ್ಯೋಗಗಳನ್ನು ತುಂಬಲು ಸಾಧ್ಯವಾಗುತ್ತಿಲ್ಲ. ಹಿಂದಿನ ಸರ್ಕಾರಗಳು ಇದರ ಕಡೆ ಗಮನ ಹರಿಸಿಲ್ಲ. ಒಂದೇ ಕಾರ್ಯಕ್ರಮದಲ್ಲಿ ಎಲ್ಲರಿಗೂ ಉದ್ಯೋಗ ನೀಡುವ ಸಂಕಲ್ಪ ಇತ್ತು. ಅದೇ ರೀತಿ ಇಂದು ದೇಶದ ಬೇರೆಬೇರೆ ಕಡೆ ಉದ್ಯೋಗ ನೀಡುವ ಕೆಲಸ ನಡೆಯುತ್ತಿದೆ ಎಂದು ಹೇಳಿದರು.

ಕೇಂದ್ರ ಸರ್ಕಾರದ ಹಲವಾರು ಯೋಜನೆಗಳನ್ನು ಹಳ್ಳಿಗಳಿಗೆ ತಲುಪಿಸುವಲ್ಲಿ ಯಡಿಯೂರಪ್ಪ ಹಾಗೂ ಬೊಮ್ಮಾಯಿ ಸರ್ಕಾರ ಶೇ.95 ರಷ್ಟು ಯಶಸ್ವಿಯಾಗಿದೆ. ಪ್ರಜಾತಂತ್ರ ವ್ಯವಸ್ಥೆಯಲ್ಲಿ ಸೋಲು ಗೆಲುವು ಇದ್ದೆ ಇರುತ್ತದೆ. ಚುನಾವಣೆಗಳು ಬಂದಾಗ ಬೇರೆ ಬೇರೆ ರೀತಿ ಚುನಾವಣೆ ನಡೆಯುವುದು ಗೊತ್ತೇ ಇದೆ. ಮುಂಬರುವ ದಿನಗಳಲ್ಲಿ ವಿರೋಧ ಪಕ್ಷವಾಗಿ ಒಳ್ಳೆಯ ರೀತಿ ಕೆಲಸ ಮಾಡುತ್ತೇವೆ. ಯಾರು ಗೆದ್ದಿದ್ದಾರೋ ಅವರಿಗೆ ಶುಭವಾಗಲಿ. ಅವರು ಯಾವ ಭರವಸೆಗಳನ್ನು ಕೊಟ್ಟಿದ್ದಾರೋ ಅವುಗಳನ್ನು ಈಡೇರಿಸುವ ಶಕ್ತಿ ಕೊಡಲಿ ಎಂದು ಕೇಳಿಕೊಳ್ಳುತ್ತೇನೆ ಎಂದರು.

ಸಿಎಂ ಸ್ಥಾನ ಆಯ್ಕೆ ಅವರ ಪಕ್ಷದ ಆಂತರಿಕ ವಿಚಾರ. ಅವರು ಅವರ ಶಾಸಕರಿಗೆ ಏನೇನು ಭರವಸೆ ಕೊಟ್ಟಿದ್ದಾರೊ ಗೊತ್ತಿಲ್ಲ. ‌ಅವರ ಆಂತರಿಕ ಸಮಸ್ಯೆಗಳನ್ನು ಹಾಗೂ ಅವರ ಆಂತರಿಕ ವಿಷಯಗಳನ್ನು ಅವರೇ ಬಗೆಹರಿಸಿಕೊಳ್ಳುತ್ತಾರೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಇದೇ ಸಂದರ್ಭದಲ್ಲಿ ತಿಳಿಸಿದರು.

ಸಿಎಂ ಆಯ್ಕೆ ವಿಚಾರವಾಗಿ ಕಾಂಗ್ರೆಸ್​​ ಹೈಕಮಾಂಡ್​ ಅಂತಿಮ ನಿರ್ಧಾರ ಕೈಗೊಳ್ಳಲು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್​ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ದೆಹಲಿಗೆ ಬರುವಂತೆ ಆಹ್ವಾನ ನೀಡಿದೆ. ಈ ಹಿನ್ನೆಲೆ ಇಬ್ಬರು ಸಿಎಂ ಆಕಾಂಕ್ಷಿ ಅಭ್ಯರ್ಥಿಗಳು ದೆಹಲಿಗೆ ಹಾರಿದ್ದಾರೆ. ರಾಜ್ಯ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರ ಆಯ್ಕೆಗೆ ತೀವ್ರ ಕಸರತ್ತು ನಡೆಯುತ್ತಿದ್ದು, ಈ ವಿಚಾರವಾಗಿ ಇಂದು ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ ಎನ್ನಲಾಗಿದೆ.

ಇದನ್ನೂ ಓದಿ: ಮಕ್ಕಳಿಗೆ ಏನು ಕೊಡಬೇಕೆಂದು ತಾಯಿಗೆ ಗೊತ್ತಿದೆ: ನಾನೊಬ್ಬನೇ ದೆಹಲಿಗೆ ಹೋಗುತ್ತಿದ್ದೇನೆ: ಡಿಕೆಶಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.