ETV Bharat / state

ಚಾಮುಂಡೇಶ್ವರಿ ಗೆಲ್ಲಲು ಪಣತೊಟ್ಟ ಸಿದ್ದರಾಮಯ್ಯ: ಸ್ಥಳೀಯ ನಾಯಕರೊಂದಿಗೆ ಗೌಪ್ಯ ಸಭೆ - ಸಿದ್ದರಾಮಯ್ಯ ಸ್ಥಳೀಯ ನಾಯಕರ ಜೊತೆ ಸಭೆ

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಗೆಲ್ಲಲೇ ಬೇಕೆಂದು ಪಣತೊಟ್ಟ ಸಿದ್ದರಾಮಯ್ಯ ನಿನ್ನೆ ಸ್ಥಳೀಯ ನಾಯಕರ ಜೊತೆ ಮಾತುಕತೆ ನಡೆಸಿದ್ದಾರೆ.

ಸಿದ್ದರಾಮಯ್ಯ
siddaramaiah
author img

By

Published : Mar 13, 2023, 1:11 PM IST

ಮೈಸೂರು : ಚಾಮುಂಡೇಶ್ವರಿ ಕ್ಷೇತ್ರಕ್ಕೆ ಈ ಬಾರಿ ಯಾರಿಗೆ ಟಿಕೆಟ್ ನೀಡಬೇಕು ಎಂಬ ಬಗ್ಗೆ ಚರ್ಚೆ ನಡೆಸಲು ನಿನ್ನೆ ರಾತ್ರಿ ಮೈಸೂರಿನ ಖಾಸಗಿ ಹೋಟೆಲ್​ನಲ್ಲಿ ಸೇರಿದ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಸ್ಥಳೀಯ ನಾಯಕರ ಜೊತೆ ಸಭೆ ನಡೆಸಿದ್ದಾರೆ. ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸ್ಥಾನಕ್ಕೆ 12 ಕ್ಕೂ ಹೆಚ್ಚು ಜನ ಆಕಾಂಕ್ಷಿಗಳಿದ್ದು, ಅದರಲ್ಲಿ ಇತ್ತೀಚೆಗೆ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಯಾದ ಅನೇಕ ಮಂದಿ ನಾಯಕರಿದ್ದಾರೆ.

ಚಾಮುಂಡೇಶ್ವರಿ ಕ್ಷೇತ್ರಕ್ಕೆ ಯಾರನ್ನು ಕಾಂಗ್ರೆಸ್ ಅಭ್ಯರ್ಥಿಯನ್ನಾಗಿ ಮಾಡಿದರೆ ಗೆಲ್ಲುವ ಸಾಧ್ಯತೆಗಳಿವೆ ಎಂಬ ಕುರಿತು ಚರ್ಚೆ ಮಾಡುವ ಮೂಲಕ ದೆಹಲಿಯಲ್ಲಿ ನಡೆಯುವ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೂ ಮುನ್ನ, ಈ ಕ್ಷೇತ್ರದ ಅಭ್ಯರ್ಥಿ ಯಾರು ಎಂಬುದನ್ನು ಫೈನಲ್ ಮಾಡುವ ಹಿನ್ನೆಲೆಯಲ್ಲಿ ಈ ಮೀಟಿಂಗ್ ನಡೆದಿದೆ ಎನ್ನಲಾಗಿದೆ.

ಜಿ.ಟಿ.ದೇವೇಗೌಡರನ್ನು ಸೋಲಿಸಲು ಒಗ್ಗಟ್ಟಿನ ಮಂತ್ರ : ಕಳೆದ ಬಾರಿ ತಮ್ಮ ಸೋಲನ್ನು ಸವಾಲಾಗಿ ತೆಗೆದುಕೊಂಡಿರುವ ಸಿದ್ದರಾಮಯ್ಯ, ಈ ಬಾರಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲ್ಲಿಸಲೇ ಬೇಕು ಎಂಬ ಹಠಕ್ಕೆ ಬಿದ್ದಿದ್ದಾರೆ. ಹೀಗಾಗಿ, ಚಾಮುಂಡೇಶ್ವರಿ ಕ್ಷೇತ್ರಕ್ಕೆ ಯಾರು ಅಭ್ಯರ್ಥಿಯಾದರೆ‌ ಕಾಂಗ್ರೆಸ್ ಗೆಲ್ಲುತ್ತದೆ ಎಂಬ ಅಭಿಪ್ರಾಯವನ್ನ ಪಡೆದುಕೊಳ್ಳುತ್ತಿದ್ದಾರೆ. ಈಗಾಗಾಲೇ ಕ್ಷೇತ್ರದ ಟಿಕೆಟ್ ಆಕಾಂಕ್ಷಿಗಳಾದ ಹಾಗೂ ಆಪ್ತರಾದ ಮರೀಗೌಡ, ಮಾವಿನಹಳ್ಳಿ ಸಿದ್ದೇಗೌಡ, ಕೂರ್ಗಳ್ಳಿ ಮಹದೇವ್ ಸೇರಿದಂತೆ ಹಲವು ಮುಖಂಡರ ಜೊತೆ ಮಾತುಕತೆ ನಡೆಸಿದರು.

ಇದನ್ನೂ ಓದಿ: ಜನರಿಗೆ ಗ್ಯಾರಂಟಿ ಕಾರ್ಡ್ ಮುಟ್ಟಿಸಲು ವಿಡಿಯೋ ಮೂಲಕ ಸಿದ್ದರಾಮಯ್ಯ, ಡಿಕೆಶಿ ಕರೆ

ಹೇಗಾದರೂ ಮಾಡಿ ಈ ಬಾರಿ ಚಾಮುಂಡೇಶ್ವರಿ ಕ್ಷೇತ್ರವನ್ನು ಕಾಂಗ್ರೆಸ್ ಗೆಲ್ಲಲೇಬೇಕು. ಈ ಹಿನ್ನೆಲೆಯಲ್ಲಿ ಯಾರಿಗೆ ಟಿಕೆಟ್ ನೀಡಿದರೂ ಒಟ್ಟಾಗಿ ಕೆಲಸ ಮಾಡಬೇಕು ಎಂದು ಸ್ಥಳೀಯ ನಾಯಕರಿಗೆ ಸಿದ್ದರಾಮಯ್ಯ ಹೇಳಿದ್ದಾರೆ ಎನ್ನಲಾಗಿದೆ. ನಿನ್ನೆ ರಾತ್ರಿ ಮೈಸೂರಿನಲ್ಲೇ ವಾಸ್ತವ್ಯ ಹೂಡಿದ್ದ ಪ್ರತಿಪಕ್ಷನಾಯಕ, ಇಂದು ಬೆಳಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಯಾವುದೇ ಪ್ರತಿಕ್ರಿಯೆ ನೀಡದೆ ಹೊರಟು ಹೋದರು.

ಜಿ ಟಿ ದೇವೇಗೌಡ ಶಕ್ತಿ ಪ್ರದರ್ಶನ: ಕೊನೆ ಕ್ಷಣದಲ್ಲಿ ಜೆಡಿಎಸ್ ಪಕ್ಷದಲ್ಲೇ ಉಳಿದುಕೊಂಡ ಶಾಸಕ ಜಿ ಟಿ ದೇವೇಗೌಡ ವಿರುದ್ಧ ಬಂಡಾಯವೆದ್ದ ಸ್ಥಳೀಯ ನಾಲ್ಕು ಜನ ನಾಯಕರು, ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷ ಸೇರ್ಪಡೆ ಆದರು. ಇದನ್ನೇ ಪ್ರತಿಷ್ಠೆಯಾಗಿ ತೆಗೆದುಕೊಂಡ ಸ್ಥಳೀಯ ಶಾಸಕ ಜಿ ಟಿ.ದೇವೇಗೌಡ, ಮಗ ಜಿ ಡಿ.ಹರೀಶ್ ಗೌಡ ಹಾಗೂ ನಿಖೀಲ್ ಕುಮಾರಸ್ವಾಮಿ ಹುಟ್ಟುಹಬ್ಬದ ನೆಪದಲ್ಲಿ ಬೃಹತ್ ಕಾರ್ಯಕರ್ತರ ಸಭೆ ನಡೆಸಿ ಶಕ್ತಿ ಪ್ರದರ್ಶನ ನಡೆಸಿದರು.

ಇದನ್ನೂ ಓದಿ: 40% ಕಮಿಷನ್​ಗೆ ದಾಖಲೆ ಕೊಡಿ ಎಂದು ಕೇಳ್ತಿದ್ದ ಬಿಜೆಪಿಗರಿಗೆ ವಿರೂಪಾಕ್ಷಪ್ಪನೇ ಸಾಕ್ಷಿ: ಸಿದ್ದರಾಮಯ್ಯ ವಾಗ್ದಾಳಿ

ಇನ್ನು ಇದೇ ತಿಂಗಳು 26 ರಂದು ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಚಾಮುಂಡೇಶ್ವರಿ ಕ್ಷೇತ್ರದ ಉತ್ತನಹಳ್ಳಿ ದೇವಾಲಯದ ಪಕ್ಕದಲ್ಲಿ ಪಂಚರತ್ನ ಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಸುಮಾರು 10 ಲಕ್ಷಕ್ಕೂ ಹೆಚ್ಚು ಜನರನ್ನು ಸೇರಿಸಿ, ತಮ್ಮ ಹಾಗೂ ಪಕ್ಷದ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ನಿನ್ನೆ ನಡೆಸಿದ ಗುಪ್ತ ಸಭೆ ಮಹತ್ವ ಪಡೆದುಕೊಂಡಿದೆ ಎನ್ನಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.