ಮೈಸೂರು: ವಿಧಾನಸಭೆಯ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಮೈಸೂರಿಗೆ ಭೇಟಿ ನೀಡಿ, ಕೊರೊನಾದಿಂದ ಉಂಟಾಗಿರುವ ಪರಿಸ್ಥಿತಿ ಕುರಿತು ಪರಿಶೀಲನೆ ನಡೆಸಿದರು.
ಜಿಲ್ಲಾಧಿಕಾರಿಗಳ ಕಚೇರಿಗೆ ಭೇಟಿ ನೀಡಿ, ಅಧಿಕಾರಿಗಳ ಜೊತೆ ಸಮಾಲೋಚನೆ ನಡೆಸಿದ ಸಿದ್ದರಾಮಯ್ಯ, ಜಿಲ್ಲಾಡಳಿತ ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ಪಡೆದುಕೊಂಡರು. ಕೊರೊನಾ ಸೋಂಕಿಗೆ ಪ್ರಮುಖ ಕಾರಣವಾದ ಜ್ಯುಬಿಲೆಂಟ್ ಕಾರ್ಖಾನೆ, ಕಾರ್ಮಿಕರ ಪರಿಸ್ಥಿತಿ, ರೈತರಿಗೆ ಉಂಟಾಗಿರುವ ಸಮಸ್ಯೆ, ಕರ್ನಾಟಕ, ಕೇರಳ ಗಡಿ ವಿಚಾರದ ಬಗ್ಗೆಯೂ ಅಧಿಕಾರಿಗಳ ಜೊತೆ ಚರ್ಚಿಸಿದರು.
ಜಿಲ್ಲಾಧಿಕಾರಿ ಅಭಿರಾಮ್ ಶಂಕರ್, ಜಿಲ್ಲಾ ಪಂಚಾಯತ್ ಸಿಇಒ ಪ್ರಶಾಂತ್ ಕುಮಾರ್ ಮಿಶ್ರಾ, ಹೆಚ್ಚುವರಿ ಡಿಸಿ ಪೂರ್ಣಿಮಾ, ಹೆಚ್ಚುವರಿ ಎಸ್ಪಿ ಸ್ನೇಹಾ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.