ಮೈಸೂರು: ಆರೋಪಿ ಸ್ಥಾನದಲ್ಲಿ ಇರುವವರಿಂದ ಮತ್ತೇನು ನಿರೀಕ್ಷೆ ಮಾಡಲು ಸಾಧ್ಯ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಹೇಳಿಕೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
ಇಂದು ಮೈಸೂರಿನ ತಮ್ಮ ಮನೆಯ ಮುಂಭಾಗದಲ್ಲಿ ಮಾಧ್ಯಮದವರ ಪ್ರಶ್ನೆಗೆ ಚುಟುಕಾಗಿ ಉತ್ತರಿಸಿದ ಅವರು, ಸಿಎಂ ಬಸವರಾಜ ಬೊಮ್ಮಾಯಿ ಅವರು ಸಿದ್ದರಾಮಯ್ಯ ಏನು ಹರಿಶ್ಚಂದ್ರಾರಾ?. ಅವರು ಹೇಳಿದ ತಕ್ಷಣ ತನಿಖೆ ಮಾಡಬೇಕಾ? ಎಂಬ ಹೇಳಿಕೆ ಹಾಗೂ ಕಂದಾಯ ಸಚಿವ ಆರ್ ಅಶೋಕ್ ಹೇಳಿಕೆಗೆ ತಿರುಗೇಟು ನೀಡಿದರು. ಆರೋಪಿ ಸ್ಥಾನದಲ್ಲಿ ಇರುವವರಿಂದ ಬೇರೇನು ನಿರೀಕ್ಷಿಸಲು ಸಾಧ್ಯ? ಎಂದು ತಿರುಗೇಟು ನೀಡಿದರು. ನಾಳೆ ಮೈಸೂರಿನ ಪತ್ರಿಕಾ ಭವನದಲ್ಲಿ ಮಾಧ್ಯಮ ಸಂವಾದವಿದ್ದು, ಆಗ ಸಂಪೂರ್ಣವಾಗಿ ಮಾತನಾಡುತ್ತೇನೆ ಎಂದು ಹೇಳಿ ಅಲ್ಲಿಂದ ಹೊರಟು ಹೋದರು.
ಬಿಗಿಯಾದ ಪೊಲೀಸ್ ಬಂದೋಬಸ್ತ್: ಮಡಿಕೇರಿಯಲ್ಲಿ ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದ ಪ್ರಕರಣದ ನಂತರ ಸರ್ಕಾರ ಝಡ್ ಪ್ಲಸ್ ಭದ್ರತೆ ನೀಡಿದ್ದು, ಇದರ ಜೊತೆಗೆ ಸ್ಥಳೀಯ ಪೊಲೀಸರು ತರಬೇತಿ ಪಡೆದ ಕಮಾಂಡೊ ಪಡೆ ಹಾಗೂ ಇನ್ಸ್ಪೆಕ್ಟರ್ ಸೇರಿದಂತೆ ಹೆಚ್ಚಿನ ಭದ್ರತೆಯನ್ನು ಅವರ ನಿವಾಸಕ್ಕೆ ಒದಗಿಸಲಾಗಿದೆ.
ಓದಿ: ಕೆಂಪಣ್ಣರನ್ನು ಮೆಂಟಲ್ ಆಸ್ಪತ್ರೆಗೆ ಕಳುಹಿಸಿ.. ಕೃಷಿ ಸಚಿವ ಬಿಸಿ ಪಾಟೀಲ್ ಗರಂ