ETV Bharat / state

ಸಿದ್ದರಾಮಯ್ಯನ ಒಂದು ತಿಂಗಳು ಅಫ್ಘಾನಿಸ್ತಾನಕ್ಕೆ ಕಳುಹಿಸಬೇಕು: ಸಂಸದ ವಿ ಶ್ರೀನಿವಾಸ್ ಪ್ರಸಾದ್ - ಸಿದ್ದರಾಮಯ್ಯನನ್ನು ಅಫ್ಘಾನಿಸ್ತಾನಕ್ಕೆ ಕಳಿಸಿಬೇಕು ಎಂದ ಸಂಸದ

ಪ್ರಧಾನಿ ಬಗ್ಗೆ ಅಷ್ಟೊಂದು ಹಗುರವಾಗಿ ಮಾತನಾಡುವ ಸಿದ್ದರಾಮಯ್ಯ ಅವರನ್ನು ಒಂದು ತಿಂಗಳ ಮಟ್ಟಿಗೆ ಅಫ್ಘಾನಿಸ್ತಾನಕ್ಕೆ ಕಳುಹಿಸಬೇಕು ಎಂದು ಸಂಸದ ವಿ ಶ್ರೀನಿವಾಸ್ ಪ್ರಸಾದ್ ಆಕ್ರೋಶ ಹೊರಹಾಕಿದ್ದಾರೆ.

Siddaramaiah should  sent to Afghanistan saya mp srinivas prasad
ಸಿದ್ದರಾಮಯ್ಯ ವಿರುದ್ಧ ಸಂಸದ ವಿ ಶ್ರೀನಿವಾಸ್ ಪ್ರಸಾದ್ ವಾಗ್ದಾಳಿ
author img

By

Published : Oct 23, 2021, 3:19 PM IST

ಮೈಸೂರು:ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಒಂದು ತಿಂಗಳು ಅಫ್ಘಾನಿಸ್ತಾನಕ್ಕೆ ಕಳುಹಿಸಬೇಕು ಎಂದು ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಕಿಡಿಕಾರಿದರು.

ಸಿದ್ದರಾಮಯ್ಯ ವಿರುದ್ಧ ಸಂಸದ ವಿ ಶ್ರೀನಿವಾಸ್ ಪ್ರಸಾದ್ ವಾಗ್ದಾಳಿ

ಮೈಸೂರಿನ ಮಾನಸಗಂಗೋತ್ರಿಯ ಸೆನೆಟ್ ಭವನದ ಮುಂಭಾಗ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರಧಾನಿಯವರ ಬಗ್ಗೆ ಅಷ್ಟೊಂದು ಹಗುರವಾಗಿ ಮಾತನಾಡುವ ಸಿದ್ದರಾಮಯ್ಯ ಅವರನ್ನು ಒಂದು ತಿಂಗಳು ಅಫ್ಘಾನಿಸ್ತಾನಕ್ಕೆ ಕಳಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡ್ತೇನೆ ಅಸಮಾಧಾನ ವ್ಯಕ್ತಪಡಿಸಿದರು.

ವಿರೋಧ ಪಕ್ಷದ ನಾಯಕರಾಗಿ ಸಿದ್ದರಾಮಯ್ಯ ಸರ್ಕಾರವನ್ನ ಎಚ್ಚರಿಸಬೇಕು,ಸರ್ಕಾರ ವೈಫಲ್ಯ ತೋರಿಸಬೇಕು. ಅದನ್ನು ಬಿಟ್ಟು ದೇಶದ ಪ್ರಧಾನಿ ಬಗ್ಗೆ ಹಗುರವಾಗಿ ಮಾತನಾಡುವುದು ಎಷ್ಟು ಸರಿ?‌ ದೇಶದಲ್ಲಿ ಯಾರು ಈ ರೀತಿ ಮಾತನಾಡುವುದಿಲ್ಲ ಎಂದು ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದರು.

ಪ್ರತಿಪಕ್ಷದವರು ವಿವೇಚನೆ ಇಲ್ಲದಂತೆ ಮಾತನಾಡುತ್ತಿದ್ದಾರೆ. ಅವರ ಭಾಷಣಗಳನ್ನು ಕೇಳಲು ಬೇಸರವಾಗುತ್ತದೆ. ಎಷ್ಟು ದಿವಸ ಸಹನೆಯಲ್ಲಿ ಇರಲು ಸಾಧ್ಯ? ಎಂದು ಪ್ರಶ್ನಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.