ETV Bharat / state

ರಾಷ್ಟ್ರ ರಾಜಕಾರಣಕ್ಕೆ ಹೋಗಬೇಕಾದೀತೆಂದು ಡಿಕೆಶಿ ವಿರುದ್ಧ ಸಿದ್ದರಾಮಯ್ಯ ವ್ಯವಸ್ಥಿತ ಪಿತೂರಿ : ಪ್ರತಾಪ ಸಿಂಹ - DK Shivakumar

ರಾಷ್ಟ್ರ ರಾಜಕಾರಣಕ್ಕೆ ಸಿದ್ದರಾಮಯ್ಯಗೆ ಬನ್ನಿ ಎಂದು ಹೈಕಮಾಂಡ್ ಹೇಳಿದೆ‌. ಇದರಿಂದ ರಾಷ್ಟ್ರ ರಾಜಕಾರಣಕ್ಕೆ ಹೋಗಬೇಕೆಂದು ಈ ರೀತಿ ಡಿಕೆಶಿ ಮೇಲೆ ಸಿದ್ದರಾಮಯ್ಯ ಷಡ್ಯಂತ್ರ ಮಾಡಿದ್ದಾರೆ. ಇದು ಸಂಪೂರ್ಣ ಸಿದ್ದರಾಮಯ್ಯ ಅವರಿಂದಲೇ ನಡೆದಿರುವ ಷಡ್ಯಂತ್ರ ಎಂದು ಗಂಭೀರವಾಗಿ ಆಪಾದಿಸಿದ್ದಾರೆ..

Siddaramaiah systematic conspiracy against DK Shivakumar
ಸಂಸದ ಪ್ರತಾಪ ಸಿಂಹ ಹೊಸ ಬಾಂಬ್
author img

By

Published : Oct 16, 2021, 3:36 PM IST

Updated : Oct 16, 2021, 7:20 PM IST

ಮೈಸೂರು : ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಸಿದ್ದರಾಮಯ್ಯ ವ್ಯವಸ್ಥಿತ ಪಿತೂರಿ ಮಾಡುತ್ತಿದ್ದಾರೆ ಎಂದು ಸಂಸದ ಪ್ರತಾಪ ಸಿಂಹ ಹೊಸ ಬಾಂಬ್ ಸಿಡಿಸಿದ್ದಾರೆ.

ಕಾಂಗ್ರೆಸ್ ನಾಯಕರ ಸಂಭಾಷಣೆ ವಿಚಾರವಾಗಿ ಸರ್ಕಾರಿ ಅತಿಥಿ ಗೃಹದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಪ್ರತಾಪಸಿಂಹ, ಮಾಧ್ಯಮದವರ ಮುಂದೆಯೇ ಸಲೀಂ-ಉಗ್ರಪ್ಪ ಮಾತನಾಡಿದ್ದಾರೆ. ಡಿಕೆಶಿಯವರನ್ನ ವ್ಯವಸ್ಥಿತವಾಗಿ ರಾಜಕೀಯವಾಗಿ ಮುಗಿಸುವ ಷಡ್ಯಂತ್ರ ಇದು.

ಸಂಸದ ಪ್ರತಾಪ ಸಿಂಹ ಹೊಸ ಬಾಂಬ್

ಸಲೀಂ ಅವರು ಈಗಿರುವ ಸ್ಥಾನಕ್ಕೆ ಕಾರಣ ಡಿಕೆಶಿ. ಉಗ್ರಪ್ಪ ಅವರು ಸಂಸದರಾಗಲು ಡಿಕೆಶಿ ಅವರ ಪಾತ್ರ ದೊಡ್ಡದು. ಆದರೆ, ಇಷ್ಟೆಲ್ಲ ಇದ್ದರು ಕೂಡ ಡಿಕೆಶಿ ಅವರನ್ನ ಟಾರ್ಗೆಟ್ ಮಾಡಲಾಗಿದೆ‌. ಇದಕ್ಕೆ ನೇರವಾದ ಕಾರಣವೇ ಸಿದ್ದರಾಮಯ್ಯ ಅವರು ಎಂದು ಆರೋಪಿಸಿದ್ದಾರೆ.

ರಾಷ್ಟ್ರ ರಾಜಕಾರಣಕ್ಕೆ ಸಿದ್ದರಾಮಯ್ಯಗೆ ಬನ್ನಿ ಎಂದು ಹೈಕಮಾಂಡ್ ಹೇಳಿದೆ‌. ಇದರಿಂದ ರಾಷ್ಟ್ರ ರಾಜಕಾರಣಕ್ಕೆ ಹೋಗಬೇಕೆಂದು ಈ ರೀತಿ ಡಿಕೆಶಿ ಮೇಲೆ ಸಿದ್ದರಾಮಯ್ಯ ಷಡ್ಯಂತ್ರ ಮಾಡಿದ್ದಾರೆ. ಇದು ಸಂಪೂರ್ಣ ಸಿದ್ದರಾಮಯ್ಯ ಅವರಿಂದಲೇ ನಡೆದಿರುವ ಷಡ್ಯಂತ್ರ ಎಂದು ಗಂಭೀರವಾಗಿ ಆಪಾದಿಸಿದ್ದಾರೆ.

ಸಿದ್ದರಾಮಯ್ಯ ಎಲಿಮಿನೇಟರಿ ಆಗಿ ಕೆಲಸ ಮಾಡುತ್ತಿದ್ದಾರೆ. ದೆಹಲಿಗೆ ಬನ್ನಿ ಎಂದಾಗ ಸಿದ್ದರಾಮಯ್ಯ ವಿಚಲಿತರಾಗಿ ಹೀಗೆ ಮಾಡಿಸಿದ್ದಾರೆ. ಇದರಿಂದ ಕಾಂಗ್ರೆಸ್ ಸಂಪೂರ್ಣವಾಗಿ ನಾಶವಾಗುತ್ತದೆ. ಅನಾಯಾಸವಾಗಿ ಇದರ ಲಾಭ ಬಿಜೆಪಿಗೆ ಬರಲಿದೆ ಎಂದು ಹೇಳಿದ್ದಾರೆ.

ಬೊಮ್ಮಾಯಿ ಅವರಿಂದ ಬಿಜೆಪಿ ಬಗ್ಗೆ ಮತ್ತಷ್ಟು ಒಳ್ಳೆಯ ಹೆಸರು ಬಂದಿದೆ. ಎರಡು ಉಪಚುನಾವಣೆಯಲ್ಲಿ ನಾವು ಗೆಲ್ಲುತ್ತೇವೆ. ಯಾಕೆಂದರೆ, ಇದಕ್ಕೆ ವಿರೋಧ ಪಕ್ಷದವರೇ ಅನುಕೂಲ ಮಾಡಿಕೊಟ್ಟಿದ್ದಾರೆ ಎಂದು ಹೇಳಿದ್ದಾರೆ.

Last Updated : Oct 16, 2021, 7:20 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.