ETV Bharat / state

'ನಾಳಿನ ಕೇಂದ್ರ ಬಜೆಟ್ ಬಗ್ಗೆ ಯಾವುದೇ ನಿರೀಕ್ಷೆ ಇಟ್ಟುಕೊಂಡಿಲ್ಲ': ಸಿದ್ದರಾಮಯ್ಯ - ಮೈಸೂರು ಸುದ್ದಿ

ಜಿಡಿಪಿ ವಿಷಯದಲ್ಲಿ ಕೇಂದ್ರ ಸರ್ಕಾರ ಸುಳ್ಳು ಹೇಳಿ ಜನರಿಗೆ ತಪ್ಪು ಮಾಹಿತಿ ನೀಡಿ ದಾರಿ ತಪ್ಪಿಸುವ ಕೆಲಸ ಮಾಡ್ತಿದೆ. ಅವರ ಬಜೆಟ್ ಬಗ್ಗೆ ಯಾವುದೇ ನಿರೀಕ್ಷೆ ಇಲ್ಲ ಎಂದು ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.

siddaramaiah
ಸಿದ್ದರಾಮಯ್ಯ
author img

By

Published : Jan 31, 2021, 4:04 PM IST

Updated : Jan 31, 2021, 5:19 PM IST

ಮೈಸೂರು: ನಾಳೆ ಕೇಂದ್ರ ಸರ್ಕಾರ ಮಂಡಿಸಲಿರುವ ಬಜೆಟ್ ಬಗ್ಗೆ ಯಾವುದೇ ನಿರೀಕ್ಷೆ ಇಟ್ಟುಕೊಂಡಿಲ್ಲವೆಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಕೇಂದ್ರ ಬಜೆಟ್ ಬಗ್ಗೆ ಮಾತನಾಡಿದ ಸಿದ್ದರಾಮಯ್ಯ

ತಮ್ಮ ನಿವಾಸದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಸರ್ಕಾರದಿಂದ ನಾನು ಯಾವುದೇ ನಿರೀಕ್ಷೆ ಇಟ್ಟಿಲ್ಲ. ನಿಮಗೇನಾದ್ರು ನಿರೀಕ್ಷೆ ಇದೆಯಾ? ಎಕನಾಮಿಕ್ ಸರ್ವೆಯಲ್ಲಿ ಬಿಜೆಪಿಯವರು ಸುಳ್ಳು ಹೇಳಿದ್ದಾರೆ. ಜಿಡಿಪಿ ಗಣನೀಯವಾಗಿ ಪಾತಳಕ್ಕೆ ಇಳಿದಿದೆ ಎಂದರು.

ಮನಮೋಹನ್ ಸಿಂಗ್ ಅವರ ಬಳಿಕ ಜಿಡಿಪಿ ಪ್ರತಿ ವರ್ಷ ಕುಸಿದಿದೆ. 2019-20ರಲ್ಲಿ ಜಿಡಿಪಿ ಗ್ರೋತ್ 4.2 ಇತ್ತು, ಆ ವೇಳೆ ಕೊರೊನಾ ಇರಲಿಲ್ಲ. ಈ ವರ್ಷ 2020-21ರಲ್ಲಿ ಜಿಡಿಪಿ ಶೇ. 7.7 ಇದೆ. ಅದನ್ನ ಮುಚ್ಚಿ ಹಾಕಲು 2021-22ಕ್ಕೆ 11 ಪರ್ಸೆಂಟ್ ಆಗುತ್ತೆ ಅಂತಾರೆ. ಇದನ್ನು ಸಹ ಎಕಾನಾಮಿಕ್ ಸರ್ವೆಯಲ್ಲಿ ಸುಳ್ಳು ಹೇಳಿದ್ದಾರೆ. ಜಿಡಿಪಿ ವಿಷಯದಲ್ಲಿ ಕೇಂದ್ರ ಸರ್ಕಾರ ಸುಳ್ಳು ಹೇಳಿ ಜನರಿಗೆ ತಪ್ಪು ಮಾಹಿತಿ ನೀಡಿ ದಾರಿ ತಪ್ಪಿಸುವ ಕೆಲಸ ಮಾಡ್ತಿದೆ ಎಂದು ಕಿಡಿಕಾರಿದರು.

ದೇಶದಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚಾಗುತ್ತಿದೆ. ನಗರ ಪ್ರದೇಶದಲ್ಲಿ ಶೇ. 9.2ರಷ್ಟು ಹಾಗೂ ಗ್ರಾಮೀಣ ಪ್ರದೇಶದಲ್ಲಿ 8.9ರಷ್ಟು ನಿರುದ್ಯೋಗ ಇದೆ. ಮನಮೋಹನ್ ಸಿಂಗ್ ಪ್ರಧಾನಿ ಆಗಿದ್ದಾಗ 2.9ರಷ್ಟು ಮಾತ್ರ ನಿರುದ್ಯೋಗ ಸಮಸ್ಯೆ ಇತ್ತು. ದೇಶದಲ್ಲಿ 9.5ರಷ್ಟು ಪದವೀಧರರು, ತಾಂತ್ರಿಕ ವಿಭಾಗದ ವಿದ್ಯಾರ್ಥಿಗಳು ನಿರುದ್ಯೋಗ ಸಮಸ್ಯೆ ಎದುರಿಸುತ್ತಿದ್ದಾರೆ. ಕೃಷಿ ಹಾಗೂ ಕೈಗಾರಿಕೋದ್ಯಮಕ್ಕೆ ಹೆಚ್ಚು ಒತ್ತು ನೀಡದಿದ್ದರೆ ದೇಶ ಅಭಿವೃದ್ಧಿಯಾಗಲು ಸಾಧ್ಯವೇ ಇಲ್ಲ ಎಂದು ಹೇಳಿದರು.

ಜೆಡಿಎಸ್ ಒಂದು ರಾಜಕೀಯ ಪಕ್ಷವೇ ಅಲ್ಲ:

ರಾಷ್ಟ್ರಪತಿ ಭಾಷಣ ತ್ಯಜಿಸುವ ಹೆಚ್.ಡಿ.ದೇವೇಗೌಡ ಹೇಳಿಕೆಗೆ ಪ್ರತಿಕ್ರಿಯಿಸಿ, ಅವರ ಬಗ್ಗೆ ನಾನು ಮಾತೇ ಆಡಲ್ಲ. ನನ್ನ ಪ್ರಕಾರ ಜೆಡಿಎಸ್ ಇಟ್ಸ್ ನಾಟ್ ಎ ಪೊಲಿಟಿಕಲ್ ಪಾರ್ಟಿ ಎಂದರು.

ಮೈಸೂರು ಮೇಯರ್ ಚುನಾವಣೆ:

ಜೆಡಿಎಸ್ ಜೊತೆ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ. ಜೆಡಿಎಸ್ ಅಲ್ಲದೆ ಯಾವ ಪಕ್ಷದ ಜೊತೆಯೂ ಹೊಂದಾಣಿಕೆ ಇಲ್ಲ. ಈ ಹಿಂದೆ ಸ್ಥಳೀಯರು ಮೈತ್ರಿ ಮಾಡಿಕೊಂಡಿದ್ದರು. ಆದರೆ ಇದೀಗ ಯಾರ ಜೊತೆಯೂ ಮೈತ್ರಿ ಇಲ್ಲ ಎಂದು ಸ್ಪಷ್ಟಪಡಿಸಿದರು.

Last Updated : Jan 31, 2021, 5:19 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.