ಮೈಸೂರು : ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 5 ವರ್ಷ ಪೂರ್ಣಾವಧಿ ಸಿಎಂ ಆಗಲಿದ್ದಾರೆ. ಅಧಿಕಾರ ಹಂಚಿಕೆ ಬಗ್ಗೆ ಯಾವುದೇ ಮಾತುಕತೆ ನಡೆದಿಲ್ಲ ಎಂದು ಸಚಿವ ಎಂ.ಬಿ.ಪಾಟೀಲ್ ಹೇಳಿದರು. ಇಂದು ಸುತ್ತೂರಿಗೆ ಭೇಟಿ ಕೊಟ್ಟು, ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರ ಆಶೀರ್ವಾದ ಪಡೆದರು.
ಇದನ್ನೂ ಓದಿ : ಸಿದ್ದು ಪ್ರತಿಜ್ಞಾವಿಧಿ ಓದುತ್ತಿದ್ದಂತೆ ವಿಧಾನಸೌಧದಲ್ಲಿ ನೂತನ ಸಿಎಂ ನಾಮಫಲಕ ಅಳವಡಿಕೆ
ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಪರ ಬ್ಯಾಟ್ ಬೀಸಿದರು. ಲೋಕಸಭೆ ಚುನಾವಣೆ ಬಳಿಕ ಯಾವುದೇ ಬದಲಾವಣೆ ಇಲ್ಲ. ಸಿಎಂ ಬದಲಾವಣೆ ಬಗ್ಗೆ ಎಐಸಿಸಿ ಮಟ್ಟದಲ್ಲಿ ಯಾವುದೇ ಚರ್ಚೆ ನಡೆದಿಲ್ಲ. ಸಿದ್ದರಾಮಯ್ಯ ಮುಂದಿನ ಐದು ವರ್ಷವೂ ಸಿಎಂ ಆಗಲಿದ್ದಾರೆ ಎಂದು ಎಐಸಿಸಿ ಕಾರ್ಯದರ್ಶಿ ವೇಣುಗೋಪಾಲ್ ಸ್ಪಷ್ಟಪಡಿಸಿದ್ದಾರೆ ಎಂದು ಎಂ.ಬಿ.ಪಾಟೀಲ್ ಅವರು ತಿಳಿಸಿದರು.
ಈ ಹಿಂದೆ ನಡೆದ ಹಗರಣ ಕುರಿತು ತನಿಖೆ : ಬಿಜೆಪಿ ಅಧಿಕಾರವದಿಯಲ್ಲಿ ನಡೆದ ಎಲ್ಲಾ ಹಗರಣಗಳ ಬಗ್ಗೆ ತನಿಖೆ ನಡೆಸುತ್ತೇವೆ. ಪಿಎಸ್ಐ ಹಗರಣ, ಆರೋಗ್ಯ ಇಲಾಖೆ, ನೀರಾವರಿ ಇಲಾಖೆ ಹಾಗೂ ಇತರ ಇಲಾಖೆ ಬಗ್ಗೆ ತನಿಖೆ ನಡೆಸುತ್ತೇವೆ. ಎಲ್ಲಾ ಹಗರಣಗಳನ್ನ ಲಾಜಿಕ್ ಎಂಡ್ಗೆ ತೆಗೆದುಕೊಂಡು ಹೋಗುತ್ತೇವೆ. ತಪ್ಪಿಸ್ತರಿಗೆ ಖಂಡಿತವಾಗಿಯೂ ಶಿಕ್ಷೆ ಕೊಡಿಸುತ್ತೇವೆ. ನೊಂದ ವಿದ್ಯಾರ್ಥಿಗಳಿಗೆ ನ್ಯಾಯ ಕೊಡಿಸುತ್ತೇವೆ ಎಂದು ಎಂ.ಬಿ.ಪಾಟೀಲ್ ಹೇಳಿದರು.
ಇದನ್ನೂ ಓದಿ : ಸಿದ್ದರಾಮಯ್ಯ, ಡಿಕೆಶಿ ಪ್ರಮಾಣ ವಚನಕ್ಕೆ ಹರಿದು ಬಂದ ಜನಸಾಗರ.. ಕಂಠೀರವ ಕ್ರೀಡಾಂಗಣದಲ್ಲಿ ಮೊಳಗಿದ ಜಯಘೋಷ
ಗ್ಯಾರಂಟಿ ಕಾರ್ಡ್ ವಿಚಾರವಾಗಿ ಪ್ರತಿಕ್ರಿಯೆ ನೀಡಿ, ಮೊದಲ ಕ್ಯಾಬಿನೆಟ್ ಮೀಟಿಂಗ್ನಲ್ಲಿ ಈ ಸಂಬಂಧವಾಗಿ ಚರ್ಚೆ ಆಗಿದ್ದು, ತಾತ್ವಿಕ ಒಪ್ಪಿಗೆ ನೀಡಲಾಗಿದೆ. ಈ ವಿಚಾರದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಸಚಿವ ಎಂ.ಬಿ.ಪಾಟೀಲ್ ಇದೇ ವೇಳೆ ಸ್ಪಷ್ಟಪಡಿಸಿದರು.
ಸಿದ್ದಗಂಗಾ ಮಠಕ್ಕೆ ಪತ್ನಿ ಜೊತೆ ಎಂ.ಬಿ ಪಾಟೀಲ್ ಭೇಟಿ : ಸುತ್ತೂರಿಗೆ ಆಗಮಿಸುವ ಮೊದಲೇ ನೂತನ ಸಚಿವರಾಗಿ ಪ್ರಮಾಣ ಸ್ವೀಕರಿಸಿ ನೇರವಾಗಿ ಸಿದ್ದಗಂಗಾ ಮಠಕ್ಕೆ ಸಚಿವ ಎಂ.ಬಿ ಪಾಟೀಲ್ ಅವರು ಭೇಟಿ ನೀಡಿದರು. ಈ ಸಂದರ್ಭದಲ್ಲಿ ಪತ್ನಿ ಆಶಾ ಪಾಟೀಲ್ ಜೊತೆ ಕಾಣಿಸಿಕೊಂಡರು. ಈ ವೇಳೆ ಲಿಂಗೈಕ್ಯ ಶ್ರೀ ಶಿವಕುಮಾರ ಶ್ರೀಗಳ ಗದ್ದುಗೆ ದರ್ಶನ ಪಡೆದ ಎಂ.ಬಿ ಪಾಟೀಲ್ ಅವರು, ನಂತರ ಧ್ಯಾನ ಮಂದಿರದಲ್ಲಿ ಕುಳಿತು ಕೆಲಕಾಲ ಧ್ಯಾನ ಮಾಡಿದರು. ಬಳಿಕ ಸಿದ್ದಗಂಗಾ ಮಠಾಧ್ಯಕ್ಷ ಸಿದ್ಧಲಿಂಗ ಸ್ವಾಮೀಜಿ ಅವರ ಆಶೀರ್ವಾದ ಪಡೆದರು. ಈ ನಡುವೆ ಪ್ರತ್ಯೇಕವಾಗಿ ಸಿದ್ದಗಂಗಾ ಮಠಕ್ಕೆ ಭೇಟಿ ಕೊಟ್ಟ ಬೆಳಗಾವಿ ಗ್ರಾಮಾಂತರ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಕೂಡ ಶ್ರೀಗಳ ಆಶೀರ್ವಾದ ಪಡೆದರು.
ಇದನ್ನೂ ಓದಿ : ಖಾಸಗಿ ಕಂಪನಿಗಳು ಹಾಗೂ ಹೆಚ್ಎಎಲ್ನಲ್ಲಿ ಸ್ಥಳೀಯರಿಗೆ ಉದ್ಯೋಗ ಅವಕಾಶ ನೀಡದಿದ್ದರೆ ಲೈಸೆನ್ಸ್ ರದ್ದು: ಸಚಿವ ಪರಮೇಶ್ವರ್