ETV Bharat / state

'ಅಮಿತ್ ಶಾ ಬಲವಂತವಾಗಿ ಹಿಂದಿ ಹೇರಿದ್ರೆ ನಾವು ತೀವ್ರವಾಗಿ ವಿರೋಧಿಸ್ತೀವಿ' - ಅಮಿತ್ ಶಾ ವಿರುದ್ದ ಸಿದ್ದರಾಮಯ್ಯ ಕಿಡಿ

ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ತಾನು ಇಂತಹ ಸಾಧನೆ ಮಾಡಿದ್ದೀವಿ ಅಂತ ಹೇಳಲು ಏನೂ ಇಲ್ಲ. ಅದಕ್ಕಾಗಿ ಧಾರ್ಮಿಕ ವಿಚಾರಗಳನ್ನು ಚರ್ಚೆಗೆ ಬಿಡ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮಾಜಿ ಸಿಎಂ ಸಿದ್ದರಾಮಯ್ಯ
ಮಾಜಿ ಸಿಎಂ ಸಿದ್ದರಾಮಯ್ಯ
author img

By

Published : Apr 8, 2022, 10:24 PM IST

ಮೈಸೂರು: ಕೇಂದ್ರ ಗೃಹಮಂತ್ರಿ ಅಮಿತ್ ಶಾ ಬಲವಂತವಾಗಿ ಹಿಂದಿ ಹೇರಿಕೆ ಮಾಡಿದರೆ ಅದು ಒಕ್ಕೂಟ ವ್ಯವಸ್ಥೆಗೆ ವಿರೋಧವಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಮೈಸೂರಿನ ಲಲಿತಾ ಮಹಲ್ ಹೆಲಿಪ್ಯಾಡ್‌ನಲ್ಲಿ ಸಂಪರ್ಕ ಭಾಷೆಯಾಗಿ ಹಿಂದಿ ಬಳಸಿ ಎಂಬ ಅಮಿತ್ ಶಾ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಹಿಂದಿ ರಾಷ್ಟ್ರ ಭಾಷೆನೂ ಅಲ್ಲ, ಸಂಪರ್ಕ ಭಾಷೆನೂ ಅಲ್ಲ ಎಂದರು.

ಕರ್ನಾಟಕದಲ್ಲಿ ಕನ್ನಡ, ತಮಿಳುನಾಡಲ್ಲಿ ತಮಿಳು, ಕೇರಳದಲ್ಲಿ ಮಲಯಾಳಿ ಸಾರ್ವಭೌಮ ಭಾಷೆ. ಅಮಿತ್ ಶಾ ಬಲವಂತವಾಗಿ ಹೇರಿದ್ರೆ ನಾವು ತೀವ್ರ ವಿರೋಧ ಮಾಡ್ತೀವಿ. ಆಯಾ ರಾಜ್ಯಗಳಲ್ಲಿ ಪ್ರಾಂತೀಯ ಭಾಷೆಗಳು ಸಾರ್ವಭೌಮ. ಅಮಿತ್ ಶಾ ಹೇಳಿಕೆ ಬಾಲಿಶತನದ್ದು. ಒಕ್ಕೂಟ ವ್ಯವಸ್ಥೆಗೆ ವಿರುದ್ದವಾಗಿದೆ ಎಂದು ಟೀಕಿಸಿದರು.

ಮುಸ್ಲಿಮರಿಗೆ ನಿರ್ಬಂಧಗಳ ವಿಚಾರವಾಗಿ ಮಾತನಾಡಿ, ಕೇಂದ್ರ ಹಾಗೂ ರಾಜ್ಯ ಸರ್ಕಾರ ಇಂತಹ ಸಾಧನೆ ಮಾಡಿದ್ದೀವಿ ಅಂತ ಹೇಳಲು ಏನೂ ಇಲ್ಲ. ಅದಕ್ಕಾಗಿ ಧಾರ್ಮಿಕ ವಿಚಾರಗಳನ್ನು ಚರ್ಚೆಗೆ ಬಿಡ್ತಿದ್ದಾರೆ. ಹಿಜಾಬ್ ಆಯ್ತು, ಹಲಾಲ್ ಆಯ್ತು, ಮಸೀದಿಯಲ್ಲಿ ಮೈಕ್ ನಿರ್ಬಂಧ ಮಾಡಬೇಕು ಅಂದ್ರು. ಈಗ ಮಾವು ಹಣ್ಣು, ಅದು ಇದು ಅಂತ ಹೇಳ್ತಿದ್ದಾರೆ. ಬೆಲೆ ಏರಿಕೆ ಬಗ್ಗೆ ಮಾತನಾಡಿ, ಯಾಕೆ ಮಾತನಾಡ್ತಿಲ್ಲ ಎಂದು ಪ್ರಶ್ನಿಸಿದರು.

ಇದನ್ನೂ ಓದಿ: ಮುಸ್ಲಿಮರ ಓಟಿಗಾಗಿ ಆರ್‌ಎಸ್‌ಎಸ್ ಗೇಲಿ: ಸಿದ್ದರಾಮಯ್ಯ ವಿರುದ್ಧ ಮುತಾಲಿಕ್ ಕಿಡಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.