ಮೈಸೂರು: ವರುಣಾ ಕ್ಷೇತ್ರದಲ್ಲಿ ಭರ್ಜರಿ ಗೆಲುವಿನತ್ತ ಮುನ್ನಡೆಯುತ್ತಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಕಹಿ ಸುದ್ದಿಯೊಂದು ಬಂದಿದೆ. ಅವರ ಸ್ವಂತ ಸಹೋದರಿ ಶಿವಮ್ಮ ಅವರ ಪತಿ ರಾಮೇಗೌಡ (69) ಶನಿವಾರ ನಿಧನ ಹೊಂದಿದರು. ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ನಗರದ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೇ ಇಂದು ಬೆಳಗ್ಗೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಸಿದ್ದರಾಮನಹುಂಡಿಯಲ್ಲಿ ರಾಮೇಗೌಡರು ನ್ಯಾಯಬೆಲೆ ಅಂಗಡಿ ನಡೆಸುತ್ತಿದ್ದರು. ಅವರು ಪತ್ನಿ, ಮೂವರು ಹೆಣ್ಣು ಮಕ್ಕಳು ಹಾಗೂ ಪುತ್ರನನ್ನು ಅಗಲಿದ್ದಾರೆ. ಸಂಜೆ ವೇಳೆಗೆ ಸಿದ್ದರಾಮನಹುಂಡಿಯಲ್ಲಿ ರಾಮೇಗೌಡರ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ವರುಣಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಸೋಮಣ್ಣ ವಿರುದ್ಧ ಸಿದ್ದರಾಮಯ್ಯ ಅವರು ಭರ್ಜರಿ ಮುನ್ನಡೆ ಸಾಧಿಸಿದ್ದಾರೆ. ಆದರೆ, ಅವರ ಬಾವ ನಿಧನರಾಗಿರುವ ಸುದ್ದಿ ಸಂಭ್ರಮಾಚರಣೆ ಕಳೆಗುಂದುವಂತೆ ಮಾಡಿದೆ.
ಇದನ್ನೂ ಓದಿ: ಕಾಂಗ್ರೆಸ್ ಪಕ್ಷ 120ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆದ್ದು, ಸ್ವಂತ ಶಕ್ತಿಯ ಮೇಲೆ ಅಧಿಕಾರಕ್ಕೆ ಬರುತ್ತದೆ: ಸಿದ್ದರಾಮಯ್ಯ