ETV Bharat / state

ಆರ್​ಎಸ್​ಎಸ್​ನವರ ಪಾಪದ ಕೂಸು ಬಿಜೆಪಿ.. ಬಿಎಸ್​ವೈ ಏಟಿಗೆ ಸಿದ್ದರಾಮಯ್ಯ ತಿರುಗೇಟು - ಭಾರತ್ ಜೋಡೋ ಯಾತ್ರೆ

ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಪಿಎಫ್ಐ ಕಾಂಗ್ರೆಸ್​ನ ಪಾಪದ ಕೂಸು ಎಂಬ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ, ಆರ್​ಎಸ್​ಎಸ್​ನವರ ಪಾಪದ ಕೂಸು ಬಿಜೆಪಿ ಎಂದು ತಿರುಗೇಟು ನೀಡಿದರು.

Opposition leader Siddaramayya
ವಿಪಕ್ಷ ನಾಯಕ ಸಿದ್ದರಾಮಯ್ಯ
author img

By

Published : Sep 29, 2022, 1:53 PM IST

ಮೈಸೂರು: ಆರ್​ಎಸ್​ಎಸ್​ನವರ ಪಾಪದ ಕೂಸು ಬಿಜೆಪಿ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಇಂದು ತಮ್ಮ ಮೈಸೂರಿನ ನಿವಾಸದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಪಿಎಫ್ಐ ಕಾಂಗ್ರೆಸ್​ನ ಪಾಪದ ಕೂಸು ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿದರು.

ಬಿ ಎಸ್​ ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಏನು ಮಾಡುತ್ತಿದ್ದರು ಎಂದು ಪ್ರಶ್ನಿಸಿದ ಅವರು, ಆರ್​ಎಸ್​ಎಸ್​ನವರ ಪಾಪದ ಕೂಸು ಬಿಜೆಪಿ ಎಂದು ತಿರುಗೇಟು ನೀಡಿದರು.

ವಿಪಕ್ಷ ನಾಯಕ ಸಿದ್ದರಾಮಯ್ಯ

ಭಾರತ್ ಜೋಡೋ ಯಾತ್ರೆ ನಾಳೆ ಕರ್ನಾಟಕ ಪ್ರವೇಶಿಸಲಿದ್ದು, ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಗೆ ನಾಳೆ ಯಾತ್ರೆ ಬರಲಿದ್ದು, ಅಗತ್ಯ ಸಿದ್ಧತೆಗಳು ನಡೆದಿವೆ. ರಾಹುಲ್ ಗಾಂಧಿಯನ್ನು ಸ್ವಾಗತಿಸಿ ನಂತರ ಬೆಳಗ್ಗೆ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ. ನಂತರ ಪಾದಯಾತ್ರೆ ಆರಂಭವಾಗಲಿದೆ. ಪಾದಯಾತ್ರೆಯಲ್ಲಿ ಸುಮಾರು 40 ರಿಂದ 45 ಸಾವಿರ ಜನ ಸೇರಲಿದ್ದು, ಪಾದಯಾತ್ರೆ ಬೇಗೂರಿನಲ್ಲಿ ಕೊನೆಗೊಳ್ಳಲಿದೆ. ಅಕ್ಟೋಬರ್ 2 ರಂದು ರಾತ್ರಿ ಮೈಸೂರಿನ ವಸ್ತು ಪ್ರದರ್ಶನ ಆವರಣದ ಅಂದರೆ ಕುಸ್ತಿ ಅಖಾಡದ ಎದುರು ವಾಸ್ತವ್ಯ ಹೂಡಲಿದ್ದಾರೆ ಎಂದು ತಿಳಿಸಿದರು.

ಇದನ್ನೂ ಓದಿ: ಸಿದ್ದರಾಮಯ್ಯ ತಾಳ್ಮೆ ಕಳೆದುಕೊಂಡು ಹುಚ್ಚುಚ್ಚರಾಗಿ ಮಾತನಾಡುತ್ತಿದ್ದಾರೆ: ಯಡಿಯೂರಪ್ಪ ಗರಂ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.