ಮೈಸೂರು: ಇಲ್ಲಿನ ಖಾಸಗಿ ಹೋಟೆಲ್ನಲ್ಲಿ ವರುಣಾ ಕ್ಷೇತ್ರದ ಮುಖಂಡರು ಹಾಗೂ ಕಾರ್ಯಕರ್ತರ ಜೊತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಎರಡು ದಿನಗಳಿಂದ ಸಭೆ ನಡೆಸಿದ್ದಾರೆ. ಇದೀಗ ಮಹತ್ವದ ಸಭೆಯ ಉದ್ದೇಶವನ್ನು ಟ್ವೀಟರ್ನಲ್ಲಿ ಹಂಚಿಕೊಂಡಿದ್ದಾರೆ.
'ಕಾಂಗ್ರೆಸ್ ಪಕ್ಷದ ಬಲವರ್ಧನೆಯ ಅಭಿಯಾನ ವರುಣಾ ಕ್ಷೇತ್ರಕ್ಕೆ ಸೀಮಿತ ಅಲ್ಲ, ಅಲ್ಲಿನ ಚಿಂತೆಯೂ ನನಗಿಲ್ಲ. ಚುನಾವಣಾ ಸೋಲಿನ ನಂತರ ಇಡೀ ರಾಜ್ಯದಲ್ಲಿ ನಮ್ಮ ಪಕ್ಷದ ನಾಯಕರಿಂದ ಈ ಕಾರ್ಯ ನಡೆಯುತ್ತಿದೆ. ಮುಂದಿನ ದಿನಗಳಲ್ಲಿ ಇದನ್ನು ಇನ್ನಷ್ಟು ವ್ಯವಸ್ಥಿತವಾಗಿ ನಡೆಸಲಾಗುವುದು' ಎಂದು ಪೋಸ್ಟ್ ಮಾಡಿದ್ದಾರೆ.
ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿನ ಪರಾಮರ್ಶೆ ನಡೆಯುತ್ತಿದ್ದು, ನಾಯಕರು ಪಕ್ಷ ಬಲವರ್ಧನೆಗೆ ಹಲವಾರು ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ. ಈ ನಿಟ್ಟಿನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಮೈಸೂರಿನ ಖಾಸಗಿ ಹೋಟೆಲ್ನಲ್ಲಿ ಸಭೆ ನಡೆಸಿ ಪಕ್ಷ ಮೇಲೆತ್ತಲು ಕಸರತ್ತು ನಡೆಸುತ್ತಿದ್ದಾರೆ. ಸಭೆ ನಡೆದ ಬಳಿಕ 2 ದಿನಗಳ ಮೀಟಿಂಗ್ ಬಗ್ಗೆ ಈ ರೀತಿಯಾಗಿ ಟ್ವೀಟ್ ಮಾಡಿದ್ದಾರೆ.