ETV Bharat / state

ಡ್ರಗ್ಸ್ ಮಾಫಿಯಾ ವಿರುದ್ಧ ಎಬಿವಿಪಿಯಿಂದ ಸಹಿ ಸಂಗ್ರಹ ಅಭಿಯಾನ - ಡ್ರಗ್ಸ್ ಮಾಫಿಯಾ

ಡ್ರಗ್ಸ್​​ ದಂಧೆ ವಿರುದ್ದ ಮೈಸೂರಿನಲ್ಲಿ ಎಬಿವಿಪಿ ಸದಸ್ಯರು ಕೆಎಸ್​ಆರ್​ಟಿಸಿ ಬಸ್ ನಿಲ್ದಾಣದ ಮುಂದೆ ಸಹಿ ಸಂಗ್ರಹ ಅಭಿಯಾನ ನಡೆಸಿದರು.

Signature collection campaign by ABVP against Drugs Mafia
ಡ್ರಗ್ಸ್ ಮಾಫಿಯಾ ವಿರುದ್ಧ ಎಬಿವಿಪಿಯಿಂದ ಸಹಿ ಸಂಗ್ರಹ ಅಭಿಯಾನ
author img

By

Published : Sep 9, 2020, 9:32 PM IST

ಮೈಸೂರು : ಡ್ರಗ್ಸ್ ದಂಧೆಯಲ್ಲಿ ಸಿನಿಮಾ ರಂಗದ ನಟ, ನಟಿಯರು ಹಾಗೂ ಪ್ರಭಾವಿಗಳ ಹೆಸರು ಕೇಳಿ ಬಂದಿದ್ದು, ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಎಬಿವಿಪಿ ಸದಸ್ಯರು ಕೆಎಸ್​ಆರ್​ಟಿಸಿ ಬಸ್ ನಿಲ್ದಾಣದ ಮುಂದೆ ಸಹಿ ಸಂಗ್ರಹ ಅಭಿಯಾನ ನಡೆಸಿದರು.

ನಗರದ ಗ್ರಾಮಾಂತರ ಬಸ್ ನಿಲ್ದಾಣದ ಮುಂದೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್​ನ ಸದಸ್ಯರು ಡ್ರಗ್ಸ್ ದಂಧೆ ವಿರುದ್ಧ ಸಹಿ ಸಂಗ್ರಹ ಅಭಿಯಾನ ನಡೆಸಿದರು.

ಡ್ರಗ್ಸ್ ಮಾಫಿಯಾದಲ್ಲಿ ಸಿನಿಮಾ ರಂಗದ ನಟ, ನಟಿಯರು ಹಾಗೂ ಪ್ರಭಾವಿಗಳ ಹೆಸರು ಕೇಳಿ ಬರುತ್ತಿದ್ದು, ರಾಷ್ಟ್ರಘಾತುಕ ಚಟುವಟಿಕೆಗಳಲ್ಲಿ ತೊಡಗಿಕೊಂಡಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಮತ್ತು ಸರ್ಕಾರ ಈ ಬಗ್ಗೆ ಉನ್ನತ ತನಿಖೆ ನಡೆಸಿ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು. ಈ ಹಿನ್ನೆಲೆಯಲ್ಲಿ ಸಹಿ ಸಂಗ್ರಹ ಮಾಡುವ ಮೂಲಕ‌ ಡ್ರಗ್ಸ್ ದಂಧೆಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.