ಕೊರೊನಾ ಎಫೆಕ್ಟ್: ಇಸ್ಕಾನ್ನಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಸರಳ ಪೂಜೆ - Mysore Srikrishna Janmashtami ISKCON News
ರಾಧೆ-ಕೃಷ್ಣ ವಿಗ್ರಹಕ್ಕೆ ವಿಶೇಷ ಅಲಂಕಾರ ಮಾಡಿ, ಬೆಳಗ್ಗೆಯಿಂದ ಪೂಜೆ ಪುನಸ್ಕಾರಗಳನ್ನು ಮಾಡಲಾಗುತ್ತಿದ್ದು, ದೇವಸ್ಥಾನಕ್ಕೆ ಬರುವ ಭಕ್ತಾದಿಗಳಿಗೆ ಥರ್ಮಲ್ ಸ್ಕ್ರೀನಿಂಗ್, ಸ್ಯಾನಿಟೈಸರ್ ನೀಡಿ ಒಳಗೆ ಪ್ರವೇಶಕ್ಕೆ ಅವಕಾಶ ನೀಡಲಾಗಿತ್ತು.

ಮೈಸೂರು: ಕೊರೊನಾ ಅಬ್ಬರಕ್ಕೆ ಬೆರಳೆಣಿಕೆಯಷ್ಟೇ ಭಕ್ತರ ಸಮ್ಮುಖದಲ್ಲಿ ಜಯನಗರದಲ್ಲಿರುವ ಇಸ್ಕಾನ್ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ಅತ್ಯಂತ ಸರಳವಾಗಿ ಆಚರಿಸಲಾಯಿತು.
ರಾಧೆ-ಕೃಷ್ಣ ವಿಗ್ರಹಕ್ಕೆ ವಿಶೇಷ ಅಲಂಕಾರ ಮಾಡಿ, ಬೆಳಗ್ಗೆಯಿಂದ ಪೂಜೆ ಪುನಸ್ಕಾರಗಳನ್ನು ಮಾಡಲಾಗುತ್ತಿದ್ದು, ದೇವಸ್ಥಾನಕ್ಕೆ ಬರುವ ಭಕ್ತಾದಿಗಳಿಗೆ ಥರ್ಮಲ್ ಸ್ಕ್ರೀನಿಂಗ್, ಸ್ಯಾನಿಟೈಸರ್ ನೀಡಿ ಒಳಗೆ ಪ್ರವೇಶಕ್ಕೆ ಅವಕಾಶ ನೀಡಲಾಗಿತ್ತು.
ಇಸ್ಕಾನ್ ದೇವಸ್ಥಾನದಲ್ಲಿ ಭಕ್ತಾದಿಗಳಿಗೆ ಮಂಗಳಾರತಿ ಮಾತ್ರ ನೀಡಲಾಗಿತ್ತು. ತೀರ್ಥ ಹಾಗೂ ಪ್ರಸಾದ ವಿತರಣೆಗೆ ಬ್ರೇಕ್ ನೀಡಲಾಗಿದೆ. ಸರ್ಕಾರದ ಆದೇಶದಂತೆ ದೇವಸ್ಥಾನದಲ್ಲಿ ಕಟ್ಟುನಿಟ್ಟನ ಕ್ರಮ ಕೈಗೊಳ್ಳಲಾಗಿತ್ತು. ಅಲ್ಲದೇ ಕೊರೊನಾ ಭಯದಿಂದ ಭಕ್ತಾದಿಗಳ ಸಂಖ್ಯೆ ವಿರಳವಾಗಿತ್ತು. ಮಕ್ಕಳು ಹಾಗೂ ವೃದ್ಧರಿಗೆ ಪ್ರವೇಶ ನಿಷೇಧಿಸಲಾಗಿದ್ದು, ಪೂಜೆ ವೀಕ್ಷಣೆಗೆ ಆನ್ಲೈನ್ ವ್ಯವಸ್ಥೆ ಮಾಡಲಾಗಿತ್ತು.