ಮೈಸೂರು: ಅಮೆರಿಕದಲ್ಲಿ ನಡೆಯುತ್ತಿರುವ 'ಹೌಡಿ ಮೋದಿ' ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ಹೋಗಿರುವುದರಿಂದ ಅಮೆರಿಕ ಹಾಗೂ ಭಾರತದ ನಡುವೆ ವ್ಯಾಪಾರ ವಾಹಿವಾಟು ವೃದ್ಧಿಗೆ ಅನುಕೂಲವಾಗುತ್ತದೆ ಎಂದು ಹಿರಿಯ ಸಾಹಿತಿ ಎಸ್. ಎಲ್. ಭೈರಪ್ಪ ಮೈಸೂರಿನಲ್ಲಿ ಹೇಳಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೋದಿಯವರು ಏನೇ ಮಾಡಿದ್ರೂ ತುಂಬಾ ಆಲೋಚನೆ ಮಾಡಿ ಮಾಡಿರುತ್ತಾರೆ. ಪರಿಣಾಮ ಒಳ್ಳೆಯದೇ ಆಗಿರುತ್ತದೆ ಎಂದಿದ್ದಾರೆ.
ಅಯೋಧ್ಯೆಯಲ್ಲಿ ರಾಮಮಂದಿರ ಕಟ್ಟುವ ವಿಚಾರ ಕೋಟ್೯ನಲ್ಲಿದೆ. ಕೋಟ್೯ ಆದೇಶದಂತೆ ಕೇಂದ್ರ ಸರ್ಕಾರ ಕೆಲಸ ಮಾಡಬೇಕಿದೆ. ರಾಮಮಂದಿರ ಕಟ್ಟುತ್ತಾರೆ ಎಂಬ ನಿರೀಕ್ಷೆ ನನಗೂ ಕೂಡ ಇದೆ ಎಂದು ತಿಳಿಸಿದರು.
ದಸರಾ ಮಹೋತ್ಸವ ಉದ್ಘಾಟಕರಾಗಿರುವ ಸರಸ್ವತಿ ಸಮ್ಮಾನ್ ಹಾಗೂ ಪದ್ಮಭೂಷಣ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ ಎಸ್.ಎಲ್ ಭೈರಪ್ಪ ಇದಕ್ಕೂ ಮೊದಲು ಸುತ್ತೂರು ಶಾಖಾ ಮಠಕ್ಕೆ ಭೇಟಿ ನೀಡಿದರು. ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾ ಮಠಕ್ಕೆ ಭೇಟಿ ನೀಡಿ ಮಠದ ಪೀಠಾಧಿಪತಿ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರೊಂದಿಗೆ ಚರ್ಚೆ ನಡೆಸಿದರು.