ETV Bharat / state

ನಂಜನಗೂಡು: ದಕ್ಷಿಣ ಕಾಶಿಯಲ್ಲಿ ಚಿಕ್ಕಜಾತ್ರಾ ಮಹೋತ್ಸವ ವೈಭವ

ದಕ್ಷಿಣ ಕಾಶಿ ನಂಜನಗೂಡು ಶ್ರೀಕಂಠೇಶ್ವರಸ್ವಾಮಿ ದೇವಾಲಯದಲ್ಲಿ ಶ್ರದ್ಧಾ ಭಕ್ತಿಯಿಂದ ಚಿಕ್ಕಜಾತ್ರಾ ರಥೋತ್ಸವ ಅದ್ದೂರಿಯಾಗಿ ನಡೆಯಿತು.

Small Jatra Mahotsava celebrated in Dakshina Kashi
ದಕ್ಷಿಣ ಕಾಶಿಯಲ್ಲಿ ಸಂಭ್ರಮದಿಂದ ಜರುಗಿದ ಚಿಕ್ಕಜಾತ್ರಾ ಮಹೋತ್ಸವ
author img

By

Published : Dec 8, 2022, 7:00 PM IST

ಮೈಸೂರು: ದಕ್ಷಿಣ ಕಾಶಿ ನಂಜನಗೂಡು ಶ್ರೀಕಂಠೇಶ್ವರಸ್ವಾಮಿ ದೇವಾಲಯದಲ್ಲಿ ಶ್ರದ್ಧಾ ಭಕ್ತಿಯಿಂದ ಚಿಕ್ಕಜಾತ್ರಾ ರಥೋತ್ಸವ ವಿಜೃಂಭಣೆಯಿಂದ ಜರುಗಿತು. ಇಂದು ಬೆಳಿಗ್ಗೆ 9.30 ರಿಂದ 10:40 ಗಂಟೆಗೆ ಸಲ್ಲುವ ಶುಭ ಮಕರ ಲಗ್ನದಲ್ಲಿ ರಥೋತ್ಸವಕ್ಕೆ ಚಾಲನೆ ನೀಡಲಾಯಿತು. ಜಿಲ್ಲಾಧಿಕಾರಿ ಡಾ. ಮಂಜುನಾಥಸ್ವಾಮಿ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಜಗದೀಶ್, ಪ್ರಧಾನ ಆಗಮಿಕರಾದ ನಾಗಚಂದ್ರ ದೀಕ್ಷಿತ್ ರಥಕ್ಕೆ ಪೂಜೆ ಸಲ್ಲಿಸಿ ಚಕ್ರಗಳಿಗೆ ಈಡುಗಾಯಿ ಒಡೆಯುವ ಮೂಲಕ ರಥೋತ್ಸವಕ್ಕೆ ಚಾಲನೆ ಕೊಟ್ಟರು.

ದೇವಾಲಯದಿಂದ ಪಾರ್ವತಿ ಸಮೇತ ಶ್ರೀ ಶ್ರೀಕಂಠೇಶ್ವರ ಸ್ವಾಮಿ, ಗಣಪತಿ ಮತ್ತು ಚಂಡಿಕೇಶ್ವರ ಹಾಗೂ ಶ್ರೀ ಮನೋನ್ಮಣಿ ಅಮ್ಮನವರ ಉತ್ಸವ ಮೂರ್ತಿಗಳನ್ನು ದೇವಾಲಯದ ಪ್ರಾಂಗಣದಲ್ಲಿರಿಸಿ ಪೂಜೆ ಸಲ್ಲಿಸಲಾಯಿತು. ಬಳಿಕ ಬಣ್ಣ ಬಣ್ಣದ ಬಾವುಟ ಹಾಗೂ ಹೂಗಳಿಂದ ಅಲಂಕರಿಸಲಾಗಿದ್ದ ರಥಗಳಲ್ಲಿ ಕ್ರಮವಾಗಿ ಗಣಪತಿ, ಚಂಡಿಕೇಶ್ವರ, ಪಾರ್ವತಿ ಸಮೇತ ಶ್ರೀಕಂಠೇಶ್ವರ ಸ್ವಾಮಿ ಮತ್ತು ಮನೋನ್ಮಣಿ ಅಮ್ಮನವರ ಉತ್ಸವ ಮೂರ್ತಿಗಳನ್ನು ಮೂರು ರಥಗಳಲ್ಲಿ ಕೂರಿಸಿ ಪಟ್ಟಣದ ರಥ ಬೀದಿಯಲ್ಲಿ ರಥೋತ್ಸವ ನಡೆಸಲಾಯಿತು.

ದಕ್ಷಿಣ ಕಾಶಿಯಲ್ಲಿ ಸಂಭ್ರಮದಿಂದ ಜರುಗಿದ ಚಿಕ್ಕಜಾತ್ರಾ ಮಹೋತ್ಸವ

ಇಂದು ವಿಶೇಷ ಹುಣ್ಣಿಮೆಯ ದಿನವೂ ಆಗಿದ್ದು ರಾಜ್ಯದ ವಿವಿಧ ಭಾಗಗಳಿಂದ ದೇವಾಲಯಕ್ಕೆ ಭಕ್ತರ ಮಹಾಪೂರವೇ ಹರಿದು ಬಂದಿತ್ತು. ಭಕ್ತರು ರಥೋತ್ಸವದಲ್ಲಿ ಪಾಲ್ಗೊಂಡು ತೇರುಗಳನ್ನು ಎಳೆಯುವ ಮೂಲಕ ಮತ್ತು ತೇರಿಗೆ ಹಣ್ಣು- ಜವನ ಎಸೆದು ತಮ್ಮ ಭಕ್ತಿ ಭಾವ ಮೆರೆದರು‌. ದೇವಾಲಯದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲಾಗಿತ್ತು.

ಇದನ್ನೂ ಓದಿ :ಶ್ರೀಕಂಠೇಶ್ವರಸ್ವಾಮಿ ಜಾತ್ರೆ: ಸಕಲ ಸಿದ್ಧತೆಗೆ ಡಿಸಿ ಸೂಚನೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.