ETV Bharat / state

ಹಳೆ ಮೈಸೂರು ಭಾಗದ ಐದಾರು ಜನ ನಾಯಕರು ಬಿಜೆಪಿಗೆ ಬರ್ತಾರೆ: ಸಚಿವ ಸೋಮಶೇಖರ್ - ಬಿಜೆಪಿಗೆ ಕಾಂಗ್ರೆಸ್​ ಮತ್ತು ಜೆಡಿಎಸ್​​ ನಾಯಕರು ಬರ್ತಾರೆ

ಈಗಾಗಲೇ ಐದಾರು ಜನ ನಾಯಕರು ಯಾವುದೇ ಷರತ್ತಿಲ್ಲದೇ ಬಿಜೆಪಿ ಸೇರಲು ಒಪ್ಪಿದ್ದಾರೆ. ಪಕ್ಷಕ್ಕೆ ಸೇರ್ಪಡೆ ಬಗ್ಗೆ ಅಧ್ಯಕ್ಷರು ಅಂತಿಮ ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದು ಸಚಿವ ಸೋಮಶೇಖರ್ ತಿಳಿಸಿದರು.

minister st somashekhar
ಸಹಕಾರ ಸಚಿವ ಎಸ್.ಟಿ.ಸೋಮಶೇಖರ್
author img

By

Published : May 14, 2022, 3:17 PM IST

ಮೈಸೂರು: ಹಳೆ ಮೈಸೂರು ಭಾಗದಲ್ಲಿ ಐದಾರು ಮಂದಿ ಘಟಾನುಘಟಿ ನಾಯಕರು ಬಿಜೆಪಿ ಸೇರ್ಪಡೆ ಆಗಲಿದ್ದು, ಕಾಂಗ್ರೆಸ್​ ಮತ್ತು ಜೆಡಿಎಸ್​​ನ ಎರಡೂ ಪಕ್ಷದವರು ಇದ್ದಾರೆ ಎಂದು ಮೈಸೂರು ಉಸ್ತುವಾರಿ ಹಾಗೂ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು.

ಶುಕ್ರವಾರದಿಂದ ವಿಧಾನ ಪರಿಷತ್ತಿನ ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣಾ ಪ್ರಚಾರ ಆರಂಭಿಸಿರುವ ಸಚಿವರು, ಸುದ್ದಿಗಾರರೊಂದಿಗೆ ಮಾತನಾಡಿ, ಬೇರೆ ಪಕ್ಷಗಳ ನಾಯಕರು ಬಿಜೆಪಿಗೆ ಸೇರುವ ಬಗ್ಗೆ ಚರ್ಚೆ ಆಗುತ್ತಿದೆ. ಈಗಾಗಲೇ ಐದಾರು ಜನ ನಾಯಕರುಗಳು ಯಾವುದೇ ಷರತ್ತಿಲ್ಲದೇ ಬಿಜೆಪಿ ಸೇರಲು ಒಪ್ಪಿದ್ದಾರೆ. ಪಕ್ಷಕ್ಕೆ ಸೇರ್ಪಡೆ ಬಗ್ಗೆ ಅಧ್ಯಕ್ಷರು ಅಂತಿಮ ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದರು.

ಸಹಕಾರ ಸಚಿವ ಎಸ್.ಟಿ.ಸೋಮಶೇಖರ್

ಕಾಂಗ್ರೆಸ್ ಇಬ್ಭಾಗವಾಗಲಿದೆ: ಕಾಂಗ್ರೆಸ್​ನಲ್ಲಿ ಆಂತರಿಕ ಬಿಕ್ಕಟ್ಟು ಉಂಟಾಗಿದೆ. ಎಐಸಿಸಿ ನಾಯಕತ್ವ ದುರ್ಬಲ ಆಗುತ್ತಿದ್ದಂತೆ ಇಲ್ಲಿ ಎಲ್ಲರೂ ನಾಯಕರು ಆಗಲು ಹೊರಟಿದ್ದಾರೆ. ಪರಿಸ್ಥಿತಿ ಇನ್ನೂ ವಿಕೋಪಕ್ಕೆ ಹೋಗಿ ಕಾಂಗ್ರೆಸ್ ಪಕ್ಷ ಇಬ್ಭಾಗವಾಗಲಿದೆ ಎಂದು ಸೋಮಶೇಖರ್​ ಭವಿಷ್ಯ ನುಡಿದರು.

ಕಾಂಗ್ರೆಸ್​ನಲ್ಲಿ ಸಿದ್ದರಾಮಯ್ಯ - ಡಿ.ಕೆ.ಶಿವಕುಮಾರ್ ಬಣ ಹೊರತು ಪಡಿಸಿ ಇನ್ನೂ ನಾಲ್ಕು ಗುಂಪುಗಳು ಇವೆ. ಒಬ್ಬರಿಗೊಬ್ಬರು ಸೇರುವುದಿಲ್ಲ. ಸಿಕ್ಕಾಗ ಕಾಟಾಚಾರಕ್ಕೆ ನುಗುತ್ತಾರೆ. ಕೆಪಿಸಿಸಿ ಅಧ್ಯಕ್ಷರು, ವಿರೋಧ ಪಕ್ಷದ ನಾಯಕರು ಒಟ್ಟಾಗಿ ಹೋಗುವ ಯಾವ ಮುನ್ಸೂಚನೆ ಇಲ್ಲ ಎಂದರು.

ಬಸವರಾಜ್​ ಬೊಮ್ಮಾಯಿ ದುರ್ಬಲ ಮುಖ್ಯಮಂತ್ರಿಯಲ್ಲ. ಎಲ್ಲರಿಗೂ ಅನುಕೂಲ ಆಗುವ ರೀತಿಯಲ್ಲಿ ಸಂಪುಟದ ಸಾಧಕ-ಬಾಧಕ ಕುರಿತು ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುತ್ತಿದ್ದಾರೆ. ಸಿದ್ದರಾಮಯ್ಯ ತಮ್ಮ ಅಸ್ತಿತ್ವ ಉಳಿಸಿಕೊಳ್ಳಲು ಸರ್ಕಾರದ ಬಗ್ಗೆಇಲ್ಲ-ಸಲ್ಲದ ಮಾತನಾಡುತ್ತಾರೆ ಎಂದು ಕಿಡಿಕಾರಿದರು.

ಇದನ್ನೂ ಓದಿ: ಭಯ ಬೇಡ.. ಟೊಮ್ಯಾಟೊ ಜ್ವರ ಒಂದು ವೈರಲ್ ಡಿಸಿಸ್ ಅಷ್ಟೇ.. ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.