ಮೈಸೂರು: ಕಾಂಗ್ರೆಸ್ನ ಅಧಿನಾಯಕಿ ಹಾಗೂ ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅಕ್ಟೋಬರ್ 6 ರಿಂದ ಭಾರತ್ ಜೋಡೋ ಯಾತ್ರೆಯಲ್ಲಿ ಭಾಗವಹಿಸಲು ಇಂದು ಮೈಸೂರಿನ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದು, ಅವರನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸ್ವಾಗತಿಸಿದರು.
ಇಂದಿನಿಂದ 2 ದಿನಗಳ ಕಾಲ ಮಡಿಕೇರಿಯಲ್ಲಿ ವಾಸ್ತವ್ಯ ಹೂಡಲಿದ್ದಾರೆ ಎಂದು ಪೂರ್ವ ನಿಯೋಜಿತ ಕಾರ್ಯಕ್ರಮವಿತ್ತು. ಆದರೆ, ಹವಾಮಾನ ವೈಪರೀತ್ಯ ಹಿನ್ನೆಲೆಯಲ್ಲಿ ಮೈಸೂರಿನಲ್ಲೇ ವಾಸ್ತವ್ಯ ಹೂಡಲಿದ್ದಾರೆ ಎಂದು ಡಿ.ಕೆ ಶಿವಕುಮಾರ್ ಮಾಹಿತಿ ನೀಡಿದ್ದು, ಹವಾಮಾನ ಸರಿಯಾದರೆ ಮಡಿಕೇರಿಗೆ ಹೋಗಲಿದ್ದು, ಸದ್ಯ ಮೈಸೂರಿನಲ್ಲೇ ವಾಸ್ತವ್ಯ ಹೂಡಲಿದ್ದಾರೆ.
ರಾಜ್ಯದಲ್ಲಿ ಕಳೆದ 4 ದಿನಗಳಿಂದ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆಯಲ್ಲಿಅಕ್ಟೋಬರ್ 6 ರಿಂದ ಸೋನಿಯಾ ಗಾಂಧಿ ಭಾವಹಿಸಲಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ಖಚಿತಪಡಿಸಿವೆ.
ಇದನ್ನೂ ಓದಿ: ಮೈಸೂರಿಗೆ ಇಂದು ಸೋನಿಯಾ ಗಾಂಧಿ: ಚಾಮುಂಡಿ ಬೆಟ್ಟದಲ್ಲಿ ಪೂಜೆ ಸಲ್ಲಿಸಿ ಮಡಿಕೇರಿಯತ್ತ ಪ್ರಯಾಣ