ಮೈಸೂರು: ದಕ್ಷಿಣ ಪದವೀಧರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಧು ಜಿ. ಮಾದೇಗೌಡ ಜಯಗಳಿಸಿದ್ದಾರೆ. ಕ್ಷೇತ್ರದ ಮತ ಎಣಿಕೆಯಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಜಿದ್ದಾಜಿದ್ದಿನ ಸ್ಪರ್ಧೆ ಏರ್ಪಟ್ಟಿತ್ತು. ಗೆಲುವಿಗೆ ನಿಗದಿಯಾದ 46,083 ಮತಗಳ ಕೋಟಾ ತಲುಪಲು 808 ಮತಗಳ ಕೊರತೆ ಎದುರಾಗಿತ್ತು.
ಮಧು ಜಿ. ಮಾದೇಗೌಡ ಪ್ರತಿಸ್ಪರ್ಧಿ ಬಿಜೆಪಿಯ ಮೈ.ವಿ.ರವಿಶಂಕರ್ ಎಲಿಮಿನೆಟ್ ಮಾಡಿ ಅಲ್ಲಿಂದ 808 ಮತ ಪಡೆಯಲಾಯಿತು. ಆ ಮೂಲಕ ನಿಗದಿತ ಕೋಟಾವನ್ನು ಕೈ ಅಭ್ಯರ್ಥಿ ತಲುಪಿದರು. ಜಯಶಾಲಿಯಾದ ಕಾಂಗ್ರೆಸ್ ಅಭ್ಯರ್ಥಿಯ ಸಂಪೂರ್ಣ ಮಾಹಿತಿಯನ್ನು ಚುನಾವಣಾ ಆಯೋಗಕ್ಕೆ ಸಲ್ಲಿಸಿದ ಚುನಾವಣಾಧಿಕಾರಿಗಳು, ಅಲ್ಲಿಂದ ಪ್ರಮಾಣಪತ್ರ ಬಂದ ನಂತರ ಕಾಂಗ್ರೆಸ್ ಅಭ್ಯರ್ಥಿಗೆ ವಿತರಿಸಿದರು.
1968ರಿಂದ ಬಿಜೆಪಿ ಹಾಗೂ ಜೆಡಿಎಸ್ ಭದ್ರಕೋಟೆಯಾಗಿದ್ದ ದಕ್ಷಿಣ ಪದವೀಧರ ಕ್ಷೇತ್ರವನ್ನು ಮೊದಲ ಬಾರಿಗೆ ಕಾಂಗ್ರೆಸ್ ಗೆದ್ದಿದೆ.
ಇದನ್ನೂ ಓದಿ: ಪರಿಷತ್ ಚುನಾವಣೆ ಫಲಿತಾಂಶ ಬಿಜೆಪಿ ಸರ್ಕಾರಕ್ಕೆ ಎಚ್ಚರಿಕೆ ಗಂಟೆ: ಪ್ರಿಯಾಂಕ್ ಖರ್ಗೆ