ETV Bharat / state

ಮೈಸೂರು ವಿಭಾಗಕ್ಕೆ ₹8600 ಕೋಟಿ ಸಾಲ.. ಸಹಕಾರ ಸಚಿವ ಎಸ್ ಟಿ ಸೋಮಶೇಖರ್ - Minister Somashekhar latest news

ನಾವು ಕೊಟ್ಟ ಸಾಲ ಯಾವ ರೀತಿ ಸದ್ಬಳಕೆಯಾಗುತ್ತದೆ ಎಂಬ ಬಗ್ಗೆ ಗಮನಹರಿಸುತ್ತೇವೆ. ಯಾವುದೇ ಕಾರಣಕ್ಕೂ ಸಾಲ ದುರ್ಬಳಕೆಯಾಗ ಕೂಡದು. ಈ ನಿಟ್ಟಿನಲ್ಲಿ ಯೋಜನೆ ರೂಪಿಸಲಾಗಿದೆ. ಸಾಲವನ್ನು ಎಲ್ಲರೂ ಪ್ರಾಮಾಣಿಕವಾಗಿ ಬಳಸಿ, ಮರುಪಾವತಿ ಮಾಡಿ ಯೋಜನೆ ಯಶಸ್ವಿಗೊಳಿಸಿ..

Mysore
Mysore
author img

By

Published : Oct 2, 2020, 5:45 PM IST

ಮೈಸೂರು: ವಿವಿಧ ಸಹಕಾರ ಕ್ಷೇತ್ರಗಳ ಮೈಸೂರು ವಿಭಾಗಕ್ಕೆ ಸುಮಾರು 8,600 ಕೋಟಿ ರೂ.ಸಾಲ ನೀಡಲು ಆರ್ಥಿಕ ಸ್ಪಂದನ ಕಾರ್ಯಕ್ರಮದಡಿ ಯೋಜನೆ ರೂಪಿಸಲಾಗಿದೆ ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್ ಟಿ ಸೋಮಶೇಖರ್ ಹೇಳಿದರು.

ವಿಭಾಗೀಯ ಮಟ್ಟದ ಆರ್ಥಿಕ ಸ್ಪಂದನ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ಕೋವಿಡ್ ಸಂದರ್ಭದಲ್ಲಿ ಆರ್ಥಿಕ ಸ್ಪಂದನ ಕಾರ್ಯಕ್ರಮ ಮಾಡಬೇಕು ಎಂಬುದು ಮುಖ್ಯಮಂತ್ರಿಗಳ ಉದ್ದೇಶವಾಗಿದೆ. ಈಗಾಗಲೇ ಬೆಂಗಳೂರು ವಿಭಾಗಕ್ಕೆ ಚಾಲನೆ ನೀಡಲಾಗಿದೆ ಎಂದು ತಿಳಿಸಿದರು.

ಆತ್ಮನಿರ್ಭರ ಯೋಜನೆ ಹಾಗೂ ರಾಜ್ಯ ಸರ್ಕಾರದ ವಿವಿಧ ಯೋಜನೆಯಡಿ 39,300 ಕೋಟಿ ರೂ. ಹಣವನ್ನು ಆರ್ಥಿಕ ಸ್ಪಂದನದ ಮೂಲಕ ರೈತರು, ವ್ಯಾಪಾರಸ್ಥರು, ಸ್ವಸಹಾಯ ಸಂಘಗಳು, ಹಾಲು ಉತ್ಪಾದಕ ಸಂಘಗಳು, ಸಣ್ಣ- ದೊಡ್ಡ ಉದ್ದಿಮೆಗಳಿಗೆ ಸಾಲ ನೀಡಲಾಗುತ್ತಿದೆ. ಇದೊಂದು ಅತ್ಯಂತ ಯಶಸ್ವಿ ಕಾರ್ಯಕ್ರಮ ಎಂದು ತಿಳಿಸಿದರು.

ಸಾಲದ ದುರ್ಬಳಕೆಯಾಗಬಾರದು : ನಾವು ಕೊಟ್ಟ ಸಾಲ ಯಾವ ರೀತಿ ಸದ್ಬಳಕೆಯಾಗುತ್ತದೆ ಎಂಬ ಬಗ್ಗೆ ಗಮನಹರಿಸುತ್ತೇವೆ. ಯಾವುದೇ ಕಾರಣಕ್ಕೂ ಸಾಲ ದುರ್ಬಳಕೆಯಾಗಕೂಡದು. ಈ ನಿಟ್ಟಿನಲ್ಲಿ ಯೋಜನೆ ರೂಪಿಸಲಾಗಿದೆ. ಸಾಲವನ್ನು ಎಲ್ಲರೂ ಪ್ರಾಮಾಣಿಕವಾಗಿ ಬಳಸಿ, ಮರುಪಾವತಿ ಮಾಡಿ ಯೋಜನೆ ಯಶಸ್ವಿಗೊಳಿಸಿ ಎಂದು ತಿಳಿಸಿದರು.

ಸಾಕ್ಷ್ಯಚಿತ್ರ ಪ್ರದರ್ಶನ : ಆತ್ಮನಿರ್ಭರ ಯೋಜನೆಯಡಿ ಹಮ್ಮಿಕೊಳ್ಳಲಾಗಿರುವ ಆರ್ಥಿಕ ಸ್ಪಂದನ ಕಾರ್ಯಕ್ರಮದ ಪ್ರಯುಕ್ತ ಸಹಕಾರ ಪತ್ರಿಕೆ ಹೊರತಂದ ವಿಶೇಷ ಸಂಚಿಕೆಯನ್ನು ಅನಾವರಣಗೊಳಿಸಲಾಯಿತು. ಬಳಿಕ ಸಹಕಾರ ಕ್ಷೇತ್ರ ನಡೆದುಬಂದ ಹಾದಿ ಬಗ್ಗೆ ಕಿರು ಸಾಕ್ಷ್ಯಚಿತ್ರವನ್ನು ಪ್ರಸಾರ ಮಾಡಲಾಯಿತು.

ಫಲಾನುಭವಿಗಳಿಗೆ ಸಾಲದ ಚೆಕ್ ವಿತರಣೆ : ರೈತರು, ಸ್ವಸಹಾಯ ಸಂಘಗಳು, ಸಣ್ಣ ಉದ್ದಿಮೆಗಳು, ವ್ಯಾಪಾರ ಸೇರಿ ವಿವಿಧ ಕ್ಷೇತ್ರಗಳ ಮೈಸೂರು ವಿಭಾಗದ 8 ಜಿಲ್ಲೆಗಳ ಫಲಾನುಭವಿಗಳಿಗೆ ಸಾಂಕೇತಿಕ ಸಾಲದ ಚೆಕ್ ವಿತರಣೆ ಮಾಡಲಾಯಿತು.

ಸಹಕಾರ ಸಂಘಗಳ ವಿವಿಧ ಯೋಜನೆಯಡಿ ಸಾಲ ನೀಡಿಕೆ : ಬಡವರ ಬಂಧು, ಕೋಲಿ ಸಾಕಾಣಿಕೆ, ವಾಹನ ಸಾಲ, ಟ್ರ್ಯಾಕ್ಟರ್ ಸಾಲ, ಹಸು ಸಾಕಾಣಿಕ ಸಾಲ ಸೇರಿ ವಿವಿಧ ಯೋಜನೆಗಳಡಿ ಸಹಕಾರ ಸಂಘಗಳಿಂದ ನೀಡುವ ಸಾಲ ಪ್ರಕ್ರಿಯೆಗೆ ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರು ಚಾಲನೆ ನೀಡಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.