ಮೈಸೂರು: ಅಭಿರಾಮ್ ಜಿ.ಶಂಕರ್ ತರಬೇತಿಗಾಗಿ ಹೋಗಬೇಕು ಎಂದು ಕೋರಿಕೊಂಡಿದ್ದು, ಈ ಕಾರಣಕ್ಕಾಗಿ ಅವರನ್ನು ಸರ್ಕಾರ ವರ್ಗಾವಣೆ ಮಾಡಿದೆ ಎಂದು ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದರು.
ವರ್ಗಾವಣೆಯನ್ನು ನಾವು ಮಾಡಿಲ್ಲ. 15 ದಿನಗಳ ಹಿಂದೆಯೇ ಅವರು ಮಸ್ಸೂರಿಗೆ 2 ವರ್ಷಗಳ ಅವಧಿಗೆ ತರಬೇತಿಗಾಗಿ ಹೋಗಬೇಕು. ನನ್ನನ್ನು ಬದಲಾವಣೆ ಮಾಡಿ ಎಂದು ಕೇಳಿದ್ದರು. ಇದನ್ನು ಮುಖ್ಯಮಂತ್ರಿಗಳ ಗಮನಕ್ಕೆ ತಂದು ವರ್ಗಾವಣೆ ಮಾಡಲಾಗಿದೆ ಎಂದು ಸ್ಪಷ್ಟನೆ ಕೊಟ್ಟರು.