ETV Bharat / state

ಕೋವಿಡ್‌ ವೇಳೆ ಅಧಿಕಾರಿಗಳು ಎಚ್ಚರಿಕೆಯಿಂದ ಕೆಲಸ ಮಾಡಿ: ಸಚಿವ ಎಸ್.ಟಿ.ಸೋಮಶೇಖರ್

ಸರ್ಕಾರದ ಆದೇಶದಂತೆ ಮೇ 1 ರಿಂದ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲಾಗುತ್ತದೆ. ಎಲ್ಲರಿಗೂ ಉಚಿತ ಲಸಿಕೆ ನೀಡಲು ಸರ್ಕಾರ 2,600 ಕೋಟಿ ರೂ. ವಿನಿಯೋಗಿಸುತ್ತಿದೆ. ಕೋವಿಡ್ ಸ್ಥಿತಿಗತಿ ಮತ್ತು ಬೆಳವಣಿಗೆಯ ಕುರಿತು ಪ್ರತಿದಿನ ಸಾರ್ವಜನಿಕರಿಗೆ ಮಾಹಿತಿ ತಲುಪಿಸುವ ಕ್ರಮ ಕೈಗೊಳ್ಳಿ ಎಂದು ಸಚಿವ ಎಸ್.ಟಿ.ಸೋಮಶೇಖರ್ ಅಧಿಕಾರಿಗಳಿಗೆ ಸೂಚಿಸಿದರು.

Mysore
ಕೋವಿಡ್ ವಿಚಾರದಲ್ಲಿ ಅಧಿಕಾರಿಗಳು ಎಚ್ಚರಿಕೆಯಿಂದ ಕೆಲಸ ಮಾಡಬೇಕು: ಸಚಿವ ಎಸ್.ಟಿ.ಸೋಮಶೇಖರ್
author img

By

Published : Apr 30, 2021, 7:02 AM IST

ಮೈಸೂರು: ಕೋವಿಡ್ ವಿಚಾರದಲ್ಲಿ ಒಳ್ಳೆಯ ಕೆಲಸ ಮಾಡಿ. ಸ್ವಲ್ಪ ಎಡವಿದರೂ ತಪ್ಪು ಸಂದೇಶ ಹೋಗುತ್ತದೆ. ಆದ್ದರಿಂದ ಅಧಿಕಾರಿಗಳು ಎಚ್ಚರಿಕೆಯಿಂದ ಕೆಲಸ ನಿರ್ವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಸೂಚಿಸಿದ್ದಾರೆ.

ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಕೋವಿಡ್ ಸ್ಥಿತಿಗತಿ ಬಗ್ಗೆ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಸಭೆ ನಡೆಸಿ ಅವರು ಮಾತನಾಡಿದರು.

ಈವರೆಗೆ ಜಿಲ್ಲೆಯ 9 ಕ್ಷೇತ್ರಗಳಲ್ಲಿ ಪರಿಶೀಲನಾ ಸಭೆ ನಡೆಸಿದ್ದೇನೆ. ಬೆಂಗಳೂರು ಹಾಗು ಅಕ್ಕಪಕ್ಕದ ಜಿಲ್ಲೆಯ ಜನರು ಮೈಸೂರಿಗೆ ಬರುತ್ತಿರುವ ಕಾರಣ ಕೋವಿಡ್ ಸಂಖ್ಯೆ ಹೆಚ್ಚಿದೆ. ಮೈಸೂರು ತಾಲೂಕು ಕಠಿಣ ಸ್ಥಿತಿ ತಲುಪಿದೆ.

ಸರ್ಕಾರದ ಆದೇಶದಂತೆ ಮೇ 1 ರಿಂದ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲಾಗುತ್ತದೆ. ಎಲ್ಲರಿಗೂ ಉಚಿತ ಲಸಿಕೆ ನೀಡಲು ಸರ್ಕಾರ 2,600 ಕೋಟಿ ರೂ. ವಿನಿಯೋಗಿಸುತ್ತಿದೆ. ಕೋವಿಡ್ ಸ್ಥಿತಿಗತಿ ಮತ್ತು ಬೆಳವಣಿಗೆಯ ಕುರಿತು ಪ್ರತಿದಿನ ಸಾರ್ವಜನಿಕರಿಗೆ ಮಾಹಿತಿ ತಲುಪಿಸುವ ಕ್ರಮ ಕೈಗೊಳ್ಳಿ ಎಂದು ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.

ಎಪಿಎಂಸಿಯಲ್ಲಿ ಲೋಡಿಂಗ್ ಹಾಗೂ ಅನ್‌ಲೋಡಿಂಗ್ ಮಾಡಲು ಇನ್ನೂ ಹೆಚ್ಚಿನ ಸಮಯ ಬೇಕಾಗುವುದರಿಂದ ಬೆಳಗ್ಗೆ 10 ರವರೆಗೆ ನೀಡಿರುವ ಅವಕಾಶವನ್ನು 12 ಗಂಟೆವರೆಗೆ ವಿಸ್ತರಿಸುವಂತೆ ರೈತರು, ವರ್ತಕರು ಕೇಳುತ್ತಿದ್ದಾರೆ ಎಂದು ತಹಶೀಲ್ದಾರ್​ ಮಾಹಿತಿ ನೀಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು ಪರಿಸ್ಥಿತಿಯ ಬಗ್ಗೆ ರೈತರಿಗೆ ಮನವರಿಕೆ ಮಾಡಿ ಎಂದರು.

ಇದನ್ನೂ ಓದಿ: ಸಚಿವ ಉಮೇಶ್ ಕತ್ತಿ ಈ ರೀತಿ ಹೇಳಿಕೆ ನೀಡುವುದು ಸರಿಯಲ್ಲ: ಶಾಸಕ ಪ್ರೋ. ಲಿಂಗಣ್ಣ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.