ETV Bharat / state

ಅತ್ಯಾಚಾರ ಸಂತ್ರಸ್ತೆ ಆರೋಗ್ಯ ಸ್ಥಿರ.. ಇಂಥಾ ದುರ್ಘಟನೆಗಳು ಮರುಕಳಿಸದಂತೆ ಕ್ರಮ: ಸಚಿವ ಸೋಮಶೇಖರ್ - ಎಸ್.ಟಿ.ಸೋಮಶೇಖರ್

ಅತ್ಯಾಚಾರ ಸಂತ್ರಸ್ತೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆರೋಗ್ಯ ಸ್ಥಿರವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ಹೇಳಿದ್ದಾರೆ.

ಸಚಿವ ಸೋಮಶೇಖರ್
ಸಚಿವ ಸೋಮಶೇಖರ್
author img

By

Published : Aug 25, 2021, 7:50 PM IST

ಮೈಸೂರು: ಸಾಮೂಹಿಕ ಅತ್ಯಾಚಾರಕ್ಕೊಳಗಾಗಿರುವ ಸಂತ್ರಸ್ತೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆರೋಗ್ಯವಾಗಿದ್ದಾಳೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ತಿಳಿಸಿದ್ದಾರೆ.

ಇಂಥ ದುರ್ಘಟನೆಗಳು ಮರುಕಳಿಸದಂತೆ ಕ್ರಮ: ಎಸ್​ ಟಿ.ಸೋಮಶೇಖರ್

ಹಿರಿಯ ಪೊಲೀಸ್ ಅಧಿಕಾರಿಗಳ ಜತೆ ಸಭೆ ನಡೆಸಿ ಮಾತನಾಡಿದ ಸಚಿವ, ಘಟನೆಯ ತನಿಖೆಗೆ ಎಡಿಜಿಪಿ ಪ್ರತಾಪ್ ರೆಡ್ಡಿ ನೇತೃತ್ವದಲ್ಲಿ ತನಿಖಾ ತಂಡ ರಚನೆ ಮಾಡಲಾಗಿದೆ. ಶೀಘ್ರವೇ ಆರೋಪಿಗಳನ್ನು ಬಂಧಿಸಲಾಗುವುದು ಎಂದು ಹೇಳಿದರು.

ಯುವತಿ ಜತೆಗೆ ಇದ್ದ ಯುವಕನಿಂದ ಮಾಹಿತಿ ಸಂಗ್ರಹಿಸಿ ಎಫ್​ಐಆರ್ ದಾಖಲಿಸಲಾಗಿದೆ. ಘಟನೆಯ ಎಲ್ಲ ವಿವರಗಳನ್ನು ಸಿಎಂ ಹಾಗೂ ಗೃಹ ಸಚಿವರಿಗೆ ತಿಳಿಸಲಾಗಿದೆ. ಮಾಧ್ಯಮಗಳ ಮುಂದೆ ಎಲ್ಲಾ ವಿಚಾರಗಳನ್ನು ಬಹಿರಂಗ ಪಡಿಸಲು ಸಾಧ್ಯವಿಲ್ಲ. ಮೈಸೂರಿನಲ್ಲಿ ಇಂತಹ ದುರ್ಘಟನೆಗಳು ಮರುಕಳಿಸದಂತೆ ಸೂಕ್ತ ಭದ್ರತಾ ವ್ಯವಸ್ಥೆ ಕೈಗೊಳ್ಳಲಾಗುವುದು ಎಂದರು.

ಇದನ್ನೂ ಓದಿ: FIR ದಾಖಲಾಗಿದೆ, ಶೀಘ್ರವೇ ಆರೋಪಿಗಳ ಬಂಧನ: ಪೊಲೀಸ್ ಆಯುಕ್ತ ಚಂದ್ರಗುಪ್ತ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.