ETV Bharat / state

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಮುಗಿದ ಅಧ್ಯಾಯ: ಬಿ.ವೈ ವಿಜಯೇಂದ್ರ - ಬಿ.ವೈ.ವಿಜಯೇಂದ್ರ ಹೇಳಿ

ನಾನು ಚುನಾವಣೆಗೆ ನಿಲ್ಲಬೇಕೋ ಅಥವಾ ಬೇಡವೋ.. ನಿಲ್ಲುವುದಾದರೆ ಯಾವ ಕ್ಷೇತ್ರದಿಂದ ನಿಲ್ಲಬೇಕು ಎಂಬುದನ್ನು ಎರಡು ವರ್ಷಗಳ ನಂತರ ಹೈಕಮಾಂಡ್ ತೀರ್ಮಾನ ಮಾಡುತ್ತದೆ ಎಂದು ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.

Statement of BJP state vice president BY Vijayendra in Mysore
ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿಕೆ
author img

By

Published : Jun 30, 2021, 12:17 PM IST

ಮೈಸೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಮುಗಿದ ಅಧ್ಯಾಯ. ಈ ಬಗ್ಗೆ ಪಕ್ಷದ ಹೈಕಮಾಂಡ್ ಸ್ಪಷ್ಟಪಡಿಸಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಇಂದು ಮೃಗಾಲಯದ ಸಿಬ್ಬಂದಿಗೆ ಫುಡ್ ಕಿಟ್ ವಿತರಿಸಲು ಆಗಮಿಸಿದ ವೇಳೆ ಅವರು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು.

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಮುಗಿದ ಅಧ್ಯಾಯ. ಹೈಕಮಾಂಡ್ ಈಗಾಗಲೇ ಈ ಬಗ್ಗೆ ಸ್ಪಷ್ಟಪಡಿಸಿದೆ. ಪದೇ ಪದೇ ಚರ್ಚೆ ಬೇಡ, ಯಾರಾದರು ದೆಹಲಿಗೆ ಹೋಗಿದ್ದರೆ ಅದು ಅವರ ವೈಯಕ್ತಿಕ ವಿಚಾರ. ದೆಹಲಿಗೆ ಹೋದ ಕೂಡಲೇ ಅದಕ್ಕೆ ರಾಜಕೀಯ ಬಣ್ಣ ಹಚ್ಚುವುದು ಬೇಡ. ಇನ್ನೂ 2 ವರ್ಷ ಯಡಿಯೂರಪ್ಪ ಅವರೇ ರಾಜ್ಯದ ಮುಖ್ಯಮಂತ್ರಿಯಾಗಿ ಇರುತ್ತಾರೆ. ಈ ಬಗ್ಗೆ ಯಾರಿಗೂ ಗೊಂದಲ ಬೇಡ ಎಂದು ಅವರು ಹೇಳಿದರು.

ನಾನು ಚುನಾವಣೆಗೆ ನಿಲ್ಲಬೇಕೋ ಅಥವಾ ಬೇಡವೋ, ನಿಲ್ಲುವುದಾದರೆ ಯಾವ ಕ್ಷೇತ್ರದಿಂದ ನಿಲ್ಲಬೇಕು ಎಂಬುದನ್ನು ಎರಡು ವರ್ಷಗಳ ನಂತರ ಪಕ್ಷದ ವರಿಷ್ಠರು ತೀರ್ಮಾನ ಮಾಡುತ್ತಾರೆ. ಅಲ್ಲಿಯವರೆಗೆ ಪಕ್ಷ ಸಂಘಟನೆ ಮಾಡಲು ಇಡಿ ರಾಜ್ಯ ಸುತ್ತುವುದು ನನ್ನ ಕೆಲಸ. ಪಕ್ಷ ಕೊಟ್ಟಿರುವ ಜವಾಬ್ದಾರಿಯನ್ನು ನಾನು ಪಕ್ಷ ಸಂಘಟನೆಗಾಗಿ ಮಾಡುತ್ತೇನೆ. ಇನ್ನು, ವರುಣ ಕ್ಷೇತ್ರದ ಕಾರ್ಯಕರ್ತರ ಜೊತೆ ನಿರಂತರ ಸಂಪರ್ಕ ಇರುವುದು ನಿಜ ಎಂದು ಇದೇ ಸಂದರ್ಭದಲ್ಲಿ ಬಿ.ವೈ.ವಿಜಯೇಂದ್ರ ತಿಳಿಸಿದರು.

ಇದನ್ನೂ ಓದಿ: ನಾಯಕತ್ವ ಬದಲಾವಣೆ, ಸಂಪುಟ ವಿಸ್ತರಣೆ ಸಂಕಷ್ಟ: ಬಿಜೆಪಿಯಲ್ಲಿ ಮುಗಿಯದ ಗೊಂದಲ

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.